Cyclone Biparjoy: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ, ಹವಾಮಾನ ಇಲಾಖೆ ಮುನ್ಸೂಚನೆ!

By Ravi Janekal  |  First Published Jun 9, 2023, 8:51 AM IST

ಅರಬ್ಬಿ ಸಮುದ್ರದಲ್ಲಿ ರೂಪಗೊಂಡ ಬಿಪರ್‌ಜಾಯ್ ಚಂಡ ಮಾರುತ ತೀವ್ರ ಸ್ವರೂಪ ಪಡೆದಿದ್ದು ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬೆಂಗಳೂರು (ಜೂ.9) ಅರಬ್ಬಿ ಸಮುದ್ರದಲ್ಲಿ ರೂಪಗೊಂಡ ಬಿಪರ್‌ಜಾಯ್ ಚಂಡ ಮಾರುತ ತೀವ್ರ ಸ್ವರೂಪ ಪಡೆದಿದ್ದು ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಉಂಟಾಗಿದ್ದ ವಾಯುಭಾರ ಕುಸಿತದಿಂದಾಗಿ ಚಂಡಮಾರುತವಾಗಿ ಬದಲಾಗಿದೆ ಈ ಹಿನ್ನೆಲೆ ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಲಕ್ಷದ್ವೀಪ ಸಮೂಹಗಳಲ್ಲಿ ಭಾರಿ ಮಳೆ ಸಾಧ್ಯತೆಯಿದೆ. ಕರ್ನಾಟಕದ ಉತ್ತರ ಒಳನಾಡು, ತಮಿಳುನಾಡು, ಆಂಧ್ರಪ್ರದೇಶಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಣಿಪುರ, ಮಿಜೋರಾಂ, ಅರುಣಾಚಲಪ್ರದೇಶ, ಅಸ್ಸಾಂ, ಮೇಘಾಲಯ, ರಾಜಸ್ಥಾನ ಭಾಗದಲ್ಲಿ ಮಳೆಯಾಗುವ ಸಾಧ್ಯತೆ

Tap to resize

Latest Videos

 

ಕರ್ನಾಟಕಕ್ಕೆ ನಾಡಿದ್ದು ಮುಂಗಾರು ಪ್ರವೇಶ: ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆ

ಇಂದಿನಿಂದ ರಾಜ್ಯಕ್ಕೆ ಮಾನ್ಸೂನ್ ಎಂಟ್ರಿ:

ಮಾನ್ಸೂನ್ ಆರಂಭವಾಗಿದ್ದರೂ ರಾಜ್ಯದಲ್ಲಿ ಮಲೆನಾಡು ಉತ್ತರ ಒಳನಾಡು ಭಾಗದಲ್ಲಿ ಮಳೆಯ ಕೊರತೆ ಎದುರಾಗಿತ್ತು. ಇದೀಗ ರಾಜ್ಯಕ್ಕೆ ಮಾನ್ಸೂನ್ ಎಂಟ್ರಿಯಾಗಿದ್ದು ರಾಜ್ಯದ ಹಲವೆಡೆ ಭಾರೀ ಮಳೆಯಾಗಲಿದೆ. 

ಬಿಪರ್‌ಜಾಯ್ ಚಂಡ ಮಾರುತದಿಂದಾಗಿ ರಾಜ್ಯ 9 ಜಿಲ್ಲೆಗಳಿಗೆ ತಟ್ಟಲಿದೆ ಸೈಕ್ಲೋನ್ ಬಿಸಿ. ಮುಂದಿನ 3 ದಿನಗಳ ಕಾಲ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗುಸಹಿತ ಮಳೆ ಸಾಧ್ಯತೆ. ರಾಜ್ಯದಾದ್ಯಂತ ಒಂದೆರಡು ಕಡೆಗಳಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚಿನ ಸಾಧ್ಯತೆ ಇದ್ದು ಈ ವೇಳೆ ಗಾಳಿಯ ವೇಗವು ಘಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶವು ರಾಜ್ಯದಾದ್ಯಂತ ಕೆಲವು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಷಿಯಸ್ ಹೆಚ್ಚಾಗುವ ಸಾಧ್ಯತೆ.

ಮೀನುಗಾರರಿಗೆ ಎಚ್ಚರಿಕೆ:

ಬಿಪರ್‌ಜಾಯ್ ಚಂಡ ಮಾರುತ ಪರಿಣಾಮ ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ. ಇಂದು ಮತ್ತು ನಾಳೆ ಕರ್ನಾಟಕ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 35-45 ಕಿಮೀ ಇಂದ 55 ಕಿಮೀ ವೇಗದಲ್ಲಿ ಬೀಸುವ ಸಾಧ್ಯತೆ. ಈ ಹಿನ್ನೆಲೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕೇರಳಕ್ಕೆ ಮಾನ್ಸೂನ್‌ ಎಂಟ್ರಿ, ಕೆಲವೇ ಸಮಯದಲ್ಲಿ ಕರ್ನಾಟಕ-ತಮಿಳುನಾಡಿಗೂ ಪ್ರವೇಶ!

ಇನ್ನೂ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲೂ ಮಳೆಯಾಗಲಿದ್ದು, ಇಂದು ಮತ್ತು ನಾಳೆ  ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು ಸಂಜೆ ಅಥವಾ ರಾತ್ರಿಯ ವೇಳೆಗೆ ಗುಡುಗುಸಹಿತ ಮಳೆಯಾಗುವ ಸಾಧ್ಯತೆಯಿದೆ.

click me!