ಡಿ.ಕೆ. ಶಿವಕುಮಾರ್ ಮೊಣಕೈಗೆ ತುಪ್ಪ ಸವರಿದ ಹೈಕೋರ್ಟ್; ಸಿಬಿಐ, ಯತ್ನಾಳ್ ಅರ್ಜಿ ವಜಾ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಸಿಬಿಐ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ವಜಾಗೊಳಿಸಿ, ಪ್ರಕರಣವು ಸುಪ್ರೀಂ ಕೋರ್ಟ್ ವ್ಯಾಪ್ತಿಗೆ ಬರುತ್ತದೆ ಎಂದು ತಿಳಿಸಿದೆ.


ಬೆಂಗಳೂರು (ಆ.29): ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯು ಹೈಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ. ಸಿಬಿಐ ಮತ್ತು ಬಸವನಗೌಡ ಪಾಟೀಲ್ ಯತ್ನಾಳ್ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ವಜಾಗೊಳಿಸಲಾಗುತ್ತಿದ್ದು, ನೀವು ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಬಗೆಹರಿಸಿಕೊಳ್ಳುವಂತೆ ಆದೇಶ ಹೊರಡಿಸಿದೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐಗೆ ವಹಿಸಿದ್ದನ್ನು ಕೈಬಿಡಲು ರಾಜ್ಯ ಸಚಿವ ಸಂಪುಟದಿಂದ ನಿರ್ಣಯ ಕೈಗೊಳ್ಳಲಾಗಿತ್ತು. ಜೊತೆಗೆ, ಈ ಪ್ರಕರಣವನ್ನು ಲೋಕಾಯುಕ್ತಕ್ಕೆ ನೀಡಲು ನಿರ್ಧರಿಸಲಾಗಿತ್ತು. ಆದರೆ, ಲೋಕಾಯುಕ್ತ ತನಿಖೆಗೆ ಕೊಡುವ ನಿರ್ಣಯವನ್ನು ಪ್ರಶ್ನಿಸಿ ಸಿಬಿಐ ಹಾಗೂ ರಾಜ್ಯ ಸರ್ಕಾರ ಕೈಗೊಂಡ ನಿರ್ಣಯದ ವಿರುದ್ಧ ಬಿಜೆಪಿ ನಾಯಕ ಬಸವನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿದ್ದರು. ಇದನ್ನು ವಿಚಾರಣೆ ಮಾಡಿದ್ದ ನ್ಯಾಯಾಲಯದ ಆ.29ಕ್ಕೆ ಆದೇಶ ಕಾಯ್ದಿರಿಸಿತ್ತು. ಇಂದು ಆದೇಶ ನೀಡಿದ ಹೈಕೋರ್ಟ್ ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಹಾಗೂ ಯತ್ನಾಳ್ ಸಲ್ಲಿಕೆ ಮಾಡಿದ್ದ ಅರ್ಜಿಗಳನ್ನು ವಜಾಗೊಳಿಸಿದೆ. ಈ ಪ್ರಕರಣ ಹೈಕೋರ್ಟ್ ವ್ಯಾಪ್ತಿಗೆ ಬರುವುದಿಲ್ಲ, ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಬಗೆಹರಿಸಿಕೊಳ್ಳುವಂತೆ ಆದೇಶ ನೀಡಿದೆ.

Latest Videos

ಮುಡಾ ಕೇಸ್ : ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಅರ್ಜಿ ವಿಚಾರಣೆ ಆ.31ಕ್ಕೆ ಮುಂದೂಡಿಕೆ!

ಡಿಕೆಶಿ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲೂ ಹೋರಾಟ ಮುಂದುವರಿಕೆ:
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಸಂಬಂಧ ಡಿಸಿಎಂ ಡಿ.ಕೆ.ಶಿವಕುಮಾರ್​ ವಿರುದ್ಧ ಸಿಬಿಐ ತನಿಖೆ ನಡೆಸಲು ನೀಡಿದ್ದ ಸಮ್ಮತ್ತಿ ಹಿಂಪಡೆದಿದ್ದ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ನಾವು ಹಾಕಿದ್ದ ದಾವೆಯನ್ನು ಘನ ನ್ಯಾಯಾಲಯವು ಇದರಲ್ಲಿ ಸಾಂವಿಧಾನಿಕ ಪ್ರಶ್ನೆಗಳು ಉದ್ಭವಿಸುವ ಕಾರಣ ನಮ್ಮ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ. ಅಡಿಗ ಪೀಠವು ತಿರಸ್ಕರಿಸಿದೆ. ಘನ ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತಾ, ಸರ್ವೋಚ್ಚ ನ್ಯಾಯಾಲಯದಲ್ಲಿ ನಾವು ಇದನ್ನು ಪ್ರಶ್ನಿಸುತ್ತೇವೆ. ಭ್ರಷ್ಟಾಚಾರದ ವಿರುದ್ಧ ನಮ್ಮ ಸಮರ ಇಲ್ಲಿಗೆ ನಿಲ್ಲುವುದಿಲ್ಲ. ಈ ಪ್ರಕರಣವನ್ನು ತಾರ್ಕಿಕ ಅಂತ್ಯಕ್ಕೆ ನಾವು ಕೊಂಡೊಯ್ಯುತ್ತೇವೆ.
- ಬಸವನಗೌಡ ಪಾಟೀಲ್ ಯತ್ನಾಳ್, ಶಾಸಕ

click me!