Dakshina kannada: ಮಕ್ಕಳನ್ನು ಅಧ್ಯಯನ ಪ್ರವಾಸಕ್ಕೆ ಟಿಪ್ಪರಲ್ಲಿ ಕರೆದೊಯ್ದ ಹೆಡ್‌ಮಾಸ್ಟರ್‌ ಅಮಾನತು!

Kannadaprabha News, Ravi Janekal |   | Kannada Prabha
Published : Feb 13, 2026, 07:38 AM IST
Dakshina Kannada Headmaster Suspended for Taking Students on Study Tour in Tipper Truck

ಸಾರಾಂಶ

ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಸರ್ಕಾರಿ ಶಾಲೆಯ ಮಕ್ಕಳಿಗೆ ಟಿಪ್ಪರ್ ಹಾಗೂ ಪಿಕಪ್ ವಾಹನದಲ್ಲಿ ಅಧ್ಯಯನ ಪ್ರವಾಸ ಕರೆದೊಯ್ದ ಘಟನೆ ನಡೆದಿದೆ. ಈ ವಿಡಿಯೋ ವೈರಲ್ ಆದ ಬಳಿಕ, ಶಿಕ್ಷಣ ಇಲಾಖೆ ತನಿಖೆ ನಡೆಸಿ ಪ್ರಭಾರ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ.

ಬೆಳ್ತಂಗಡಿ (ಫೆ.13): ಪಿಕಪ್ ಹಾಗೂ ಟಿಪ್ಪರ್‌ನಲ್ಲಿ ಶಾಲಾ ಮಕ್ಕಳನ್ನು ಕುರಿಗಳಂತೆ ತುಂಬಿಕೊಂಡು ಅಧ್ಯಯನ ಪ್ರವಾಸಕ್ಕೆ ಕರೆದುಕೊಂಡು ಹೋದ ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತು ಮಾಡಿರುವ ವಿದ್ಯಮಾನ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ನಡೆದಿದೆ.

ಟಿಪ್ಪರ್‌ ವಾಹನಕ್ಕೆ ಮೂರು ಸಾವಿರ ಬಾಡಿಗೆ!

ಫೆ.9ರಂದು ಪಿಕಪ್ ಮತ್ತು ಟಿಪ್ಪರ್ ವಾಹನಗಳಿಗೆ ಮೂರು ಸಾವಿರ ಬಾಡಿಗೆ ನೀಡಿ ಅಧ್ಯಯನ ಪ್ರವಾಸದ ಹೆಸರಿನಲ್ಲಿ ಬಳಂಜ ಗ್ರಾಮದ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳನ್ನು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ನೇತೃತ್ವದಲ್ಲಿ ಸಮೀಪದ ಫಾರ್ಮ್‌ಗೆ ಕರೆದುಕೊಂಡು ಹೋಗಲಾಗಿತ್ತು.

ಇದನ್ನೂ ಓದಿ: ಸ್ಕೂಲ್‌ನಲ್ಲಿ ಚಾಕೋಲೇಟ್ ಆಸೆ ತೋರಿಸಿ ಬಾಲಕಿಯನ್ನ ಕಾರಲ್ಲಿ ಕರೆದೊಯ್ದ ಶಿಕ್ಷಕ; ಮುಂದಾಗಿದ್ದು ಹೇಯ ಕೃತ್ಯ!

ಶಿಕ್ಷಕ ಅಮಾನತ್ತು

ಅದರ ವಿಡಿಯೋ ಸಹ ವೈರಲ್‌ ಆಗಿತ್ತು. ಫೆ.12 ರಂದು ಬೆಳ್ತಂಗಡಿ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಬಳಂಜ ಶಾಲೆಗೆ ಭೇಟಿ ನೀಡಿ ವರದಿ ಪಡೆದು ಅದನ್ನು ಮಂಗಳೂರು ಡಿಡಿಪಿಐ ಶಶಿಧರ್.ಜಿ.ಎಸ್.ಅವರಿಗೆ ವರದಿ ಸಲ್ಲಿಸಿದ್ದರು. ಬಳಿಕ ಡಿಡಿಪಿಐ ಅವರು ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅವರನ್ನು ಫೆ.12 ರಂದು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಕನ್ನಡಪ್ರಭ 'ರೈತ ರತ್ನ'ನ ತೋಟಕ್ಕೆ ಬಿವೈವಿ ಭೇಟಿ: ಧನಪಾಲ ಯಲ್ಲಟ್ಟಿಯ ಬಹುಬೆಳೆ ಸಮೃದ್ಧಿಗೆ ವಿಜಯೇಂದ್ರ ಫಿದಾ!
ಬೆಂಗಳೂರು ರೇಸ್‌ಕೋರ್ಸ್‌ ಕುಣಿಗಲ್‌ಗೆ ಶಿಫ್ಟ್‌ : ಸಂಪುಟ