ಚಿಂತಾಮಣಿಯಲ್ಲಿ ವಕ್ಫ್‌ ಸಂಘರ್ಷ: ಜಮೀನು ಉಳುಮೆ ಮಾಡುತ್ತಿದ್ದ ದಲಿತರ ಟ್ರ್ಯಾಕ್ಟರ್‌ ಜಪ್ತಿ!

By Kannadaprabha News  |  First Published Nov 16, 2024, 5:30 AM IST

ರಾಜ್ಯಾದ್ಯಂತ ವಕ್ಫ್‌ ಆಸ್ತಿಗೆ ಸಂಬಂಧಿಸಿ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಇದೀಗ ಏಕಾಏಕಿ ಜಮೀನಿಗೆ ಹಾಕಿದ ಬೇಲಿ ಕಿತ್ತು ಹಾಕಿದ ರೈತರು, ಟ್ರಲ್‌ಯಾಕ್ಟ್‌ ಮೂಲಕ ಉಳುಮೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಜಾಮಿಯಾ ಮಸೀದಿ ಸಮಿತಿ ಸದಸ್ಯರು ಆಗಮಿಸಿ ಆಕ್ಷೇಪ ತೆಗೆದಿದ್ದಾರೆ. ಇದರಿಂದ ಎರಡೂ ಗುಂಪುಗಳ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. 


ಚಿಂತಾಮಣಿ(ಚಿಕ್ಕಬಳ್ಳಾಪುರ)(ನ.16):  ರಾಜ್ಯದಲ್ಲಿ ಸದ್ದು ಮಾಡುತ್ತಿರುವ ವಕ್ಫ್‌ ಆಸ್ತಿ ವಿವಾದ ಇದೀಗ ಚಿಂತಾಮಣಿಯಲ್ಲೂ ಗದ್ದಲಕ್ಕೆ ಕಾರಣವಾಗಿದೆ. ತಾಲೂಕಿನ ತಿಮ್ಮಸಂದ್ರ ಗ್ರಾಮದಲ್ಲಿ ಉಳುಮೆ ವಿಚಾರದಲ್ಲಿ ಮುಸ್ಲಿಂ ಮುಖಂಡರು ಮತ್ತು ರೈತರ ನಡುವೆ ವಾಗ್ವಾದ ನಡೆದು, ಕೆಲಕಾಲ ಆತಂಕದ ವಾತಾವರಣ ಸೃಷ್ಟಿಸಿತ್ತು. ಈ ಬಗ್ಗೆ ವಕ್ಫ್‌ ಮಂಡಳಿಯ ದೂರಿ ನಂತೆ ಎಫ್‌ಐಆರ್ ದಾಖಲಾಗಿದ್ದು, ರೈತರ ಟ್ರ್ಯಾಕ್ಟರ್‌ವೊಂದನ್ನು ವಶಕ್ಕೆ ಪಡೆಯಲಾಗಿದೆ. 

ಆಗಿದ್ದೇನು?: 

Latest Videos

undefined

ತಿಮ್ಮಸಂದ್ರದ ಸರ್ವೇ ನಂಬರ್ 13/1, 13/3 ಮತ್ತು 20ರ 10 ಆಸ್ತಿಗೆ ಸಂಬಂದ ವಕ್ಫ್‌  ಮತ್ತು ರೈತರ ನಡುವೆ ಹಿಂದಿನಿಂದಲೂ ತಿಕ್ಕಾಟ ನಡೆದುಕೊಂಡು ಬಂದಿದೆ. ಪಹಣಿಯಲ್ಲಿ ವಕ್ಫ್‌  ಎಂದು ನಮೂದಾಗಿರುವ ಹಿನ್ನೆಲೆಯಲ್ಲಿ ಇದರ ವಿರುದ್ಧ ರೈತರು 2014ರಲ್ಲಿ ಜಿಲ್ಲಾಧಿಕಾರಿಗಳ ನ್ಯಾಯಾಲಯದ ಮೆಟ್ಟಿಲೇರಿದ್ದು, ತೀರ್ಪು ವಕ್ಫ್‌  ಮಂಡಳಿ ಪರವಾಗಿ ಬಂದಿತ್ತು. ಇದನ್ನು ಪ್ರಶ್ನಿಸಿ ರೈತರು ಹೈಕೋರ್ಟ್ ಮೆಟ್ಟಿಲೇರಿದ್ದು, ಪ್ರಕರಣ ಇನ್ನೂ ವಿಚಾರಣೆ ಹಂತದಲ್ಲಿದೆ. ಇತ್ತೀಚೆಗೆ ಜಾಮಿಯಾ ಮಸೀದಿ ಸಮಿತಿ ಈ ಜಮೀನನ್ನು ಸರ್ವೇ ಮಾಡಿಸಿ ಸುತ್ತಲೂ ಮುಳ್ಳು ತಂತಿ ಬೇಲಿ ಹಾಕಿದೆ. ಆದರೆ 70 ವರ್ಷಗಳಿಂದ ನಾವು ಈ ಜಮೀನಲ್ಲಿ ಉಳುಮೆ ಮಾಡಿಕೊಂಡು ಜೀವನ ಮಾಡುತ್ತಿದ್ದೇವೆ. ಆದರೆ ಈಗ ವಕ್ಫ್‌ ಬೋರ್ಡ್‌ನವರು ನಮ್ಮ ಜಮೀನಿಗೆ ಅಕ್ರಮ ಪ್ರವೇಶ ಮಾಡಿ ಮುಳ್ಳು ತಂತಿ ಬೇಲಿ ಹಾಕಿಸಿಕೊಂಡು ನಮಗೆ ತೊಂದರೆ ನೀಡುತ್ತಿದ್ದಾರೆಂಬುದು ತಿಮ್ಮಸಂದ್ರ ಗ್ರಾಮದ ಬಡ ದಲಿತ ಕುಟುಂಬದವರ ಆರೋಪ. 

Bengaluru: ಬಿಸಿಡಿ ಗ್ರೂಪ್‌ನಿಂದ 500 ಕೋಟಿ ವೆಚ್ಚದಲ್ಲಿ ಟೌನ್‌ಶಿಪ್‌, ಎಲ್ಲಾ 900 ಫ್ಲ್ಯಾಟ್‌ ಭೋಗ್ಯಕ್ಕೆ ಪಡೆದ ಫಾಕ್ಸ್‌ಕಾನ್‌!

ರಾಜ್ಯಾದ್ಯಂತ ವಕ್ಫ್‌ ಆಸ್ತಿಗೆ ಸಂಬಂಧಿಸಿ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಇದೀಗ ಏಕಾಏಕಿ ಜಮೀನಿಗೆ ಹಾಕಿದ ಬೇಲಿ ಕಿತ್ತು ಹಾಕಿದ ರೈತರು, ಟ್ರಲ್‌ಯಾಕ್ಟ್‌ ಮೂಲಕ ಉಳುಮೆ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸ್ಥಳಕ್ಕೆ ಜಾಮಿಯಾ ಮಸೀದಿ ಸಮಿತಿ ಸದಸ್ಯರು ಆಗಮಿಸಿ ಆಕ್ಷೇಪ ತೆಗೆದಿದ್ದಾರೆ. ಇದರಿಂದ ಎರಡೂ ಗುಂಪುಗಳ ಮಧ್ಯೆ ಕೆಲಕಾಲ ಮಾತಿನ ಚಕಮಕಿ ನಡೆದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಸುದ್ದಿ ತಿಳಿದು ಚಿಂತಾಮಣಿ ಗ್ರಾಮಾಂತರ ಠಾಣೆ ಇನ್ಸ್‌ಪೆಕ್ಟ‌ರ್ ಶಿವರಾಜ್ ಮತ್ತು ಸಿಬ್ಬಂದಿ ದಲಿತರು ಹಾಗೂ ಜಾಮಿಯಾ ಮಸೀದಿ ಸಮಿತಿ ಸದಸ್ಯರನ್ನು ಸಮಾಧಾನಪಡಿಸಿ ಪರಿಸ್ಥಿತಿ ತಿಳಿಗೊಳಿಸಿದರು. ನಂತರ ಜಾಮಿಯಾ ಮಸೀದಿ ಸಮಿತಿ ಕಾರ್ಯದರ್ಶಿ ಮಹಮ್ಮದ್ ಇನಾಯತ್ ಅವರು ಅಕ್ರಮ ಪ್ರವೇಶದ ದೂರು ನೀಡಿದ ಹಿನ್ನೆಲೆಯಲ್ಲಿ ಪ್ರಕರಣದಾಖಲಿಸಿಕೊಂಡಿರುವ ಪೊಲೀಸರು ಟ್ರ್ಯಾಕ್ಟರ್ ವಶಕ್ಕೆ ಪಡೆದಿದ್ದಾರೆ. ಸದ್ಯ ಪ್ರಕರಣ ಹೈಕೋರ್ಟ್‌ನಲ್ಲಿರುವ ಕಾರಣ ಎರಡೂ ಕಡೆಯವರು ಯಥಾಸ್ಥಿತಿ ಕಾಪಾಡುವಂತೆ ತಹಸೀಲ್ದಾ‌ರ್ ಸುದರ್ಶನ್ ಸೂಚಿಸಿದ್ದಾರೆ.

2016 ರಲ್ಲಿ 10 ರೈತರು ಈ ಜಮೀನು ಸಂಬಂಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ವಿಚಾರಣೆ ನಡೆಯುತ್ತಿದೆ. ವಕ್ಸ್ ಕಡೆಯಿಂದ ರೈತರ ವಿರುದ್ಧ ಅತಿಕ್ರಮ ಪ್ರವೇಶದ ದೂರು ದಾಖಲಾದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ, ಟ್ರ್ಯಾಕ್ಟ‌ರ್ ವಶಕ್ಕೆ ಪಡೆಯಲಾಗಿದೆ ಎಂದು ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ತಿಳಿಸಿದ್ದಾರೆ. 

click me!