ದರ್ಶನ್‌ ಜಾಮೀನು ರದ್ದು, ರಾಜಾತಿಥ್ಯ ನೀಡಿದ್ದ ಜೈಲಾಧಿಕಾರಿಗಳ ಸಸ್ಪೆಂಡ್‌ಗೆ ಸುಪ್ರೀಂ ಕೋರ್ಟ್‌ ಆದೇಶ

Published : Aug 14, 2025, 10:58 AM ISTUpdated : Aug 14, 2025, 10:59 AM IST
darshan jail

ಸಾರಾಂಶ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಸೇರಿ ಏಳು ಮಂದಿಯ ಜಾಮೀನು ರದ್ದಾಗಿದೆ. ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ್ದಕ್ಕಾಗಿ ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ. ಈ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಬೆಂಗಳೂರು (ಆ.14): ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟ ದರ್ಶನ್‌ ತೂಗುದೀಪ ಅವರ ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಏಳು ಮಂದಿಯ ಜಾಮೀನನ್ನು ಸುಪ್ರೀಂ ಕೋರ್ಟ್‌ ಗುರುವಾರ ರದ್ದು ಮಾಡಿದೆ. ಅದರೊಂದಿಗೆ ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಿದ್ದ ಜೈಲು ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡುವಂತೆ ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ. ಪರಪ್ಪನ ಅಗ್ರಹಾರದಲ್ಲಿ ದರ್ಶನ್‌ಗೆ ರಾಜಾತಿಥ್ಯ ನೀಡಿದ್ದ ಕಾರಣಕ್ಕಾಗಿಯೇ ಕಿಲ್ಲಿಂಗ್‌ ಸ್ಟಾರ್‌ನನ್ನು ಬಳ್ಳಾರಿ ಜೈಲಿಗೆ ಶಿಫ್ಟ್‌ ಮಾಡಲಾಗಿತ್ತು. ಈಗ ಜಾಮೀನು ರದ್ದು ಮಾಡಿದ ಬೆನ್ನಲ್ಲಿಯೇ ದರ್ಶನ್‌ ಈಗ ಬಳ್ಳಾರಿ ಜೈಲಿಗೆ ಪುನಂ ವಾಪಾಸ್‌ ಹೋಗಬೇಕಾಗಿದೆ.

ಜೈಲಿನಲ್ಲಿ ಕೊಲೆ ಆರೋಪಿಗೆ ವಿಶೇಷ ಆತಿಥ್ಯ ನೀಡಿದ್ದ ವಿಚಾರಕ್ಕೆ ನ್ಯಾಯಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನ್ಯಾಯಮೂರ್ತಿ ಜೆ ಪರ್ದಿವಾಲಾ, 'ನೀವು ಯಾರಿಗಾದರೂ ವಿಐಪಿ ಅತಿಥ್ಯ ನೀಡಲಾಗುತ್ತಿರುವ ಬಗ್ಗೆ ಛಾಯಾಚಿತ್ರಗಳು ಅಥವಾ ವೀಡಿಯೊವನ್ನು ನಾವು ನೋಡಿದರೆ, ಮೊದಲು ನಿಮ್ಮನ್ನು ಸಮನ್ಸ್ ಮಾಡಲಾಗುತ್ತದೆ' ಎಂದು ಹೇಳಿದ್ದು. ಜೈಲು ಅಧಿಕಾರಿಗಳಿಗೆ ಸುಪ್ರೀಂ ಕೋರ್ಟ್‌ ತಾಕೀತು ಮಾಡಿದ್ದು, ಯಾವುದೇ ಕಾರಣಕ್ಕೂ ಜೈಲಿನಲ್ಲಿ ಆರೋಪಿಗ:ಇಗೆ ರಾಜಾತಿಥ್ಯ ನೀಡಬಾರದು ಎಂದಿದೆ.

ರಾಜಾತಿಥ್ಯ ನೀಡಿರುವ ಬಗ್ಗೆ ನಾನು ಎಜಿ ಜೊತೆ ಮಾತನಾಡಿ ತಿಳಿಸುತ್ತೇನೆ ಎಂದು ರಾಜ್ಯ ಸರ್ಕಾರದ ಪರ ವಕೀಲ ಸಿದ್ಧಾರ್ಥ್‌ ಲೂತ್ರಾ ತಿಳಿಸಿದರು. ಈ ತೀರ್ಪಿನ ಪ್ರತಿಯನ್ನು ಎಲ್ಲಾ ಹೈಕೋರ್ಟ್‌ಗಳು ಮತ್ತು ರಾಜ್ಯ ಸರ್ಕಾರಗಳಿಗೆ ನೀಡುವಂತೆ ರಿಜಿಸ್ಟ್ರಿಗೆ ನಿರ್ದೇಶಿಸಲಾಗಿದೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

112 ಹುದ್ದೆ ನೇಮಕಾತಿ ಮುಂದುವರಿಕೆಗೆ ಕೆಪಿಎಸ್ಸಿಗೆ ನೀಡಿದ್ದ ಅನುಮತಿ ವಾಪಸ್!
ನ್ಯಾಷನಲ್‌ ಹೆರಾಲ್ಡ್‌ ಕೇಸ್‌ನಲ್ಲಿ ಡಿಕೆಗೆ ದಿಲ್ಲಿ ಪೊಲೀಸ್‌ ನೋಟಿಸ್‌