ದರ್ಶನ್, ಪವಿತ್ರಾಗೌಡ ಜಾಮೀನು ಭವಿಷ್ಯ ಇಂದು ನಿರ್ಧಾರ: ತೀರ್ಪು ಪ್ರಕಟಕ್ಕೆ ಕ್ಷಣಗಣನೆ

By Kannadaprabha News  |  First Published Oct 14, 2024, 8:59 AM IST

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ದರ್ಶನ್, ಪವಿತ್ರಾಗೌಡ ಸೇರಿ ದಂತೆ 6 ಆರೋಪಿಗಳ ಜಾಮೀನು ಭವಿಷ್ಯ ಸೋಮವಾರ ನಡೆಯಲಿದೆ. 
 


ಬೆಂಗಳೂರು (ಅ.14): ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿನಲ್ಲಿರುವ ದರ್ಶನ್, ಪವಿತ್ರಾಗೌಡ ಸೇರಿ ದಂತೆ 6 ಆರೋಪಿಗಳ ಜಾಮೀನು ಭವಿಷ್ಯ ಸೋಮವಾರ ನಡೆಯಲಿದೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ 57ನೇ ಸಿಟಿ ಸಿವಿಲ್ ಮತ್ತು ಸೆಷನ್ ಕೋರ್ಟ್, ಈಗಾಗಲೇ ತೀರ್ಪು ಕಾಯ್ದಿರಿಸಿರುವ ರವಿ ಶಂಕರ್, ಲಕ್ಷ್ಮಣ್, ನಾಗರಾಜ್ ಮತ್ತು ದೀಪಕ್ ಅವರ ಅರ್ಜಿಗಳ ತೀಪನ್ನು ಸಹ ಇದೇ ವೇಳೆ ಪ್ರಕಟಿಸಲಿದೆ. ದರ್ಶನ್ ಪರ ಸಿ.ವಿ.ನಾಗೇಶ್ ಜಾಮೀನು ನೀಡದಂತೆ ಪ್ರಸನ್ನ ಕುಮಾರ್ ಇಬ್ಬರೂ ಪ್ರಬಲ ವಾದ ಮಂಡಿಸಿದ್ದಾರೆ. 

ಪೊಲೀಸ್‌ ತನಿಖೆಯಲ್ಲಿ ಲೋಪ ದೋಷಗಳಿವೆ ಎಂದು ಹಲವು ಅಂಶಗಳನ್ನು ಸಿ.ವಿ.ನಾಗೇಶ್ ಉಲ್ಲೇಖಿಸಿದ್ದಾರೆ.ಅರೇಬಿ ಯನ್ ನೈಟ್ಸ್ ಕತೆಯಂತೆ ಇದೆ. ತನಿಖೆ ಅತ್ಯಂತ ಕಳಪೆಯಾಗಿದೆ. ಸ್ಥಳ ಮಹಜರು ಮತ್ತು ಪಂಚನಾಮೆಗೆ ಹೋಲಿಕೆಯಿಲ್ಲ ಎಂದು ವಾದಿಸಿದ್ದರು. ಮತ್ತೊಂದೆಡೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್, ಈ ಕೊಲೆ ಪ್ರಕರಣ ಕ್ರೂರವಾದ ರಕ್ತ ಚರಿತ್ರೆ.ಕೃತ್ಯಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಗ ಳು, ಫೋಟೋಗಳು ಇವೆ. ಅ ಆರೋಪಿ ದರ್ಶನ್ ಕೊಲೆಯಲ್ಲಿ ಭಾಗಿಯಾಗಿರುವುದಕ್ಕೆ ಪ್ರಬಲ ಸಾಕ್ಷಿಗಳಿವೆ ಎಂದು ವಾದಿಸಿದ್ದರು. 

Tap to resize

Latest Videos

ದರ್ಶನ್‌ಗೆ ಬೇಲ್‌ ನೀಡದಿದ್ರೆ 500 ಕುಟುಂಬಕ್ಕೆ ತೊಂದರೆ: ವಕೀಲ ನಾಗೇಶ್ ವಾದವೇನು?

ಜಾಮೀನು ಸಿಗದಿದ್ದರೆ ಹೈಕೋರ್ಟ್‌ಗೆ ಅರ್ಜಿ?: ದರ್ಶನ್, ಪವಿತ್ರಾಗೌಡ ಜಾಮೀನು ಅರ್ಜಿ ತಿರಸ್ಕಾರವಾದರೆ ಅವರಿಬ್ಬರೂ ಹೈಕೋರ್ಟ್ ಮೆಟ್ಟಿಲೇರಬೇಕಾಗುತ್ತದೆ.

ಬೆನ್ನುನೋವು ಉಲ್ಬಣ: ಕೊಲೆ ಪ್ರಕರಣದ ಆರೋಪದಡಿ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರ ಬೆನ್ನುನೋವಿನ ಸಮಸ್ಯೆ ಮತ್ತಷ್ಟು ಹೆಚ್ಚಾಗಿದ್ದು, ಸಿಟಿ ಸ್ಕ್ಯಾನ್ ಹಾಗೂ ಎಂಆರ್‌ಐ ಸ್ಕ್ಯಾನ್ ಮಾಡಿಸುವಂತೆ ಬಿಮ್ಸ್‌ ವೈದ್ಯರು ಸೂಚಿಸಿದ್ದಾರೆ. ಬಿಮ್ಸ್‌ನ ನರಶಸ್ತ್ರಚಿಕಿತ್ಸಾ ತಜ್ಞ ಡಾ.ವಿಶ್ವನಾಥ್ ಅವರು ನಟ ದರ್ಶನ್ ಆರೋಗ್ಯ ತಪಾಸಣೆ ಮಾಡಿದ್ದು, ಸ್ಕ್ಯಾನಿಂಗ್ ಮಾಡಿಸಿ, ಸೂಕ್ತ ಚಿಕಿತ್ಸೆಯ ಅಗತ್ಯವಿದೆ. ಫಿಜಿಯೋಥೆರಪಿ ಮಾಡಬೇಕು ಎಂದು ಹೇಳಿದ್ದು ಬೆನ್ನುನೋವು ನಿವಾರಣೆಗೆ ಮಾತ್ರೆಗಳನ್ನು ನೀಡಿದ್ದಾರೆ. ಫಿಜಿಯೋಥೆರಪಿಗೆ ನಟ ದರ್ಶನ್ ಒಪ್ಪಿದ್ದು ಸಿಟಿ ಸ್ಕ್ಯಾನ್ ಹಾಗೂ ಎಂಆರ್‌ಐ ಸ್ಕ್ಯಾನ್‌ಗೆ ಒಪ್ಪುತ್ತಿಲ್ಲ ಎಂದು ಜೈಲು ಅಧಿಕಾರಿಗಳು ''ಕನ್ನಡಪ್ರಭ''ಕ್ಕೆ ತಿಳಿಸಿದ್ದಾರೆ.

ದರ್ಶನ್‌ ಕೇಸ್ ತನಿಖೆ ಅರೇಬಿಯನ್ ನೈಟ್ಸ್ ಕತೆಯಂತಿದೆ: ವಕೀಲ ಸಿ.ವಿ.ನಾಗೇಶ್ ವಾದ!

ಮೂಲಗಳ ಪ್ರಕಾರ ನಟ ದರ್ಶನ್ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಬೆನ್ನುನೋವು ಹಾಗೂ ಕಾಲುನೋವಿನ ಬಾಧೆ ಮತ್ತಷ್ಟು ಬಿಗಡಾಯಿಸಿದೆ. ಶಸ್ತ್ರಚಿಕಿತ್ಸೆ ಅಗತ್ಯವಿದೆ. ಹೀಗಾಗಿಯೇ ದರ್ಶನ್‌ಗೆ ಮೆಡಿಕಲ್‌ ಬೆಡ್ ಹಾಗೂ ಚೇರ್ ನೀಡುವಂತೆಯೂ ವೈದ್ಯರು ಸೂಚಿಸಿದ್ದಾರೆ. ನಟ ದರ್ಶನ್ ಸ್ಕ್ಯಾನಿಂಗ್‌ಗೆಂದು ಬಿಮ್ಸ್‌ಗೆ ದಾಖಲಾದರೆ ಅಭಿಮಾನಿಗಳು ಬಿಮ್ಸ್‌ಗೆ ಬರುವ ಸಾಧ್ಯತೆಯಿದೆ. ಇದರಿಂದ ಬೇರೆ ರೋಗಿಗಳಿಗೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಸ್ಥಳೀಯವಾಗಿ ಸ್ಕ್ಯಾನಿಂಗ್ ಹಾಗೂ ಶಸ್ತ್ರಚಿಕಿತ್ಸೆಗೆ ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದು ಬಂದಿದೆ. ಸ್ಕ್ಯಾನಿಂಗ್ ಮಾಡಿಸಿಕೊಳ್ಳುವಂತೆ ಮನವೊಲಿಸಲಾಗುತ್ತಿದೆ. ಆದರೆ, ದರ್ಶನ್ ನಿರಾಕರಿಸುತ್ತಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

click me!