ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡುತ್ತಿದ್ದೆ: ಸಿದ್ದರಾಮಯ್ಯ

Published : Oct 12, 2023, 02:06 PM IST
ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡುತ್ತಿದ್ದೆ: ಸಿದ್ದರಾಮಯ್ಯ

ಸಾರಾಂಶ

‘ದಸರಾ ನನ್ನ ಊರ ಹಬ್ಬ. ಬಾಲ್ಯದಲ್ಲಿ ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡುತ್ತಿದ್ದೆ. ಈಗ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತದ್ದು ನನ್ನ ಸೌಭಾಗ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಳೆಯ ದಿನಗಳನ್ನು ನೆನಪಿಸಿಕೊಂಡು ಹರ್ಷ ವ್ಯಕ್ತಪಡಿಸಿದರು.

ಬೆಂಗಳೂರು (ಅ.12) :  ‘ದಸರಾ ನನ್ನ ಊರ ಹಬ್ಬ. ಬಾಲ್ಯದಲ್ಲಿ ಅಪ್ಪನ ಹೆಗಲ ಮೇಲೆ ಕುಳಿತು ದಸರಾ ನೋಡುತ್ತಿದ್ದೆ. ಈಗ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತದ್ದು ನನ್ನ ಸೌಭಾಗ್ಯ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಳೆಯ ದಿನಗಳನ್ನು ನೆನಪಿಸಿಕೊಂಡು ಹರ್ಷ ವ್ಯಕ್ತಪಡಿಸಿದರು.

ಕಾವೇರಿ ನಿವಾಸದಲ್ಲಿ ತಮ್ಮನ್ನು ಭೇಟಿ ಮಾಡಿದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದ ಜಿಲ್ಲಾಡಳಿತದ ನಿಯೋಗದಿಂದ ವಿಶ್ವ ವಿಖ್ಯಾತ ಮೈಸೂರು ದಸರಾದ ಆಹ್ವಾನ ಪತ್ರಿಕೆಯನ್ನು ಸಾಂಪ್ರದಾಯಿಕವಾಗಿ ಸ್ವೀಕರಿಸಿ ಅವರು ಮಾತನಾಡಿದರು.

 

ಸಿಎಂ ಸಿದ್ದರಾಮಯ್ಯ ಅವರಿಗೆ ಇದು 6 , ಉಸ್ತುವಾರಿ ಮಂತ್ರಿಯಾಗಿ ಎಚ್‌ಸಿ ಮಹದೇವಪ್ಪ ಅವರಿಗೆ 3ನೇ ದಸರಾ

ನಾನು ಮೈಸೂರು ಜಿಲ್ಲೆಯವನಾಗಿದ್ದು ದಸರಾ ನನ್ನ ಊರಿನ ಹಬ್ಬವಾಗಿದೆ. ಚಿಕ್ಕವನಿದ್ದಾಗ ತಂದೆಯ ಹೆಗಲ ಮೇಲೆ ಕುಳಿತುಕೊಂಡು ದಸರಾ ವೀಕ್ಷಿಸುತ್ತಿದ್ದೆ. ಈ ಹಿಂದೆಯೂ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಂಡಿದ್ದೆ. ಈಗ ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರಕಿದ್ದು ನನ್ನ ಸೌಭಾಗ್ಯ ಎಂದು ಸಂತಸದಿಂದ ಹೇಳಿದರು.

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರ ನೇತೃತ್ವದ ನಿಯೋಗವು ದಸರಾದ ಆಹ್ವಾನ ಪತ್ರಿಕೆ ನೀಡಿತು. ಅತ್ಯಂತ ಸಂತೋಷದಿಂದ ಅವರ ಆಹ್ವಾನ ಸ್ವೀಕರಿಸಿ, ಆಗಮಿಸುವುದಾಗಿ ತಿಳಿಸಿದೆ ಎಂದರು.

ವಿಶ್ವವಿಖ್ಯಾತ ದಸರಾ ಜಂಬೂ ಸವಾರಿಗೆ ಕೌಂಟ್‌ಡೌನ್; ಇಂದು ಮರದ ಅಂಬಾರಿ ಹೊತ್ತು ಗಾಂಭೀರ್ಯ ನಡಿಗೆ!

ಮೈಸೂರು ಮೇಯರ್ ಶಿವಕುಮಾರ್, ಶಾಸಕರಾದ ರವಿಶಂಕರ್, ಎ.ಆರ್.ಕೃಷ್ಣಮೂರ್ತಿ, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಮತ್ತಿತರರು ನಿಯೋಗದಲ್ಲಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?
ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ