ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ

Published : Dec 06, 2025, 12:05 PM IST
Communal Tension in Sasvehalli After Flex Burning Incident

ಸಾರಾಂಶ

DavanagereTensionದಾವಣಗೆರೆ ಜಿಲ್ಲೆಯ ಸಾಸ್ವೆಹಳ್ಳಿ ಗ್ರಾಮದಲ್ಲಿ ದೀಪೋತ್ಸವದ ಅಂಗವಾಗಿ ಅಳವಡಿಸಲಾಗಿದ್ದ ಈಶ್ವರನ ಭಾವಚಿತ್ರದ ಫ್лекಸ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಿಂದ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು, ಪೊಲೀಸರು ಸ್ಥಳದಲ್ಲಿ ಬಿಗಿ ಭದ್ರತೆ ಒದಗಿಸಿದೆ.

ದಾವಣಗೆರೆ (ಡಿ.6): ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಸಾಸ್ವೆಹಳ್ಳಿ ಗ್ರಾಮದಲ್ಲಿ ಕೋಮು ಸೂಕ್ಷ್ಮ ಪರಿಸ್ಥಿತಿಗೆ ಕಾರಣವಾಗುವ ಘಟನೆಯೊಂದು ನಡೆದಿದೆ. 

ಈಶ್ವರನ ಭಾವಚಿತ್ರದ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು!

ಗ್ರಾಮದಲ್ಲಿ ನಡೆಯುತ್ತಿದ್ದ ಕೋಟೆ ಆಂಜನೇಯ ಮತ್ತು ಕಲ್ಲೇಶ್ವರ ಸ್ವಾಮಿಯ ದೀಪೋತ್ಸವ (ಕಾರ್ತಿಕೋತ್ಸವ)ದ ಪ್ರಯುಕ್ತ ಗ್ರಾಮದ ಪ್ರವೇಶ ದ್ವಾರದ ಬಳಿ ಈಶ್ವರನ ಭಾವಚಿತ್ರದ ಫ್ಲೆಕ್ಸ್ ಅಳವಡಿಸಲಾಗಿತ್ತು. ಈ ವೇಳೆ, ಯಾರೋ ಕಿಡಿಗೇಡಿಗಳು ಈಶ್ವರನ ಭಾವಚಿತ್ರದ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿ ವಿಕೃತಿ ಮೆರೆದಿದ್ದಾರೆ.

ಸ್ಥಳದಲ್ಲಿ ಬಿಗಿ ಭದ್ರತೆ: ಪೊಲೀಸರ ಮೊಕ್ಕಾಂ

ಘಟನೆ ತಿಳಿದ ಕೂಡಲೇ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದು, ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಕೂಡಲೇ ಸ್ಥಳಕ್ಕೆ ದೌಡಾಯಿಸಿದ್ದು, ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ. ಸಾಸ್ವೆಹಳ್ಳಿ ಗ್ರಾಮವು ಕೋಮು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ ಮತ್ತು ಪೊಲೀಸರು ಮೊಕ್ಕಾಂ ಹೂಡಿದ್ದಾರೆ. ಯಾವ ಉದ್ದೇಶದಿಂದ ಕಿಡಿಗೇಡಿಗಳ ಈ ಕೃತ್ಯ ನಡೆಸಿದ್ದಾರೆ ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕಿ ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

'ಉಪಲೋಕಾಯುಕ್ತರಿಗೆ ಒಂದ್ ನಮಸ್ಕಾರ': ಭ್ರಷ್ಟಾಚಾರದ ಬಗ್ಗೆ ಹೇಳಿಕೆ ನೀಡಲು ಮಾತ್ರ ಅಧಿಕಾರವಿದೆಯೇ? – ಹೆಚ್‌ಡಿಕೆ ವ್ಯಂಗ್ಯ
ವರುಣಾ ಜನತೆಯ ಋಣ ತೀರಿಸಲು ಸಾಧ್ಯವಿಲ್ಲ, ಆದರೂ ಶ್ರಮಿಸುವೆ: ಯತೀಂದ್ರ ಸಿದ್ದರಾಮಯ್ಯ