
ದಾವಣಗೆರೆ (ಸೆ.29): ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷಾ ಕಾರ್ಯ ಕೈಗೊಳ್ಳಲು ನಿರಾಸಕ್ತಿ ತೋರಿದ ಇಬ್ಬರು ಶಿಕ್ಷಕರೂ ಸೇರಿದಂತೆ ಮೂವರು ಸಿಬ್ಬಂದಿಯನ್ನು ಜಿಲ್ಲಾ ಶಿಸ್ತು ಪ್ರಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೇವೆಯಿಂದ ಅಮಾನತುಗೊಳಿಸಿದ್ದಾರೆ.
ದಾವಣಗೆರೆ ಉತ್ತರ ವಲಯದ ಜಮಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಡಿ.ಕೆ.ಮಂಜುನಾಥ, ದಾವಣಗೆರೆ ದಕ್ಷಿಣ ವಲಯದ ನಾಗನೂರು ಸರ್ಕಾರಿ ಪ್ರೌಢಶಾಲೆಯ ದೈಹಿಕ ಶಿಕ್ಷಕ ಎಚ್.ಬಸವರಾಜಪ್ಪ, ದಾವಣಗೆರೆ ತಾಲೂಕು ಮಾಯಕೊಂಡ ಹಿಂದುಳಿಗ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಮೇಲ್ವಿಚಾರಕ ಕೆ.ಆರ್.ದುರ್ಗಪ್ಪ ಅಮಾನತುಗೊಂಡವರು.
ಇದನ್ನೂ ಓದಿ: Chikkaballapur Stray Dog attack: ಜಾತಿ ಸಮೀಕ್ಷೆ ಹೋದ ಶಿಕ್ಷಕಿ ಮೇಲೆ ನಾಯಿ ದಾಳಿ
ಸೆ.22ರಿಂದ ಅ.7ರವರೆಗೆ ಸಮೀಕ್ಷಾ ಕಾರ್ಯಕ್ಕೆ ಮೂವರನ್ನೂ ನಿಯೋಜಿಸಲಾಗಿತ್ತು. ಆದರೆ, ಈ ನೌಕರರು ಸಮೀಕ್ಷಾ ಕಾರ್ಯಕ್ಕೆ ಗೈರು ಹಾಜರಾಗಿದ್ದರು. ಕಾರಣ ಕೇಳಿ ಜಾರಿಗೊಳಿಸಿದ್ದ ನೋಟಿಸ್‌ಗೂ ಸಮಜಾಯಿಷಿ ನೀಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಮೂವರೂ ನೌಕರರ ವಿರುದ್ಧ ಇಲಾಖಾ ವಿಚಾರಣೆ ಕಾಯ್ದಿರಿಸಿ, ಕರ್ನಾಟಕ ಸರ್ಕಾರಿ ಸಿವಿಲ್ ವರ್ಗೀಕರಣ ಮತ್ತು ಅಪೀಲು ನಿಯಮಾವಳಿ 1957ರ ನಿಯಮ 10(1)(ಜ)ರ ಅನ್ವಯ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ