ಬೆಂಗಳೂರು ನೂತನ ಜಿಲ್ಲಾಧಿಕಾರಿಯಾಗಿ ದಯಾನಂದ.ಕೆ.ಎ ನೇಮಕ: 45 ಡಿವೈಎಸ್ಪಿಗಳ ವರ್ಗಾವಣೆ

By Govindaraj S  |  First Published Dec 17, 2022, 8:14 PM IST

ಸಿಲಿಕಾನ್ ಸಿಟಿಯ ನೂತನ ಜಿಲ್ಲಾಧಿಕಾರಿಯಾಗಿ ದಯಾನಂದ.ಕೆ.ಎ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮಾತ್ರವಲ್ಲದೇ ಪೊಲೀಸ್ ಇಲಾಖೆಯಲ್ಲಿಯೂ ಮೇಜರ್ ಸರ್ಜರಿ ನಡೆಸಿದ್ದು, 45 ಡಿವೈಎಸ್ಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.


ಬೆಂಗಳೂರು (ಡಿ.17): ಹಿಂದುಳಿದ ವರ್ಗಗಳ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ದಯಾನಂದ ಕೆ.ಎ ಅವರನ್ನು ಸಿಲಿಕಾನ್ ಸಿಟಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮತದಾರರ ಪರಿಷ್ಕರಣೆ ಅಕ್ರಮ ಆರೋಪದಡಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಕೆ.ಶ್ರೀನಿವಾಸ್ ಅವರನ್ನು ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಅಮಾನತುಗೊಳಿಸಲಾಗಿತ್ತು. 

ಬಳಿಕ ಸಂಗಪ್ಪ ಅವರಿಗೆ ಪ್ರಭಾರಿ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿತ್ತು. ಇದೀಗ ದಯಾನಂದ ಕೆ.ಎ. ಅವರರನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿ ವರ್ಗಾಯಿಸಿ ಆದೇಶ ಹೊರಡಿಸಲಾಗಿದೆ. ಇನ್ನು ಪೊಲೀಸ್ ಇಲಾಖೆಯಲ್ಲಿಯೂ ಮೇಜರ್ ಸರ್ಜರಿ ನಡೆಸಿದ್ದು, 45 ಡಿವೈಎಸ್ಪಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
 

Tap to resize

Latest Videos





click me!