
ಬೆಂಗಳೂರು, (ಮೇ.28): ಕೋವಿಡ್ ಸೋಂಕಿತರ ಪಾಲಿಗೆ ಆಪ್ತರಕ್ಷಕನಂತೆ ನೆರವಿಗೆ ಬರುತ್ತಿರುವ 'ಆಮ್ಲಜನಕ ಸಾಂದ್ರಕ' ಗಳನ್ನು ಒದಗಿಸುವ ಕೆಲಸ ಮುಂದುವರಿದಿದ್ದು, ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಶುಕ್ರವಾರ ವಿವಿಧ ವಿಧಾನಸಭೆ ಕ್ಷೇತ್ರಗಳಿಗೆ 30 ಸಾಂದ್ರಕಗಳನ್ನು ಹಸ್ತಾಂತರಿಸಿದರು.
ಡಿಸಿಎಂ ಅವರು ವೈಯಕ್ತಿಕ ನೆಲೆಯಲ್ಲಿ ಈ ಸಾಂದ್ರಕಗಳನ್ನು ನೀಡಿದರು. ಹೊನ್ನಾಳಿ, ರೋಣ ಹಾಗೂ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರಗಳಿಗೆ ತಲಾ 5 ಆಮ್ಲಜನಕ ಸಾಂದ್ರಕಗಳನ್ನು ವಿತರಿಸಿದರು.
ಕರ್ನಾಟಕದಲ್ಲಿ ಕೊರೋನಾ ಇಳಿಮುಖ: ಹೆಚ್ಚಾಯ್ತು ಗುಣಮುಖ
ರೋಣ ಶಾಸಕ ಕಳಕಪ್ಪ ಬಂಡಿ ಅವರು ಡಿಸಿಎಂ ಅವರಿಂದ ಆಮ್ಲಜನಕ ಸಾಂದ್ರಕಗಳನ್ನು ಸ್ವೀಕರಿಸಿ ತಮ್ಮ ಕ್ಷೇತ್ರಗಳಿಗೆ ರವಾನಿಸಿದರು. ಇನ್ನು ಹೊನ್ನಾಳಿ ಕ್ಷೇತ್ರದ ಶಾಸಕರೂ ಆದ ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ರೇಣಾಕಾಚಾರ್ಯ ಅವರಿಗೆ ಅವರ ಅನುಪಸ್ಥಿತಿಯಲ್ಲಿ ಐದು ಸಾಂದ್ರಕಗಳನ್ನು ನೀಡಿದರು.
ಬಿಬಿಎಂಪಿ ಮಾಜಿ ಸದಸ್ಯರಾದ ಮುನೇಂದ್ರ ಕುಮಾರ್ ಅವರಿಗೆ ಐದು ಸಾಂದ್ರಕಗಳನ್ನು ಕೊಟ್ಟಿದ್ದು ಅವರು ಬ್ಯಾಟರಾಯನಪುರ ಕ್ಷೇತ್ರದಲ್ಲಿ ಬಳಕೆ ಮಾಡಲಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅಶ್ವತ್ಥ್ ನಾರಾಯಣ, ಸೋಂಕಿತರಿಗೆ ಆಮ್ಲಜನಕ ಸಾಂದ್ರಕಗಳಿಂದ ಹೆಚ್ಚು ಸಹಾಯ ಆಗುತ್ತಿದೆ. ತುರ್ತಾಗಿ ಎಲ್ಲಿಗೆ ಬೇಕಾದರೂ ಕೊಂಡೊಯ್ದು ಸುಲಭವಾಗಿ ಬಳಸಬಹುದಾಗಿದೆ. ಮಲ್ಲೇಶ್ವರ ವಿಧಾನಸಭೆ ಕ್ಷೇತ್ರದಲ್ಲಿ ಮನೆ ಬಾಗಿಲಿಗೆ ಇವುಗಳನ್ನು ಒದಗಿಸುವ ಕೆಲಸ ಆಗುತ್ತಿದೆ. ರಾಜ್ಯದ ಇತರ ಕಡೆಗೂ ಹೆಚ್ಚಿನ ಅನುಕೂಲ ಆಗಲಿ ಎಂದು ವೈಯಕ್ತಿಕವಾಗಿ ಇವುಗಳನ್ನು ನೀಡುತ್ತಿರುವುದಾಗಿ ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ