ಜನರ ಅಪೇಕ್ಷೆಯಂತೆ ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆ ರಚನೆ: ಅಶ್ವತ್ಥ ನಾರಾಯಣ

Kannadaprabha News   | Asianet News
Published : Sep 11, 2020, 09:05 AM IST
ಜನರ ಅಪೇಕ್ಷೆಯಂತೆ ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆ ರಚನೆ: ಅಶ್ವತ್ಥ ನಾರಾಯಣ

ಸಾರಾಂಶ

ಬಿಬಿಎಂಪಿಯ ಚುನಾವಣೆ ನಡೆಸುವುದಕ್ಕೆ ಈಗಾಗಲೇ ರಾಜ್ಯ ಚುನಾವಣಾ ಆಯೋಗದಿಂದ ತಯಾರಿ|  ಬಿಬಿಎಂಪಿಯ 198 ವಾರ್ಡ್‌ ಮರು ವಿಂಗಡಣೆ ಮಾಡಲಾಗಿದೆ| ಮತದಾರರ ಪಟ್ಟಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ| ಹೊಸ ಕಾಯ್ದೆ ಜಾರಿಯಾದರೆ ಅದರಲ್ಲಿ ಸೂಚಿಸಿದಂತೆ ವಾರ್ಡ್‌ಗಳಿಗೆ ಚುನಾವಣೆ| 

ಬೆಂಗಳೂರು(ಸೆ.11): ನಗರದ ಜನರ ಅಪೇಕ್ಷೆಯಂತೆ ರಾಜ್ಯ ಸರ್ಕಾರ ಬೆಂಗಳೂರಿಗೆ ಪ್ರತ್ಯೇಕ ಕಾಯ್ದೆ ರಚನೆ ಮಾಡುತ್ತಿದ್ದು, ಜೊತೆ ಜೊತೆಗೆ ಬಿಬಿಎಂಪಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯ ಗೊಂಡಿರುವುದರಿಂದ ಚುನಾವಣೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥ ನಾರಾಯಣ ಹೇಳಿದ್ದಾರೆ. 

ಗುರುವಾರ ಬಿಬಿಎಂಪಿಯ ನಾಡಪ್ರಭು ಕೆಂಪೇಗೌಡ ಜಯಂತಿ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿಯ ಚುನಾವಣೆ ನಡೆಸುವುದಕ್ಕೆ ಈಗಾಗಲೇ ರಾಜ್ಯ ಚುನಾವಣಾ ಆಯೋಗ ತಯಾರಿ ಮಾಡಿಕೊಳ್ಳುತ್ತಿದೆ. ಜೊತೆಗೆ ಬೆಂಗಳೂರಿಗೆ ಹೊಸ ಪ್ರತ್ಯೇಕ ಕಾಯ್ದೆ ರಚನೆ ಮಾಡಬೇಕು ಎಂಬ ಬೇಡಿಕೆ ಇತ್ತು. ಕಳೆದ ಅಧಿವೇಶನದಲ್ಲಿ ವರದಿ ಮಂಡಿಸಲಾಗಿತ್ತು. ಜಂಟಿ ಸದನ ಸಮಿತಿಯಲ್ಲಿ ಈ ಕುರಿತು ಚರ್ಚೆಗಳು ನಡೆಯುತ್ತಿದೆ. ಅದನ್ನು ಜಾರಿಗೆ ತರಬೇಕೆಂಬ ಪ್ರಯತ್ನ ಸಹ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಬೆಂಗಳೂರಲ್ಲಿ ಮಳೆಗಾಲದ ಪ್ರವಾಹ ಪರಿಸ್ಥಿತಿಗೆ ಶಾಶ್ವತ ಪರಿಹಾರ ಅಗತ್ಯ, ಅಶ್ವತ್ಥ ನಾರಾಯಣ

ಈಗಾಗಲೇ ಬಿಬಿಎಂಪಿಯ 198 ವಾರ್ಡ್‌ ಮರು ವಿಂಗಡಣೆ ಮಾಡಲಾಗಿದೆ. ಅದರ ಪ್ರಕಾರ ಮತದಾರರ ಪಟ್ಟಿ ಸಿದ್ಧಪಡಿಸುವ ಕಾರ್ಯ ನಡೆಯುತ್ತಿದೆ. ತದ ನಂತರ ಮುಂದಿನ ಪ್ರಕ್ರಿಯೆ ಕಾಲಕ್ಕೆ ಅನುಗುಣವಾಗಿ ನಡೆಯಲಿದೆ. ಸದ್ಯ ಕೆಎಂಸಿ ಕಾಯ್ದೆ ಪ್ರಕಾರ ಮುಂದಿನ ಚುನಾವಣೆ 198 ವಾರ್ಡ್‌ಗಳಿಗೆ ನಡೆಯಲಿದೆ. ಆದರೆ, ಹೊಸ ಕಾಯ್ದೆ ಜಾರಿಯಾದರೆ ಅದರಲ್ಲಿ ಸೂಚಿಸಿದಂತೆ ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ