ಕೊರೋನಾ ತಡೆಗೆ 24 ತಾಸು ಕೆಲಸ ಮಾಡಿ: ಡಿಸಿಎಂ ಸೂಚನೆ

By Kannadaprabha NewsFirst Published Jul 3, 2020, 10:23 AM IST
Highlights

ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಿನದ 24 ತಾಸು ಕೆಲಸ ನಿರ್ವಹಿಸುವಂತೆ ಪಾಲಿಕೆ ಸದಸ್ಯರು ಮತ್ತು ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ ಸಿ.ಎನ್‌.ಅಶ್ವತ್ಥನಾರಾಯಣ ಸೂಚನೆ ನೀಡಿದ್ದಾರೆ.

ಬೆಂಗಳೂರು(ಜು.03): ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದಿನದ 24 ತಾಸು ಕೆಲಸ ನಿರ್ವಹಿಸುವಂತೆ ಪಾಲಿಕೆ ಸದಸ್ಯರು ಮತ್ತು ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಡಾ ಸಿ.ಎನ್‌.ಅಶ್ವತ್ಥನಾರಾಯಣ ಸೂಚನೆ ನೀಡಿದ್ದಾರೆ.

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಕೊರೋನಾ ಸ್ಥಿತಿಗತಿ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳ ಜತೆ ನಡೆಸಿದ ಸಭೆ ನಡೆಸಿದ ಅವರು, ಕ್ಷೇತ್ರದಲ್ಲಿನ ಸೋಂಕಿತರ ಪ್ರಮಾಣ, ಆಸ್ಪತ್ರೆ ಬೆಡ್‌ಗಳು, ಗಂಟಲು ದ್ರವ ಸಂಗ್ರಹ, ಫೀವರ್‌ ಕ್ಲಿನಿಕ್‌ಗಳ ನಿರ್ವಹಣೆ, ಆ್ಯಂಬುಲೆನ್ಸ್‌ ಸೌಲಭ್ಯ ಬಗ್ಗೆ ಮಾಹಿತಿ ಪಡೆದರು.

ಡಿಕೆಶಿ ಕಾರ್ಯಕ್ರಮದಲ್ಲಿ ಸೋಂಕು ತಡೆಗೆ ‘ಯುವಿಸಿ ತಂತ್ರಜ್ಞಾನ’

ಕ್ಷೇತ್ರದಲ್ಲಿ ಇತ್ತೀಚೆಗೆ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು, ಸಾವುಗಳು ಕೂಡ ಹೆಚ್ಚಾಗಿವೆ. ಇದನ್ನು ತಡೆಯುವ ನಿಟ್ಟಿನಲ್ಲಿ ಪಾಲಿಕೆ ಮತ್ತು ಆರೋಗ್ಯ ಇಲಾಖೆ ಸಮರ್ಪಕವಾಗಿ ಕೆಲಸ ಮಾಡಬೇಕು

 ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಹಾಸಿಗೆ ಇಲ್ಲದಿದ್ದರೆ, ಖಾಸಗಿ ಆಸ್ಪತ್ರೆಗಳಲ್ಲಿ ಅವಕಾಶ ಕಲ್ಪಿಸಿ. ಸೋಂಕಿತರನ್ನು ಕ್ವಾರಂಟೈನ್‌ಲ್ಲಿಡಲು ದೊಡ್ಡ ಹೊಟೇಲ್‌ಗಳನ್ನು ಗುರುತಿಸಿ. ವೈದ್ಯರು, ನರ್ಸ್‌ಗಳು, ಔಷಧಿ, ಆ್ಯಂಬುಲೆನ್ಸ್‌ ಕೊರತೆಯಾಗದಂತೆ ಜಾಗೃತೆ ವಹಿಸಿ. ಅದೇ ರೀತಿ ಸಾಮಾನ್ಯ ರೋಗಿಗಳಿಗೂ ಯಾವುದೇ ತೊಂದರೆಯಾಗದಂತೆ ಚಿಕಿತ್ಸೆ ನೀಡುವಂತೆ ವ್ಯವಸ್ಥೆ ಮಾಡಬೇಕು. ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳಲ್ಲಿನ ವೈದ್ಯರು ಮತ್ತು ನರ್ಸ್‌ಗಳನ್ನು ಬಳಸಿಕೊಳ್ಳುವಂತೆ ಸಲಹೆ ನೀಡಿದರು.

click me!