ಎಲ್ಲ ಸಚಿವರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ; ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

By Sathish Kumar KHFirst Published Jul 28, 2024, 5:07 PM IST
Highlights

ರಾಜ್ಯದ ಎಲ್ಲ ಸಚಿವರು ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು.

ಬೆಂಗಳೂರು (ಜು.28): 'ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಜನರ ಕಷ್ಟಗಳನ್ನು ಆಲಿಸಬೇಕು ಹಾಗೂ ಅಗತ್ಯ ನೆರವುಗಳನ್ನು ಒದಗಿಸಿಕೊಡಬೇಕು' ಎಂದು ಸಚಿವ ಸಂಪುಟ ಸಹೋದ್ಯೋಗಿಗಳಿಗೆ ಜಲ ಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ. 

ರಾಜ್ಯದಲ್ಲಿ ಈ ವರ್ಷ ಭಾರಿ ಮಳೆಯಾಗುತ್ತಿದೆ ಮತ್ತು ಪ್ರವಾಹದಿಂದ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿದೆ. ಬಹುತೇಕ ಜಲಾಶಯಗಳು ಭರ್ತಿಯಾಗಿ ನೀರಿನ ಹೊರಹರಿವು ಹೆಚ್ಚಾದ ಪರಿಣಾಮ ನೆರೆ ಪರಿಸ್ಥಿತಿ ಎದುರಾಗಿದೆ. ನದಿ ಪಾತ್ರದ ಜನ, ಜಾನುವಾರು, ಆಸ್ತಿ, ಬೆಳೆಗಳಿಗೆ ಹಾನಿಗಳ ಬಗ್ಗೆ ವರದಿಯಾಗುತ್ತಿದೆ. ಇಂತಹ ಕಷ್ಟದ ಸಮಯದಲ್ಲಿ ಜನರ ಜೊತೆ ನಿಲ್ಲಬೇಕಿರುವುದು ನಮ್ಮ ಸರ್ಕಾರದ ಕರ್ತವ್ಯ. ಹೀಗಾಗಿ ಸಚಿವ ಸಹೋದ್ಯೋಗಿಗಳು ತಮ್ಮ ತಮ್ಮ ಕ್ಷೇತ್ರದಲ್ಲಿನ ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ತಿಳಿಸಿದ್ದಾರೆ.

Latest Videos

ಡಿಸಿಎಂ ಡಿ.ಕೆ. ಶಿವಕುಮಾರ್ ಮಹಾನಾಯಕ ಅಲ್ಲ, ಆತನ ಹೆಸರು ಸಿಡಿ ಶಿವು; ರಮೇಶ್ ಜಾರಕಿಹೊಳಿ

ಸ್ಥಳೀಯ ಶಾಸಕರೊಂದಿಗೆ ಸಂಪರ್ಕವಿರಲಿ: ಜೊತೆಗೆ, ಎಲ್ಲ ಸಚಿವ ಸಹೋದ್ಯೋಗಿಗಳು ತಮ್ಮ ಕ್ಷೇತ್ರ ವ್ಯಾಪ್ತಿ ಹಾಗೂ ಇತರೆ ಪ್ರವಾಹಪೀಡಿತ ಪ್ರದೇಶಗಳ ಶಾಸಕರ ಸಂಪರ್ಕದೊಂದಿಗೆ ಭೇಟಿ ಕೊಟ್ಟು, ಸಂತ್ರಸ್ತರ ಅಹವಾಲುಗಳನ್ನು ಸ್ವೀಕರಿಸಿ ಅವರ ನೆರವಿಗೆ ಧಾವಿಸಬೇಕಾಗಿ ಕೋರುತ್ತೇನೆ. ವರುಣನ ಕೃಪೆಯಿಂದ ಉತ್ತಮ ಮಳೆಯಾಗುತ್ತಿದೆ. ಇದೇ ವೇಳೆ ಉಂಟಾಗಿರುವ ಅವಘಡಗಳಿಂದ ಜನರು ಆತಂಕಕ್ಕೆ ಒಳಗಾಗಿದ್ದು, ಜನಪ್ರತಿನಿಧಿಗಳಾದ ನಾವು ಅವರ ಜೊತೆ ನಿಲ್ಲೋಣ ಡಿಸಿಎಂ ಡಿ.ಕೆ. ಶಿವಕುಮಾರ್ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬರಗಾಲ ಎನ್ನುತ್ತಿದ್ದವರಿಗೆ ತಿರುಗೇಟು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಬರಗಾಲ ಬರುತ್ತದೆ ಎಂದು ಟೀಕೆ ಮಾಡುತ್ತಿದ್ದ ವಿಪಕ್ಷ ನಾಯಕರಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ. ಶಿವಮೊಗ್ಗದಲ್ಲಿ ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಬರಗಾಲ ಬರುತ್ತೆ ಎಂದು ವಿಪಕ್ಷದವರು ಎನ್ನುತ್ತಿದ್ದರು ಈಗ ಬಾಯಿ ಮುಚ್ಚುವ ಪರಿಸ್ಥಿತಿ ಬಂದಿದೆ. ರಾಜ್ಯದಲ್ಲಿ ಮಳೆ ಬೆಳೆಯುತ್ತಿದ್ದು ಸಂತೋಷವಾಗಿದೆ ವಿಪಕ್ಷದವರಿಗೆ ಉತ್ತರ ಕೊಡುವುದಿಲ್ಲ. ಕಳೆದ ಬಾರಿ ನನಗೆ ಅನುಭವ ಇರಲಿಲ್ಲ ಹೊಸದಾಗಿ ಮಂತ್ರಿಯಾಗಿದ್ದೆ, ನೀರಿನ ಕೊರತೆ ಸಾಕಷ್ಟು ಸಮಸ್ಯೆ ಉಂಟಾಗಿತ್ತು. ಶರಾವತಿ ನದಿ ನೀರಿನಿಂದ ಸಾಗರ ಹೊಸನಗರ ಸೊರಬ ತಾಲೂಕುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.  

7400 ಕೋಟಿ ವೆಚ್ಚದಲ್ಲಿ ಸರ್ಕಾರದಿಂದಲೇ ಹೆಮ್ಮಿಗೆಪುರದಲ್ಲಿ ಸ್ಕೈಡೆಕ್‌: ಡಿ.ಕೆ.ಶಿವಕುಮಾರ್

ನದಿ ಮುಳುಗಡೆ ಸಂತ್ರಸ್ತರ ಪರವಾಗಿ ಮಲೆನಾಡಿನ ಜನಾಕ್ರೋಶ ಪ್ರತಿಭಟನೆ ನಡೆಸಿದ್ದೆವು . ಒತ್ತುವರಿ ಕಾನೂನು ಹಿನ್ನೆಲೆ ರೈತರಿಗೆ ತೊಂದರೆ ಉಂಟಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ಶರಾವತಿ, ಚಕ್ರ , ಸಾವೆಹಕ್ಲು ಮುಳುಗಡೆ ಸಂತ್ರಸ್ಥರ ಪರವಾಗಿ ವಕಾಲತ್ತು ನಡೆಸಿದ್ದೇವೆ. ನದಿ ಸಂತ್ರಸ್ತರ ಸಮಸ್ಯೆ ಪರಿಹಾರಕ್ಕೆ ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಅರಣ್ಯ ಇಲಾಖೆ ಯಾವಾಗಲೂ ಒಕ್ಕಲೆಬ್ಬಿಸುವ ಕೆಲಸವನ್ನು ಮಾಡುತ್ತಿದೆ. ಸರ್ಕಾರದಲ್ಲಿ ವಿಪಕ್ಷಗಳ ಜವಾಬ್ದಾರಿ ಹೆಚ್ಚಿದೆ. ಸದನದ ಬಾವಿಗೆ ಬಂದು ಪ್ರತಿಭಟನೆ ನಡೆಸಬಾರದು. ನೀರಿಲ್ಲದ ಬಾವಿಗೆ ಬಂದು ಬೀಳುವುದು ಉಪಯೋಗ ಆಗುವುದಿಲ್ಲ ಎಂದು ವಿಪಕ್ಷಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.

click me!