ಪೊಲೀಸ್ ಇಲಾಖೆಯನ್ನೇ ಕೇಸರಿಕರಣ ಮಾಡಲು ಹೊರಟಿದ್ದೀರಾ... ಅಧಿಕಾರಿಗಳ ವಿರುದ್ಧ ಡಿಕೆಶಿ ಗರಂ

By Gowthami KFirst Published May 23, 2023, 4:44 PM IST
Highlights

ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲು ಹಾಕ್ತಿರಿ ಅಂದರೆ ಹೇಗೆ? ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ನಾವು ಬಿಡೊಲ್ಲ ಎಂದು ಡಿಸಿಎಂ ಪೊಲೀಸರಿಗೆ ಖಡಕ್ ಸಂದೇಶ ನೀಡಿದ್ದಾರೆ.

ಬೆಂಗಳೂರು (ಮೇ.23):  ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಂದು ಪೊಲೀಸ್ ಅಧಿಕಾರಿಗಳು ಮತ್ತು ಸರ್ಕಾರಿ ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದರು.  ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳನ್ನು  ಡಿಸಿಎಂ ಡಿಕೆ ಶಿವಕುಮಾರ್ ತರಾಟೆ ತೆಗೆದುಕೊಂಡರು. ನೀವು ಪೊಲೀಸ್ ಇಲಾಖೆಯನ್ನೇ ಕೇಸರಿಕರಣ ಮಾಡಲು ಹೊರಟಿದ್ದೀರಾ? ನಮ್ಮ ಸರ್ಕಾರದಲ್ಲಿ ಇದಕ್ಕೆ ಅವಕಾಶ ಕೊಡೊಲ್ಲ. ಮಂಗಳೂರಿನಲ್ಲಿ ಪೊಲೀಸರೇ ಕೇಸರಿ ಶಾಲು ಹಾಕ್ತಿರಿ ಅಂದರೆ ಹೇಗೆ? ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ನಮ್ಮ ಸರಕಾರದಲ್ಲಿ ಪೊಲೀಸ್ ಇಲಾಖೆಯನ್ನ ಕೇಸರಿಕರಣ ಮಾಡಲು ನಾವು ಬಿಡೊಲ್ಲ. ಮಂಗಳೂರು, ಬಿಜಾಪುರ, ಬಾಗಲಕೋಟದಲ್ಲಿ ನೀವು ಹೇಗೆ ಕೇಸರಿ ಬಟ್ಟೆ ಹಾಕೊಂಡು ಇಲಾಖೆಗೆ ಅವಮಾನ ಮಾಡಿದ್ರಿ ಅಂತಾ ಗೊತ್ತಿದೆ. ಈ‌ ಸಭೆಗೂ ಕೇಸರಿ ಶಾಲು ಹಾಕಿಕೊಂಡು ಬರಬೇಕಾಗಿತ್ತು. ದೇಶದ ಬಗ್ಗೆ ಗೌರವ ಇದ್ರೆ ರಾಷ್ಟ್ರ ಧ್ವಜ ಹಾಕೊಂಡು ಕೆಲಸ ಮಾಡಬೇಕಿತ್ತು. PSI ಅಕ್ರಮದಲ್ಲಿ ಒಬ್ಬ ಎಡಿಜಿಪಿ ಪೇಪರ್ ತಿದ್ದುತ್ತಾರೆ ಅಂದರೆ ಇಲಾಖೆ ಎಷ್ಟು ಕೆಟ್ಟು ಹೋಗಿದೆ? ಪೊಲೀಸ್ ಇಲಾಖೆ ಘನತೆಯನ್ನು ನೀವು ಹಾಳು‌ ಮಾಡಿದ್ದೀರಿ. ಇದನ್ನ ನಾವು ಸಹಿಸೊಲ್ಲ. ನಮ್ಮ ಸರ್ಕಾರದಲ್ಲಿ ಎಲ್ಲವೂ ಕ್ಲೀನ್ ಆಗಬೇಕು. ಜನ ದೊಡ್ಡ ಬದಲಾವಣೆ ನಿರೀಕ್ಷೆ ಮಾಡಿದ್ದಾರೆ. ಅದರಂತೆ ಪೊಲೀಸ್ ಇಲಾಖೆಯಲ್ಲಿ ಬದಲಾವಣೆ ಆಗಬೇಕು. ನೀವು ಯಾರು ನಮಗೆ ಹಣ ಕೊಡೋದು ಬೇಡ. ಉತ್ತಮವಾಗಿ ಕೆಲಸ ಮಾಡಿದ್ರೆ ಸಾಕು ಎಂದು ಹಿರಿಯ ಪೊಲೀಸರಿಗೆ ಡಿಸಿಎಂ ಡಿಕೆಶಿವಕುಮಾರ್ ಖಡಕ್ ಸಂದೇಶ ನೀಡಿದ್ದಾರೆ.

ನೀವು ಸ್ವತಂತ್ರವಾಗಿ, ಮುಕ್ತವಾಗಿ ಕೆಲಸ ಮಾಡಿ ,ನಿಮ್ಮ ಕೆಲಸದಲ್ಲಿ ನಾವು ಯಾವುದೇ ಕಾರಣಕ್ಕೂ ಮಧ್ಯ ಪ್ರವೇಶಿಸುವುದಿಲ್ಲ. ಸಮಸ್ಯೆಗಳೊಂದಿಗೆ ಜನಸಾಮಾನ್ಯರು ಪೋಲಿಸ್ ಠಾಣೆಗೆ ಬರುತ್ತಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಜನರಿಗೆ ವಿಶ್ವಾಸ ಮೂಡುವ ರೀತಿಯಲ್ಲಿ ಕೆಲಸ ಮಾಡಿ ಎಂದು  ಸಿದ್ದರಾಮಯ್ಯ ಮತ್ತು ಡಿಕೆಶಿ ಸಲಹೆ ನೀಡಿದ್ದಾರೆ.

ಉರಿಗೌಡ-ನಂಜೇಗೌಡ ಕೇಸಲ್ಲಿ ನಮ್ಮ ವಿರುದ್ಧ ನಿಂತ್ರಿ, ಇನ್ನು ಅದೆಲ್ಲ ನಡೆಯಲ್ಲ: ಪೊಲೀಸರಿಗೆ ಡಿಕೆಶಿ ವಾರ್ನಿಂಗ್

ಮೊದಲ ಸಭೆಯಲ್ಲಿ ಖಡಕ್ ಸಂದೇಶ: ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯಲ್ಲಿ ಕೆಲ ಸೂಚನೆ ಕೊಟ್ಟ ಸಿಎಂ ಮತ್ತು ಡಿಸಿಎಂ ಮೊದಲ ಸಭೆಯಲ್ಲಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸಂದೇಶ ರವಾನೆ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಹೋಗಬೇಕು. ಯಾವುದೇ ಅಶಾಂತಿ ಘಟನೆಗಳಿಗೆ ಅವಕಾಶ ನೀಡಬಾರದು. ಸರ್ಕಾರ ಯಾವಾಗಲೂ ಪೊಲೀಸರ ಜೊತೆ ಇರಲಿದೆ. ಪೊಲೀಸರಿಗೆ ಫ್ರೀ ಹ್ಯಾಂಡ್ ಇರುತ್ತೆ ಅದರ ದುರ್ಬಳಕೆ ಆಗಬಾರದು. ಕೋಮು ಸಂಘರ್ಷಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಟ್ರಾಫಿಕ್ ಸಮಸ್ಯೆ ಬಗ್ಗೆ ಹೆಚ್ಚು ನಿಗಾವಹಿಸಬೇಕು. ಬೆಂಗಳೂರಿನಲ್ಲಿ ಹೆಚ್ಚು ಟ್ರಾಫಿಕ್ ಸಮಸ್ಯೆ ಇದೆ. ಇದನ್ನ ನಿಯಂತ್ರಣಕ್ಕೆ ಬೇಕಾದ ಬದಲಾವಣೆ ತನ್ನಿ ಎಂದಿದ್ದಾರೆ.

ಕರ್ನಾಟಕದಲ್ಲಿ ಸುಭದ್ರ ಸರ್ಕಾರ ರಚನೆ ಬೆನ್ನಲ್ಲೇ ಅಲುಗಾಡುತ್ತಿದೆ ರಾಜಸ್ಥಾನ ಕಾಂಗ್ರೆಸ್ ಸರ್ಕಾರ!

ಈ ಹಿಂದಿನ 4 ವರ್ಷದ ವ್ಯವಸ್ಥೆ ನಮಗೆ ಬೇಡ: 
ನಮ್ಮ ಸರ್ಕಾರದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಇರಬೇಕು. ಈ ಹಿಂದಿನ 4 ವರ್ಷದ ವ್ಯವಸ್ಥೆ ನಮಗೆ ಬೇಡ. ನಮ್ಮ ಸರ್ಕಾರದಲ್ಲಿ ಕಾನೂ‌ನು ಎಲ್ಲರಿಗೂ ಒಂದೇ. ಕಾನೂನು ಪಾಲನೆ ಮಾಡಬೇಕು. ಎಷ್ಟೇ ದೊಡ್ಡವರಾದ್ರು ಕಾನೂನು ಎಲ್ಲರಿಗೂ ಒಂದೇ ಇರಬೇಕು. ರೌಡಿಸಂ ಚಟುವಟಿಕೆಗಳ ಮೇಲೆ ಹೆಚ್ಚು ನಿಗಾ ಇಡಬೇಕು. ಯಾವುದೇ ಕಾನೂನು ಉಲ್ಲಂಘನೆ, ರೌಡಿಸಂ ಚಟುವಟಿಕೆಗಳು ನಡೆದರೆ ಅದಕ್ಕೆ ಆಯಾ ವಲಯದ ಡಿಸಿಎಪಿಗಳು, ಎಸ್ಪಿಗಳೇ ಹೊಣೆ ಮಾಡ್ತೀವಿ. ಅಕ್ರಮ ನೈಟ್ ಕ್ಲಬ್ ಗಳ ಮೇಲೆ ಪೊಲೀಸರು ನಿಗಾ ಇಡಬೇಕು. ಒಳ್ಳೆ ಕೆಲಸ ಮಾಡೋರ ಜೊತೆ ಸರ್ಕಾರ ಇರುತ್ತೆ. ಡ್ರಗ್ಸ್ ,ಅಕ್ರಮ ಚಟುವಟಿಕೆ ವಿರುದ್ದ ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳಿ. ಡ್ರಗ್ ಚಟುವಟಿಕೆ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಿ. ಇಂತಹವರ ಮೇಲೆ ನಿಗಾ ಇಡಿ. ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚು ನಿಗಾ ಇಡಬೇಕು ಅಂತ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

click me!