ದಕ್ಷಿಣ ಭಾರತ ನಗರಾಭಿವೃದ್ಧಿ ಸಚಿವರ ಸಮ್ಮೇಳನ ಅ. 30ಕ್ಕೆ: ಡಿಸಿಎಂ ಡಿಕೆ ಶಿವಕುಮಾರ

Kannadaprabha News, Ravi Janekal |   | Kannada Prabha
Published : Oct 24, 2025, 12:41 PM IST
DK Shivakumar

ಸಾರಾಂಶ

ಬೆಂಗಳೂರಿನಲ್ಲಿ ಅಕ್ಟೋಬರ್ 30 ರಂದು ದಕ್ಷಿಣ ಭಾರತದ ನಗರಾಭಿವೃದ್ಧಿ ಸಚಿವರ ಸಮ್ಮೇಳನ ನಡೆಯಲಿದ್ದು, ಕೇಂದ್ರ ಸಚಿವ ಮನೋಹರ ಲಾಲ್ ಖಟ್ಟರ್ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಅನುದಾನದ ಬೇಡಿಕೆ ಹಾಗೂ ಜಿಬಿಎ ವ್ಯಾಪ್ತಿಗೆ ಹೊಸ ಪ್ರದೇಶಗಳನ್ನು ಸೇರಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಚರ್ಚಿಸಲಿದ್ದಾರೆ.

ಬೆಂಗಳೂರು (ಅ.24): ದಕ್ಷಿಣ ಭಾರತದ ರಾಜ್ಯಗಳ ನಗರಾಭಿವೃದ್ಧಿ ಸಚಿವರ ಸಮ್ಮೇಳನವನ್ನು ಬೆಂಗಳೂರಿನಲ್ಲಿ ಅ.30ಕ್ಕೆ ನಡೆಸಲು ಕೇಂದ್ರ ಇಂಧನ, ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಮನೋಹರ ಲಾಲ್ ಖಟ್ಟರ್ ಸಮ್ಮತಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕೇಂದ್ರದ ನಗರಾಭಿವೃದ್ಧಿ ಸಚಿವರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ನಮ್ಮ ಬೇಡಿಕೆಗಳನ್ನು ಅವರ ಮುಂದೆ ಇಡುತ್ತೇವೆ. ಈಗಾಗಲೇ ಹಲವು ಬಾರಿ ಕೇಂದ್ರ ಸಚಿವರು ಹಾಗೂ ಪ್ರಧಾನಮಂತ್ರಿ ಅವರನ್ನು ಭೇಟಿ ಮಾಡಿ ಅನುದಾನ ಕೇಳಿದ್ದೇವೆ. ಈಗಲೂ ಕೇಳುತ್ತೇವೆ ಎಂದು ತಿಳಿಸಿದ್ದಾರೆ.

ಜಿಬಿಎ ವ್ಯಾಪ್ತಿಗೆ ಸೇರಲು ಅರ್ಹತೆ ಇರುವ ಬೆಂಗಳೂರು ನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಪ್ರದೇಶಗಳನ್ನು ವೀಕ್ಷಣೆ ಮಾಡಿದ್ದೇನೆ. ಕೆಲ ನಗರ ಸಭೆಗಳು, ಪಟ್ಟಣ ಪಂಚಾಯತಿ ಸೇರಿ ಅನೇಕ ಸ್ಥಳೀಯ ಸಂಸ್ಥೆಗಳ ಗಡಿಪ್ರದೇಶಗಳು ಜಿಬಿಎ ವ್ಯಾಪ್ತಿಗೆ ಸೇರಿದ್ದು, ಶುಕ್ರವಾರ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದಿದ್ದೇನೆ. ಈ ಪ್ರದೇಶದ ಕೆಲ ಭಾಗಗಳನ್ನು ಮುಂದಿನ ದಿನಗಳಲ್ಲಿ ಜಿಬಿಎ ಅಡಿ ಬರುವ ಬೆಂಗಳೂರು ಪಾಲಿಕೆಗಳ ವ್ಯಾಪ್ತಿಗೆ ಸೇರಿಸಲಾಗುವುದು. ಬಿ.ಎಸ್. ಪಾಟೀಲ್ ಸಮಿತಿ ಮೂಲಕ ಜಿಬಿಎ ವ್ಯಾಪ್ತಿಗೆ ಸೇರಿಸಬಹುದಾದ ಪ್ರದೇಶಗಳ ಬಗ್ಗೆ ವರದಿ ತಯಾರಾಗುತ್ತಿದೆ. ಈ ವಿಚಾರವಾಗಿ ಶಾಸಕರು, ಸಂಸದರು, ಸಾರ್ವಜನಿಕರು ಸಂಘ ಸಂಸ್ಥೆಗಳ ಜತೆ ಚರ್ಚಿಸಲು ಸೂಚಿಸಿದ್ದೇವೆ ಎಂದರು.

ಎಲೆಕ್ಟ್ರಾನಿಕ್ ಸಿಟಿ ಬಡಾವಣೆಗಳಿಗೆ ಡಿಸಿಎಂ ಭೇಟಿ:

ಎಲೆಕ್ಟ್ರಾನಿಕ್ ಸಿಟಿ ಪ್ರದೇಶದ ವಿವಿಧ ಬಡಾವಣೆಗಳಿಗೆ ಉಪಮುಖ್ಯಮಂತ್ರಿ ಶಿವಕುಮಾರ್‌ ಅವರು ಭೇಟಿ ನೀಡಿ ಪರಿಶೀಲಿಸಿದರು.

ಎಲೆಕ್ಟ್ರಾನಿಕ್ ಸಿಟಿ, ವೈಟ್ ಫೀಲ್ಡ್, ಏರ್ ಪೋರ್ಟ್ ರಸ್ತೆ, ಯಲಹಂಕದ ಕೆಲ ಪ್ರದೇಶ ಇನ್ನೂ ಪಂಚಾಯತಿಯಾಗಿಯೇ ಉಳಿದುಕೊಂಡಿವೆ. ಎಲ್ಲೆಲ್ಲಿ ನಗರೀಕರಣ ಹೆಚ್ಚಾಗಿದೆ, ಆ ಪ್ರದೇಶಗಳಲ್ಲಿ ಅಚ್ಚುಕಟ್ಟಾಗಿ ಯೋಜನೆ ರೂಪಿಸಬೇಕಿದೆ. ಕೆಲ ಪ್ರದೇಶಗಳಲ್ಲಿ ಕಸ ಎತ್ತುತ್ತಾರೆ, ಮತ್ತೆ ಕೆಲ ಪ್ರದೇಶಗಳಲ್ಲಿ ಕಸ ಎತ್ತದೇ ಅವು ಪಂಚಾಯಿತಿ ವ್ಯಾಪ್ತಿ ಎಂದು ಕಾರಣ ಹೇಳುತ್ತಾರೆ. ಹೀಗಾಗಿ ಅಧಿಕಾರಿಗಳಿಗೆ ಹೊಣೆಗಾರಿಕೆ ನಿಗದಿ ಪಡಿಸಬೇಕಾಗಿದೆ. ನಕ್ಷೆಯಲ್ಲಿ ಆ ಪ್ರದೇಶಗಳನ್ನು ನೋಡುವುದಕ್ಕಿಂತ ಅಲ್ಲಿಗೆ ಹೋಗಿ ಕಣ್ಣಾರೆ ನೋಡಬೇಕು ಭೇಟಿ ನೀಡಿದ್ದೇನೆ ಎಂದು ತಿಳಿಸಿದರು.

ಯತೀಂದ್ರ ಹೇಳಿಕೆಗೆ ಪ್ರತಿಕ್ರಿಯೆ ಇಲ್ಲ: ಡಿಸಿಎಂ

ಇತರೆ ಶಾಸಕರಂತೆ ಯತೀಂದ್ರ ವಿರುದ್ಧ ಶಿಸ್ತು ಕ್ರಮವಿಲ್ಲವೇ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಡಿ.ಕೆ.ಶಿವಕುಮಾರ್‌, ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಸೂಕ್ತ ಸಮಯದಲ್ಲಿ ಪ್ರತಿಕ್ರಿಯೆ ನೀಡುತ್ತೇನೆ ಎಂದು ತಿಳಿಸಿದರು.

ಇನ್ನು ಆಳಂದ ಕ್ಷೇತ್ರದಲ್ಲಿ 6 ಸಾವಿರ ಮತಗಳನ್ನು ತಿರುಚಿರುವ ಬಗ್ಗೆ ಯಾವುದೇ ಅನುಮಾನವಿಲ್ಲ. ಮೊಬೈಲ್‌ ಸಂಖ್ಯೆಗಳ ಮೂಲಕ ಈ ಕೆಲಸ ಮಾಡಿದ್ದಾರೆ. ಈ ಬಗ್ಗೆ ಆ ಸಮಯದಲ್ಲೇ ಅಧಿಕಾರಿಗಳು ದೂರು ನೀಡಿದ್ದಾರೆ. ಈ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Farmer wins battle: ರೈತನಿಗೆ ಪರಿಹಾರ ನೀಡದ ಶಿವಮೊಗ್ಗ ಡಿಸಿ ಕಚೇರಿ, ಕಾರು ಜಪ್ತಿಗೆ ಕೋರ್ಟ್ ಆದೇಶ!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!