ಗೋವಾ, ಕೇರಳ ಮಾದರಿಯಲ್ಲಿ ಕರ್ನಾಟಕ ಕರಾವಳಿ ಅಭಿವೃದ್ಧಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ; ಡಿ.ಕೆ. ಶಿವಕುಮಾರ್

Published : Jan 10, 2026, 10:44 AM IST
Mangaluru beach DK Shivakumar

ಸಾರಾಂಶ

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರಾವಳಿ ಕರ್ನಾಟಕವನ್ನು ಕೇರಳ ಮತ್ತು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಹಬ್ ಆಗಿ ಪರಿವರ್ತಿಸುವ ಸರ್ಕಾರದ ಯೋಜನೆ ಪ್ರಕಟಿಸಿದ್ದಾರೆ. ಇಲ್ಲಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ರೂಪಿಸಿ, ಮೂಲಸೌಕರ್ಯ ಅಭಿವೃದ್ಧಿಪಡಿಸಿ, ಸ್ಥಳೀಯ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದಾರೆ.

ದಕ್ಷಿಣ ಕನ್ನಡ (ಜ.10): ಕರ್ನಾಟಕದ ಕರಾವಳಿ ಭಾಗವನ್ನು ಕೇರಳ ಮತ್ತು ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಹಬ್ ಆಗಿ ಪರಿವರ್ತಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ಸಭೆಯ ನಂತರ ಮಾತನಾಡಿದ ಅವರು, ಈ ಭಾಗದ ನೈಸರ್ಗಿಕ ಸಂಪತ್ತನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಈ ಹಿಂದಿನ ಸರ್ಕಾರಗಳು ಹಾಗೂ ಪ್ರಸ್ತುತ ಸರ್ಕಾರ ಕೂಡ ನಿರೀಕ್ಷಿತ ಮಟ್ಟದಲ್ಲಿ ಯಶಸ್ವಿಯಾಗಿಲ್ಲ ಎಂದು ಪ್ರಾಮಾಣಿಕವಾಗಿ ಒಪ್ಪಿಕೊಂಡರು.

ಸ್ಥಳೀಯವಾಗಿ ಉದ್ಯೋಗ ಸೃಷ್ಟಿಯ ಗುರಿ:

ಮಂಗಳೂರಿನ ಯುವಜನತೆ ಬುದ್ಧಿವಂತರು ಮತ್ತು ಪ್ರಜ್ಞಾವಂತರಾಗಿದ್ದಾರೆ. ಆದರೆ ಇಲ್ಲಿ ಸರಿಯಾದ ಅವಕಾಶಗಳಿಲ್ಲದೆ ಉದ್ಯೋಗಕ್ಕಾಗಿ ಮುಂಬೈ, ದುಬೈ ಮತ್ತು ಬೆಂಗಳೂರಿನಂತಹ ನಗರಗಳಿಗೆ ವಲಸೆ ಹೋಗುತ್ತಿದ್ದಾರೆ. ನಮ್ಮ ಗುರಿ ಈ ವಲಸೆಯನ್ನು ತಪ್ಪಿಸುವುದಾಗಿದೆ. ವಿದೇಶಗಳಲ್ಲಿರುವ ಇಲ್ಲಿನ ಉದ್ಯಮಿಗಳು ತಮ್ಮ ಸ್ವಂತ ಊರಿಗೆ ಮರಳಿ ಹೂಡಿಕೆ ಮಾಡಲು ಉತ್ಸುಕರಾಗಿದ್ದಾರೆ. ಅವರಿಗೆ ಪೂರಕವಾದ ವಾತಾವರಣ ನಿರ್ಮಿಸಿದರೆ ಸ್ಥಳೀಯವಾಗಿ ಸಾವಿರಾರು ಉದ್ಯೋಗಗಳು ಸೃಷ್ಟಿಯಾಗಲಿವೆ' ಎಂದು ಡಿ.ಕೆ. ಶಿವಕುಮಾರ್ ಆಶಯ ವ್ಯಕ್ತಪಡಿಸಿದರು.

ಹೊಸ ಪ್ರವಾಸೋದ್ಯಮ ನೀತಿ (Tourism Policy)

ಕರಾವಳಿ ಭಾಗದ ಅಭಿವೃದ್ಧಿಗಾಗಿಯೇ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನು ರೂಪಿಸಲು ಸರ್ಕಾರ ಸಿದ್ಧತೆ ನಡೆಸುತ್ತಿದೆ. ಈ ಬಗ್ಗೆ ಅಧಿಕಾರಿಗಳು, ಉದ್ಯಮಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸಲಾಗಿದೆ. 'ಇಲ್ಲಿನ ಶಾಸಕರು ಕೂಡ ಪಕ್ಷಭೇದ ಮರೆತು ಅಭಿವೃದ್ಧಿಗೆ ಆಸಕ್ತಿ ತೋರಿದ್ದಾರೆ. ಪ್ರವಾಸೋದ್ಯಮ ಬೆಳೆಯಬೇಕಾದರೆ ಮೂಲಸೌಕರ್ಯ ಮುಖ್ಯ. ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಫೈವ್ ಸ್ಟಾರ್ ಹೋಟೆಲ್‌ಗಳ ಕೊರತೆಯಿದೆ, ಅದನ್ನು ನೀಗಿಸಲು ಖಾಸಗಿ ಸಹಭಾಗಿತ್ವದ (PPP) ಅಗತ್ಯವಿದೆ ಎಂದು ಹೇಳಿದರು.

ಸಮಸ್ಯೆಗಳ ಪರಿಹಾರಕ್ಕೆ ಕ್ರಮ

ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮಕ್ಕೆ ಅಡ್ಡಿಯಾಗಿರುವ ಸಿ.ಆರ್.ಜೆಡ್ (CRZ) ನಿಯಮಗಳು, ರಕ್ಷಣೆ (Defense) ಮತ್ತು ಕೋಸ್ಟಲ್ ಪೊಲೀಸ್ ಇಲಾಖೆಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆಯಲಾಗಿದೆ. ಉದ್ಯಮಿಗಳು ಮತ್ತು ಸಾರ್ವಜನಿಕರು ತಮ್ಮ ಸಲಹೆಗಳನ್ನು ನೀಡಬಹುದು. ಸರ್ಕಾರವು ಹೂಡಿಕೆದಾರರಿಗೆ ಸಂಪೂರ್ಣ ಸಹಕಾರ ನೀಡಲಿದೆ ಎಂದು ಡಿಸಿಎಂ ಭರವಸೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಡಿವೋರ್ಸ್ ಮಹಿಳೆಗೆ ಬಾಳು ಕೊಡೋದಾಗಿ ಮದುವೆ, ಕೈಗೆ ಮಗು ಕೊಟ್ಟು 36 ಲಕ್ಷ ಪಡೆದು ಎಸ್ಕೇಪ್
ತಾಯಿ ಸಾವಿನ ಧಾರ್ಮಿಕ ವಿಧಿ ವಿಧಾನಕ್ಕೆ ತವರಿಗೆ ಹೊರಟ ಪತ್ನಿ ಹತ್ಯೆ, ಗಂಡನೂ ಸಾವು