
ಮಂಡ್ಯ (ಫೆ.18): 'ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ, ಸರ್ಕಾರದ ಗ್ಯಾರಂಟಿ ಯೋಜನೆಗಳ ಸಮಾವೇಶದಲ್ಲಿ ಪಾಲ್ಗೊಳ್ಳುವ ಮೊದಲು ಮುಖ್ಯಮಂತ್ರಿಗಳು ಸುದ್ದಿಗಾರರ ಜೊತೆ ಮಾತನಾಡಿದರು.
'ಲೋಕಸಭಾ ಚುನಾವಣೆ ಎದುರಿಸಲು ನಾವು ಸಿದ್ಧರಾಗಿದ್ದೇವೆ. ಬಿಜೆಪಿ ಮುಖಂಡರು ಬರೀ ಬುರುಡೆ ಬಿಡುತ್ತಿದ್ದಾರೆ. ಬಿಜೆಪಿಯ ಸುಳ್ಳುಗಳನ್ನು ಜನ ನಂಬುವುದಿಲ್ಲ. ಜನ ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡುತ್ತಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಸಿಎಂ, ಡಿಸಿಎಂ ಕೂಡ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿ ಎಂದು ಸಚಿವ ಮಹದೇವಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸ್ಥಳೀಯ ಮಟ್ಟದಲ್ಲಿ ಯಾರಿಗೆ ಒಲವು ಇರುತ್ತದೆಯೋ ಅವರು ಅಭ್ಯರ್ಥಿ ಆಗುತ್ತಾರೆ. ಸ್ಥಳೀಯರು ಯಾರ ಹೆಸರು ಹೇಳುತ್ತಾರೋ ಅವರಿಗೆ ಟಿಕೆಟ್ ಕೊಡುತ್ತೇವೆ. ಮಹದೇವಪ್ಪ ಅವರ ಹೆಸರು ಹೇಳಿದರೆ ಮಹದೇವಪ್ಪಗೆ, ಬೇರೆಯವರ ಹೆಸರು ಹೇಳಿದರೆ ಬೇರೆಯವರಿಗೆ ಟಿಕೆಟ್ ಕೊಡುತ್ತೇವೆಂದು ಹೇಳಿದರು.
ಬಜೆಟ್‌ನಲ್ಲಿ ನಟ ಧನಂಜಯ್; ಡಾಲಿ ಬರೆದ ಸಾಲುಗಳನ್ನ ಮಂಡಿಸಿದ ಮುಖ್ಯಮಂತ್ರಿಗಳು
ಮೈಸೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಟ ಡಾಲಿ ಧನಂಜಯ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯಿಸಿ 'ನನಗೆ ಆ ಬಗ್ಗೆ ಗೊತ್ತಿಲ್ಲ. ನಮ್ಮ ಪಕ್ಷದಲ್ಲಿ ಅದರ ಬಗ್ಗೆ ಚರ್ಚೆ ಆಗಿಲ್ಲ. ನನಗೆ ಗೊತ್ತೂ ಇಲ್ಲ, ಚರ್ಚೆನೂ ಇಲ್ಲ' ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ