ಬೆಂಗಳೂರಿನ ಹೊಸಕೆರೆಹಳ್ಳಿಯ ಕೆರೆಯಲ್ಲಿ ರಸ್ತೆ ನಿರ್ಮಾಣ ಮಾಡಿದ ಬಿಬಿಎಂಪಿ ಅಧಿಕಾರಿಗಳನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಮಾನತುಗೊಳಿಸಿದ್ದಾರೆ.
ಬೆಂಗಳೂರು (ಜೂ.05): ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ ಗಳನ್ನು ಇವತ್ತು ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ಕೊಟ್ಟರು.
ಬೆಂಗಳೂರು ಜನಪ್ರತಿನಿಧಿಗಳ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ಹೊಸಕೆರೆಹಳ್ಳಿಯ ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದಿರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ? ಯಾರ್ಯಾರು ಇದರಲ್ಲಿ ಭಾಗಿಯಾಗಿದ್ದೀರಿ ಎಂದು ಶಿವಕುಮಾರ್ ಅವರು ಸಭೆಯಲ್ಲಿ ಪ್ರಶ್ನಿಸಿದರು. ಅಧಿಕಾರಿಗಳು ಇದಕ್ಕೆ ಉತ್ತರಿಸಲು ತಡಬಡಾಯಿಸಿದರು. ತಕ್ಷಣವೇ ಹೊಸಕೆರೆಹಳ್ಳಿ ಕೆರೆಯನ್ನು ಇಬ್ಭಾಗಿಸಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದರು.
undefined
ಬೆಂಗಳೂರಿನ ಪೀಪಲ್ಸ್ ಮ್ಯಾನ್ ಖ್ಯಾತಿಯ ಇನ್ಸ್‌ಪೆಕ್ಟರ್ ಮಂಜುನಾಥ್ ಲಿವರ್ ಕ್ಯಾನ್ಸರ್‌ಗೆ ಬಲಿ
ಈಜಿಪುರ ಮೇಲ್ಸೇತುವೆ ಶೀಘ್ರ ಪೂರ್ಣಗೊಳಿಸಲು ಆದೇಶ: ಈಜಿಪುರ ಮೇಲ್ಸೇತುವೆ ಯೋಜನೆಯನ್ನು ತಕ್ಷಣ ಪೂರ್ಣಗೊಳಿಸಬೇಕು. ಈ ಬಗ್ಗೆ ಅಗತ್ಯವಿರುವ ಆಡಳಿತಾತ್ಮಕ ನಿರ್ಣಯಗಳನ್ನು ತಕ್ಷಣ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ಕೊಟ್ಟರು. ಬೆಂಗಳೂರಿನ ಮುಂದಿನ 20 ವರ್ಷಗಳ ಅಗತ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆಗಳನ್ನು ರೂಪಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಹೇಳಿದರು. ಬೆಂಗಳೂರು ಬಗ್ಗೆ ದೂರದೃಷ್ಟಿ ಯೋಜನೆಗಳನ್ನು ರೂಪಿಸದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಕೋರ್ಟ್ ತೀರ್ಮಾನ ನೋಡಿಕೊಂಡು ಚುನಾವಣೆ : ಬೆಂಗಳೂರಿನ ಕೆಲವೆಡೆ ಹೋರ್ಡಿಂಗ್ಸ್ ಇವೆ. ಇದಕ್ಕೆ ಅನುಮತಿ ಕೊಟ್ಟವರು ಯಾರು? ಒಂದೊಂದು ಪ್ರದೇಶಕ್ಕೆ ಒಂದೊಂದು ನೀತಿ ಹೇಗೆ ಎಂದು ಪ್ರಶ್ನಿಸಿದರು. ಎಲ್ಲೆಡೆ ಅನ್ವಯ ಆಗುವಂತೆ ಸಾಮಾನ್ಯ ನೀತಿ ರೂಪಿಸುವಂತೆ ಸೂಚಿಸಿದರು. ಬಿಬಿಎಂಪಿ ಚುನಾವಣೆ ವಿಚಾರವಾಗಿ ಚುನಾವಣೆ ಮಾಡಲು ಸಲಹೆ ಬಂದಿದೆ. ಆದರೆ ಎಲ್ಲಾ ವಿಚಾರ ಕೋರ್ಟ್‌ನಲ್ಲಿದೆ. ಕೋರ್ಟ್‌ನಲ್ಲಿರೋದ್ರಿಂದ ತಕ್ಷಣ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಮುಂದೆ ನೋಡಿಕೊಂಡು ಚುನಾವಣೆಯನ್ನು ಮಾಡುತ್ತೇವೆ ಎಂದು ಹೇಳಿದರು.
6 ತಿಂಗಳ ಪಾಲಿಕೆ ಟೆಂಡರ್ ವಿವರ ಕೇಳಿದ ಸರ್ಕಾರ: ಬಿಬಿಎಂಪಿಗೆ ಸಿಎಂರಿಂದಲೇ ಟಿಪ್ಪಣಿ!
ಬೆಂಗಳೂರಿನ ವಿವಿಧ ಇಲಾಖೆಗಳ ಸಮಸ್ಯೆಗಳ ಚರ್ಚೆ: ನಂತರ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಬೆಂಗಳೂರಿನ ಬಹುತೇಕ ಎಲ್ಲಾ ಶಾಸಕರು, ಸಂಸದರು ಎಲ್ಲರೂ ಸಭೆಯಲ್ಲಿ ಭಾಗವಹಿಸಿ ಬಿಬಿಎಂಪಿ, ಬಿಡಿಎ, ಜಲಮಂಡಳಿ ಸೇರಿ ವಿವಿಧ ಇಲಾಖೆಗಳ ಸಂಬಂಧಿಸಿದಂತೆ ಸಮಸ್ಸಯೆಗಳನ್ನು ಹೇಳಿಕೊಂಡಿದ್ದಾರೆ. ಹನ್ನೊಂದನೇ ತಾರೀಖು ಮಹಿಳೆಯರ ಉಚಿತ ಪ್ರಯಾಣಕ್ಕೆ ವಿಧಾನಸೌಧದ ಮುಂದೆ ಚಾಲನೆ ಕೊಡಲಿದ್ದೇವೆ. ಡಿಕೆಶಿ ಶಿವಕುಮಾರ್ ರವರು ಚಾಮುಂಡೇಶ್ವರಿಗೆ ಪೂಜೆ ಸಲ್ಲಿಕೆ ಹಾಗೂ ಚಾಲನೆ ವಿಚಾರ ಗೊತ್ತಿಲ್ಲ. ರ್ಯಾಶ್ ಡ್ರೈವಿಂಗ್ , ಪ್ರಯಾಣಿಕರ ಜೊತೆ ಕೆಲ ಚಾಲಕರು, ನಿರ್ವಾಹಕರ ಅನುಚಿತ ವರ್ತನೆ ಆರೋಪ ಹಿನ್ನಲೆಯಲ್ಲಿ ನಾನು ಆದೇಶ ಹೊರಡಿಸುತ್ತೇನೆ. ಸಾರಿಗೆ ಇಲಾಖೆಯ ಸಿಬ್ಬಂದಿಯ ಅನುಚಿತ ವರ್ತನೆ ಸಲ್ಲದು, ಎಲ್ಲರೂ ಸೌಜನ್ಯಯುತ ಕೆಲಸ ಇರಬೇಕು. ಅಪಘಾತದಲ್ಲಿ ಚಾಲಕರ ತಪ್ಪಿದ್ದರೆ ಕ್ರಮವಹಿಸಲಾಗುವುದು ಎಂದು ತಿಳಿಸಿದರು.