ತಮ್ಮ ಮಗನಿಗೆ ಶಾಲೆಯಲ್ಲಿ ಸೀಟು ಕೇಳಲು ವಿಜಯಲಕ್ಷ್ಮಿ ದರ್ಶನ್ ಭೇಟಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

By Kannadaprabha News  |  First Published Jul 25, 2024, 11:07 AM IST

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ಅವರ ಪತ್ನಿ ವಿಜಯಲಕ್ಷ್ಮಿ ಅವರು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಬುಧವಾರ ಭೇಟಿ ಮಾಡಿ ರುವುದು ಸಂಚಲನಕ್ಕೆ ಕಾರಣವಾಗಿದೆ. 


ಬೆಂಗಳೂರು (ಜು.25): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರು ಉಪಮುಖ್ಯ ಮಂತ್ರಿ ಡಿ.ಕೆ. ಶಿವಕುಮಾರ್‌ ಅವರನ್ನು ಬುಧವಾರ ಭೇಟಿ ಮಾಡಿ ರುವುದು ಸಂಚಲನಕ್ಕೆ ಕಾರಣವಾಗಿದೆ. ಆದರೆ ಇದಕ್ಕೆ ಕೂಡಲೇ ಸ್ಪಷ್ಟನೆ ನೀಡಿರುವ ಡಿಕೆಶಿ, 'ವಿಜಯಲಕ್ಷ್ಮೀ ಅವರು ತಮ್ಮ ಮಗನಿಗೆ ನಮ್ಮ ಶಾಲೆಯಲ್ಲಿ ದಾಖಲಾತಿಗೆ ಮನವಿ ಮಾಡಲು ಭೇಟಿಯಾಗಿದ್ದರು. ಅದನ್ನು ಹೊರತು ಪಡಿಸಿ ದರ್ಶನ್ ಬಂಧನದ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ' ಎಂದು ಸ್ಪಷ್ಟಪಡಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ ಅವರು, 'ದರ್ಶನ್-ವಿಜಯಲಕ್ಷ್ಮೀ ಅವರ ಪುತ್ರ ಈ ಹಿಂದೆ ನಮ್ಮ ಶಾಲೆಯಲ್ಲಿಯೇ ವ್ಯಾಸಂಗ ಮಾಡುತ್ತಿದ್ದರು. 

ಕಾರಣಾಂತರಗಳಿಂದ ನಮ್ಮ ಶಾಲೆ ತೊರೆದು ಬೇರೆ ಶಾಲೆಗೆ ಸೇರಿಸಿದ್ದರು. ಈಗ ಮತ್ತೆ ನಮ್ಮ ಶಾಲೆಗೆ ಸೇರಿಸಿ ಕೊಳ್ಳುವಂತೆ ಮನವಿ ಮಾಡಲು ಅವರು ನನ್ನನ್ನು ಭೇಟಿಯಾಗಿ ದ್ದಾರೆ. ಅದಕ್ಕೆ ಸಂಬಂಧಿಸಿದಂತೆ ನಮ್ಮ ಶಾಲೆಯ ಪ್ರಾಂಶುಪಾಲರನ್ನು ಭೇಟಿಯಾಗಲು ಸೂಚಿಸಿದ್ದೇನೆ' ಎಂದರು. 'ವಿಜಯಲಕ್ಷ್ಮೀ ಅವರು ತಮ್ಮ ಮಗನ ಶಿಕ್ಷಣ ದ ಬಗ್ಗೆ ಕಾಳಜಿವಹಿಸಿ ನನ್ನನ್ನು ಭೇಟಿಯಾಗಿ ಸಹಾಯ ಕೇಳಿದ್ದಾರೆ. ಅವರ ಮಗನ ಶಿಕ್ಷಣದ ಬಗೆಗಿನ ಕಾಳಜಿ ನೋಡಿ ಸಂತಸವಾಯಿತು. ಬೇರೆ ಶಾಲೆಗೆ ಸೇರಿಸಿದರೆ ಮಾನಸಿಕವಾಗಿ ತೊಂದರೆ ಯಾಗಬಹುದು. ನಮ್ಮ ಶಾಲೆ ಅವರ ಮನೆಯ ಬಳಿಯಲ್ಲಿಯೇ ಇದೆ. ಹೀಗಾಗಿ ನಮ್ಮ ಶಾಲೆಗೆ ಸೇರಿಸಿಕೊಳ್ಳುವಂತೆ ಕೋರಿದ್ದಾರೆ' ಎಂದರು. 

Latest Videos

undefined

ಪ್ರಣಿತಾ ಸುಭಾಷ್ ಮತ್ತೆ​ ಪ್ರೆಗ್ನೆಂಟ್: ಸಾಮಾಜಿಕ ಜಾಲತಾಣದಲ್ಲಿ ಖುಷಿ ವಿಷಯವನ್ನು ಹಂಚಿಕೊಂಡ ಪೊರ್ಕಿ ನಟಿ

ದರ್ಶನ್ ಕೇಸಲ್ಲಿ ಹಸ್ತಕ್ಷೇಪವಿಲ್ಲ: 'ಜೈಲು ಸೇರಿರುವ ನಟ ದರ್ಶನ್‌ಗೆ ಅನ್ಯಾಯವಾಗಿದ್ದರೆ ನ್ಯಾಯ ಕೊಡಿಸಲಾಗುವುದು' ಎಂದು ಮಂಗಳ ವಾರ ರಾಮನಗರದಲ್ಲಿ ನೀಡಿದ ಹೇಳಿಕೆ ಬಗ್ಗೆ ಸೂಕ್ತ ಸ್ಪಷ್ಟನೆ ನೀಡದೇ ಡಿ.ಕೆ. ಶಿವಕುಮಾರ್ ಜಾರಿಕೊಂಡಿದ್ದಾರೆ. ಬುಧವಾರ ಈ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 'ದರ್ಶನ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಪೊಲೀಸರು ಕೊಲೆ ಪ್ರಕರಣ ತನಿಖೆ ನಡೆಸುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ಪೊಲೀಸ್ ವಿಚಾರಣೆ, ನ್ಯಾಯ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ' ಎಂದರು.

click me!