
ಬೆಂಗಳೂರು(ಸೆ.28): ನಿತ್ಯ 12,500 ಕ್ಯುಸೆಕ್ ನೀರು ಬಿಡುಗಡೆಗೆ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿಯು (CWRC) ತಿರಸ್ಕಾರಿಸಿದ್ದು ಸಂತಸ ತಂದಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ತಮಿಳುನಾಡಿಗೆ ನಿತ್ಯ 3000 ಕ್ಯುಸೆಕ್ ನೀರು ಬಿಡುಗಡೆಗೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಕರ್ನಾಟಕಕ್ಕೆ ಸೂಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 12,500 ಕ್ಯುಸೆಕ್ ನೀರಿಗೆ ತಮಿಳುನಾಡು ಬೇಡಿಕೆ ಇಟ್ಟಿತ್ತು. 3 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಸಮಿತಿ ಶಿಫಾರಸ್ಸು ಮಾಡಿದೆ. ನಮ್ಮ ರಾಜ್ಯದ ಅಧಿಕಾರಿಗಳು ಸಮಿತಿಗೆ ರಾಜ್ಯದ ಬರ ಪರಿಸ್ಥಿತಿಯನ್ನು ಮನವರಿಕೆ ಮಾಡಿದ್ದಾರೆ. ರಾಜ್ಯದ ಪರಿಸ್ಥಿತಿ ಅರ್ಥ ಮಾಡಿಕೊಂಡ ಸಮಿತಿಗೆ ಧನ್ಯವಾದ ಎಂದರು.
ಕಾವೇರಿ ಸಮಸ್ಯೆ ಉದ್ಭವಕ್ಕೆ ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ: ಸಚಿವೆ ಶೋಭಾ ಕರಂದ್ಲಾಜೆ
ಆಣೆಕಟ್ಟೆ ಕೆಳಗಿನ ಕಾವೇರಿ ಜಲಾನಯನ ಪ್ರದೇಶದಿಂದ ಸಾಮಾನ್ಯವಾಗಿ 2000 ಕ್ಯುಸೆಕ್ ಹರಿದು ಹೋಗುತ್ತಿರುತ್ತದೆ. 1000 ಸಾವಿರ ಕ್ಯುಸೆಕ್ ಬಿಡಬೇಕಾಗುತ್ತದೆ. ಕನಕಪುರ, ಬೆಂಗಳೂರು ಕಡೆಯ ಮಳೆ ನೀರು ಹೋಗುತ್ತಾ ಇರುತ್ತದೆ. ಎರಡು ಮೂರು ದಿನದಿಂದ ಒಳಹರಿವು ಚನ್ನಾಗಿದೆ ಎಂದರು.
ಮೇಕೆದಾಟು ಪರಿಹಾರ:
ಇಂತಹ ಸಂಕಷ್ಟದ ಸಮಯದಲ್ಲಿ ಮೇಕೆದಾಟು ಯೋಜನೆಯೇ ಪರಿಹಾರ. ಈ ಯೋಜನೆಯಿಂದ 66 ಟಿಎಂಸಿ ನೀರು ಅವರಿಗೆ ಸೇರುತ್ತದೆ. ಕೆಆರ್‌ಎಸ್, ಕಬಿನಿ, ಹೇಮಾವತಿ ಆಣೆಕಟ್ಟೆಗಳ ಮೇಲಿನ ಒತ್ತಡ ತಗ್ಗುತ್ತದೆ. ಬೆಂಗಳೂರಿನ ಕುಡಿಯುವ ನೀರಿಗೂ ಸಾಕಷ್ಟು ಅನುಕೂಲ ಆಗುತ್ತದೆ. ಕಳೆದ ವಾರ ಸುಪ್ರೀಂಕೋರ್ಟ್ ತೀರ್ಪು ನೀಡುವ ಹೊತ್ತಿನಲ್ಲಿ ‘ಕರ್ನಾಟಕದವರು ಎಷ್ಟು ಬೇಕಾದರೂ ಅಣೆಕಟ್ಟು ಕಟ್ಟಿಕೊಳ್ಳಲಿ, ನಿಮಗೆ ತೊಂದರೆ ಏನು? ನಿಮ್ಮ ಪಾಲಿನ ನೀರು 177 ಟಿಎಂಸಿ ನಿಮಗೆ ಸಿಗುತ್ತದೆ’ ಎಂದು ಸ್ಪಷ್ಟವಾಗಿ ಹೇಳಿದೆ. ಕಾವೇರಿ ನೀರಿನ ಎರಡೂ ಸಮಿತಿಗಳಿಗೆ ಮೇಕೆದಾಟು ಯೋಜನೆ ಬಗ್ಗೆ ಮನವರಿಕೆ ಮಾಡಿಕೊಡುತ್ತೇವೆ. ಸುಪ್ರೀಂ ಕೋರ್ಟಿನ ತೀರ್ಪಿನಿಂದ ಮತ್ತೊಮ್ಮೆ ಭರವಸೆ ಮೂಡಿದೆ, ಆದ ಕಾರಣ ನಮ್ಮ ಸಂಸದರು, ಕೇಂದ್ರ ಸಚಿವರಿಗೆ ಕೇಂದ್ರದ ಮೇಲೆ ಒತ್ತಡ ಹಾಕಿ ಎಂದು ಮನವಿ ಮಾಡುತ್ತೇನೆ ಎಂದರು. ನಿಮ್ಮ ಆಡಳಿತವಾಧಿಯಲ್ಲಿ ಮೇಕೆದಾಟು ಯೋಜನೆ ಆಗುತ್ತದೆಯೇ ಎನ್ನುವ ಪ್ರಶ್ನೆಗೆ ‘ಕಾಲವೇ ಉತ್ತರ ಕೊಡುತ್ತದೆ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ