ಮೇಕೆದಾಟು ಕಟ್ಟಲೆಂದೇ ಮಂತ್ರಿ ಆಗಿದ್ದೇನೆ: ಡಿ.ಕೆ.ಶಿವಕುಮಾರ್‌

By Kannadaprabha NewsFirst Published Mar 22, 2024, 5:17 AM IST
Highlights

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ. ಎರಡೂ ರಾಜ್ಯಗಳಿಗೆ ಉಪಯೋಗವಾಗುತ್ತದೆ. ಇಡೀ ದೇಶದ ಜನರು ಕರ್ನಾಟಕದಲ್ಲಿ ಇದ್ದಾರೆ. ಈ ಯೋಜನೆಯಿಂದ ಇಡೀ ದೇಶದ ಜನರಿಗೆ ಉಪಯೋಗವಾಗುತ್ತದೆ. ನಮ್ಮ ತಮಿಳುನಾಡು ಸಹೋದರರು ಬೆಂಗಳೂರಿನಲ್ಲೂ ಇದ್ದಾರೆ. ಮೇಕೆದಾಟು ಯೋಜನೆಯ ಪರವಾಗಿ ತಮಿಳುನಾಡು ಮಾತನಾಡುವ ಒಳ್ಳೆಯ ಕಾಲ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 

ಬೆಂಗಳೂರು(ಮಾ.22):  ‘ತಮಿಳುನಾಡು ರಾಜ್ಯದಲ್ಲಿ ಅವರು ಏನಾದರೂ ಮಾಡಿಕೊಳ್ಳಲಿ. ನಾನು ಮೇಕೆದಾಟು ಕಟ್ಟಲೆಂದೇ ಜಲಸಂಪನ್ಮೂಲ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ತಮಿಳುನಾಡು ಕೂಡ ಮೇಕೆದಾಟು ಯೋಜನೆಯ ಪರವಾಗಿ ಮಾತನಾಡುವ ಒಳ್ಳೆಯ ಕಾಲ ಬರಲಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಇಂಡಿಯಾ ಮೈತ್ರಿಕೂಟದ ಅಂಗಪಕ್ಷವಾಗಿರುವ ತಮಿಳುನಾಡಿನ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ, ಮೇಕೆದಾಟು ಅಣೆಕಟ್ಟು ಕಟ್ಟಲು ಬಿಡುವುದಿಲ್ಲ ಎಂದು ಹೇಳುವ ಮೂಲಕ ಕಾಂಗ್ರೆಸ್‌ಗೆ ಉಂಟುಮಾಡಿದ್ದ ಮುಜುಗರಕ್ಕೆ ಪ್ರತ್ಯುತ್ತರ ನೀಡಿದ ಅವರು, ‘ಅವರ ರಾಜ್ಯದಲ್ಲಿ ಅವರು ಏನಾದರೂ ಮಾಡಿಕೊಳ್ಳಲಿ. ನಾನು ಮೇಕೆದಾಟು ಕಟ್ಟಲೆಂದೇ ಜಲ ಸಂಪನ್ಮೂಲ ಇಲಾಖೆ ಜವಾಬ್ದಾರಿ ತೆಗೆದುಕೊಂಡಿದ್ದೇನೆ. ಅವರ ಹೋರಾಟ ಅವರು ಮಾಡಲಿ. ಕಾವೇರಿ ನೀರು ನಿರ್ವಹಣಾ ಸಮಿತಿಗೆ ನೀರಿನ ಸಮಸ್ಯೆಯ ಅರಿವಿದೆ. ಅವರು ನಮಗೆ ನ್ಯಾಯ ಕೊಡಲೇ ಬೇಕು. ಕೋರ್ಟಿನಲ್ಲೂ ನಮಗೆ ನ್ಯಾಯ ಸಿಗುತ್ತದೆ’ ಎಂದು ಹೇಳಿದರು.

‘ಇಂಡಿಯಾ’ ಗೆದ್ದರೆ ಮೇಕೆದಾಟು ಡ್ಯಾಂಗೆ ತಡೆ: ಡಿಎಂಕೆ ಪ್ರಣಾಳಿಕೆ

ಮೇಕೆದಾಟು ಯೋಜನೆ ಕೇವಲ ಕರ್ನಾಟಕಕ್ಕೆ ಮಾತ್ರವಲ್ಲ. ಎರಡೂ ರಾಜ್ಯಗಳಿಗೆ ಉಪಯೋಗವಾಗುತ್ತದೆ. ಇಡೀ ದೇಶದ ಜನರು ಕರ್ನಾಟಕದಲ್ಲಿ ಇದ್ದಾರೆ. ಈ ಯೋಜನೆಯಿಂದ ಇಡೀ ದೇಶದ ಜನರಿಗೆ ಉಪಯೋಗವಾಗುತ್ತದೆ. ನಮ್ಮ ತಮಿಳುನಾಡು ಸಹೋದರರು ಬೆಂಗಳೂರಿನಲ್ಲೂ ಇದ್ದಾರೆ. ಮೇಕೆದಾಟು ಯೋಜನೆಯ ಪರವಾಗಿ ತಮಿಳುನಾಡು ಮಾತನಾಡುವ ಒಳ್ಳೆಯ ಕಾಲ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಎಲ್ಲರಿಗಿಂತ ಮೊದಲೇ ತಿಳಿಯುವುದು ಇಲ್ಲೇ

ಮೇಕೆದಾಟು ಡ್ಯಾಂ ಕುರಿತ ಡಿಎಂಕೆ ಪ್ರಣಾಳಿಕೆಯ ಕುರಿತು ಕನ್ನಡಪ್ರಭ ಗುರುವಾರ ವರದಿ ಪ್ರಕಟಿಸಿತ್ತು. 

click me!