
ಬಳ್ಳಾರಿ(ಅ.15): ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ನ್ಯಾಯ ಒದಗಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಲಿದ್ದು, ಬಿಜೆಪಿಯ ಕುತಂತ್ರಗಳಿಗೆ ಬಲಿಯಾಗಬೇಡಿ ಎಂದು ಉಪಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ಒಳಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಮಾತುಕೊಟ್ಟಂತೆ ನಡೆಯುತ್ತದೆ. ಕೆಲ ತಾಂತ್ರಿಕ ತೊಂದರೆ ಗಳಿದ್ದು, ನಮ್ಮ ಪಕ್ಷ ಎಲ್ಲರಿಗೂ ನ್ಯಾಯ ಒದಗಿಸಲಿದೆ. ಕಾಂಗ್ರೆಸ್ ದಲಿತ ಸಮುದಾಯಗಳ ಹಿತ ಕಾಯುವ ಕೆಲಸ ಮಾಡುತ್ತಾ ಬಂದಿದ್ದು, ಎಲ್ಲ ಸಮಾಜಗಳ ಕಲ್ಯಾಣನಮ್ಮ ಧೈಯವಾಗಿದೆ. ನಮ್ಮ ಸರ್ಕಾರ ಎಡಗೈ ಮತ್ತು ಬಲಗೈ ಸಮುದಾಯಗಳ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದೆ. ಈ ಸಮುದಾಯಗಳಿಗೆ ನ್ಯಾಯ ಕೊಡಿಸುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡಲಿದೆ. ಬಿಜೆಪಿಯವರು ಬರೀ ಸುಳ್ಳುಗಳನ್ನು ಹೇಳಿಕೊಂಡು ಹೊರಟಿದ್ದು, ಷಡ್ಯಂತ್ರ್ಯಗಳನ್ನು ರೂಪಿಸುತ್ತಾರೆ. ಅವರ ಸುಳ್ಳು ಹೇಳಿಕೆಗಳು ಹಾಗೂ ಷಡ್ಯಂತ್ರಗಳಿಗೆಯಾರು ಬಲಿಯಾಗಬಾರದು ಎಂದು ಮನವಿ ಮಾಡಿದ್ದಾರೆ.
ಒಳಮೀಸಲಾತಿಗಾಗಿ ಬಿಜೆಪಿಯಿಂದ ಶೀಘ್ರ ಸಿಎಂ ಭೇಟಿ: ವಿಜಯೇಂದ್ರ
ಸಂಡೂರು ಕಾಂಗ್ರೆಸ್‌ನ ಭದ್ರಕೋಟೆಯಾಗಿದೆ. ಸಿಎಂ ಸಿದ್ದರಾಮಯ್ಯ ಸಂಡೂರು ಕ್ಷೇತ್ರಕ್ಕೆ ₹1200 ಕೋಟಿ ಅನುದಾನ ನೀಡಿ ಈ ಕ್ಷೇತ್ರದ ಪ್ರಗತಿಗೆ ಮುನ್ನುಡಿ ಬರೆದಿದ್ದಾರೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ