ನೆರೆ ರಾಜ್ಯಗಳಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವುದು ಆತಂಕಕಾರಿ ಬೆಳವಣಿಗೆ| ಸಾರ್ವಜನಿಕರು, ಕೂಲಿ ಮಾಡುವ ಜನರು ನೆರೆಯ ರಾಜ್ಯಗಳಿಗೆ ಪ್ರತಿನಿತ್ಯ ಸಂಚಾರ| ಜೀವನೋಪಾಯಕ್ಕಾಗಿ ಹೆಚ್ಚು ಜನರು ಗೋವಾಕ್ಕೆ ಹೋಗಿ ಬರುತ್ತಿರುವ ಹಿನ್ನೆಲೆಯಲ್ಲಿ ಇವರಿಗೆ ಕೊರೋನಾ ಸೋಂಕು ತಗುಲಿ ಗಡಿ ಜಿಲ್ಲೆಗಳಲ್ಲಿ ಕೊರೋನಾ ಉಲ್ಬಣವಾಗುವ ಸಾಧ್ಯತೆಯಿದೆ: ಕಾರಜೋಳ|
ಬೆಂಗಳೂರು(ಫೆ.22): ನೆರೆಯ ಮಹಾರಾಷ್ಟ್ರ, ಗೋವಾ, ಕೇರಳದಲ್ಲಿ ಕೊರೋನಾ ಸೋಂಕು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳ ಚೆಕ್ ಪೋಸ್ವ್‌ಗಳಲ್ಲಿ ಕೋವಿಡ್ ತಪಾಸಣೆ ಕಾರ್ಯಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹಾಗೂ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ನೆರೆ ರಾಜ್ಯಗಳಲ್ಲಿ ಕೊರೋನಾ ಹೆಚ್ಚಳವಾಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಗಡಿ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳ ಅನೇಕ ತಾಲೂಕುಗಳು ಈ ರಾಜ್ಯಗಳಿಗೆ ಹೊಂದಿಕೊಂಡಿವೆ. ಸಾರ್ವಜನಿಕರು, ಕೂಲಿ ಮಾಡುವ ಜನರು ನೆರೆಯ ರಾಜ್ಯಗಳಿಗೆ ಪ್ರತಿನಿತ್ಯ ಸಂಚರಿಸುತ್ತಿದ್ದಾರೆ. ಅಲ್ಲದೆ ಜೀವನೋಪಾಯಕ್ಕಾಗಿ ಹೆಚ್ಚು ಜನರು ಗೋವಾಕ್ಕೆ ಹೋಗಿ ಬರುತ್ತಿರುವ ಹಿನ್ನೆಲೆಯಲ್ಲಿ ಇವರಿಗೆ ಕೊರೋನಾ ಸೋಂಕು ತಗುಲಿ ಗಡಿ ಜಿಲ್ಲೆಗಳಲ್ಲಿ ಕೊರೋನಾ ಉಲ್ಬಣವಾಗುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ.
undefined
ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್: ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯೆ
ನಂತರ ಇದು ಇಡೀ ರಾಜ್ಯಕ್ಕೂ ಆಪತ್ತು ತರಬಹುದು. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಗಡಿ ಜಿಲ್ಲೆಗಳ ಎಲ್ಲ ಚೆಕ್ ಪೋಸ್ಟ್‌ಗಳಲ್ಲಿ ಕಟ್ಟುನಿಟ್ಟಿನ ಕೋವಿಡ್ ತಪಾಸಣೆಗೆ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಎಲ್ಲ ಅಧಿಕಾರಿಗಳಿಗೆ ಆದೇಶಿಸುವಂತೆ ಪತ್ರದಲ್ಲಿ ಕೋರಿದ್ದಾರೆ.