
ಬೆಂಗಳೂರು : ದಕ್ಷಿಣ ವಿಭಾಗದ ಪೊಲೀಸರು ರಾತ್ರೋ ರಾತ್ರಿ ರೌಡಿ ಶೀಟರ್ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ
ಡಿಸಿಪಿ ಅಣ್ಣಾಮಲೈ ಹಾಗೂ ಎಸಿಪಿ ಮಹದೇವ್ ನೇತೃತ್ವದ ತಂಡವು ದಾಳಿ ನೇತೃತ್ವ ವಹಿಸಿದ್ದು, 5 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್ ಗಳ ಮನೆ ಮೇಲೆ ಧಿಡೀರ್ ದಾಳಿ ನಡೆಸಿದ್ದಾರೆ.
ಸುಬ್ರಮಣ್ಯಪುರ , ತಲಘಟ್ಟಪುರ, ಕೋಣನಕುಂಟೆ, ಕುಮಾರಸ್ವಾಮಿ ಲೇಔಟ್, ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರೌಡಿ ಶೀಟರ್ ಗಳ ಮನೆ ಮೇಲೆ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Brother in Arms: ಅಣ್ಣಾಮಲೈ ಕಂಡಂತೆ ಮಧುಕರ್ ಶೆಟ್ಟಿ!
ಒಟ್ಟು 32 ರೌಡಿಶೀಟರ್ ಗಳು ಹಾಗೂ 44 MOB ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದ್ದು, ಈ ವೇಳೆ 71 ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಅನಧಿಕೃತವಾಗಿ ಹಾಗೂ ದಾಖಲೆಗಳಿಲ್ಲದೇ ರೌಡಿಶೀಟರ್ ಗಳು ಬಳಕೆ ಮಾಡುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ