ಬೆಂಗಳೂರು(ಡಿ.20): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಡೀ ದೇಶದಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಪೊಲೀಸ್ ದೌರ್ಜನ್ಯಕ್ಕೆ ಎಲ್ಲೆಡೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.
"
ಅದರಂತೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಈ ಮಧ್ಯೆ ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಭಟನಾಕಾರರ ಮಧ್ಯೆ ನಿಂತು ರಾಷ್ಟ್ರಗೀತೆ ಹಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
ಮಂಗಳೂರಿನಲ್ಲಿ ಆರದ ಪೌರತ್ವ ಕಾಯ್ದೆಯ ಕಿಚ್ಚು: ಶಾಲಾ-ಕಾಲೇಜುಗಳಿಗೆ ರಜೆ
ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಚೇತನ್ ಸಿಂಗ್ ರಾಥೋಡ್, ಪುರಭವನದ ಬಳಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು. ಅಲ್ಲದೇ ಸ್ಥಳದಲ್ಲಿ ರಾಷ್ಟ್ರಗೀತೆ ಹಾಡುವ ಮೂಲಕ ಪ್ರತಿಭಟನಾಕಾರರ ಮನಗೆದ್ದರು.
ಸಮಾಜ ವಿರೋಧಿ ಶಕ್ತಿಗಳು ನಿಮ್ಮ ನ್ಯಾಯಯು ಪ್ರತಿಭಟನೆಯನ್ನು ಹೈಜಾಕ್ ಮಾಡುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈಬಿಟ್ಟು ಶಾಂತಿ ಕಾಪಾಡುವಂತೆ ರಾಥೋಡ್ ಮನವಿ ಮಾಡಿದ್ದಾರೆ. ರಾಥೋಡ್ ಮಾಡಿದ ಮನವಿಗೆ ಪ್ರತಿಭಟನಾಕಾರರು ಧರಣಿ ಕೈಬಿಟ್ಟು ಸ್ಥಳದಿಂದ ತೆರಳಿದ್ದು ಕೂಡ ವಿಶೇಷವಾಗಿತ್ತು.
ಪೌರತ್ವ ಕಾಯ್ದೆ: ಯುಎನ್ ಜನಾಭಿಪ್ರಾಯ ಸಂಗ್ರಹಕ್ಕೆ ಮಮತಾ ಆಗ್ರಹ!
ಚೇತನ್ ಸಿಂಗ್ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿರುವ ಹಾಗೂ ರಾಷ್ಟ್ರಗೀತೆ ಹಾಡಿ ಪ್ರತಿಭಟನಾಕಾರರ ಮನಗೆದ್ದಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಡಿಸೆಂಬರ್ 20ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ