* ವೀಕೆಂಡ್ ಕರ್ಫ್ಯೂ ವೇಳೆ ಮದ್ಯ ಇರುತ್ತಾ? ಇಲ್ಲಾ?
* ಡಿಸಿ ವಿವೇಚನೆಗೆ ಬಿಟ್ಟ ಅಬಕಾರಿ ಇಲಾಖೆ
* ಗೊಂದಲದಲ್ಲಿ ಎಣ್ಣೆ ಪ್ರಿಯರು
ಬೆಂಗಳೂರು, (ಜ.06): ಕೋವಿಡ್ (Covid) ನಿಯಂತ್ರಣಕ್ಕೆ ಸರ್ಕಾರ ವೀಕೆಂಡ್ ಕರ್ಫ್ಯೂ (Weekend Curfew), ನೈಟ್ ಕರ್ಫ್ಯೂ ಸೇರಿದಂತೆ ಕೆಲ ನಿರ್ಬಂಧನೆಗಳನ್ನ ಹೇರಿದೆ.
ಈಗ ವೀಕೆಂಡ್ ಕರ್ಫ್ಯೂ (Weekend Curfew) ಸಂದರ್ಭದಲ್ಲಿ ಮದ್ಯ ಮಾರಾಟ ಇರುತ್ತೋ ಇಲ್ಲೋ ಎನ್ನುವ ಗೊಂದಲದಲ್ಲಿ ಎಣ್ಣೆ ಪ್ರಿಯರಿದ್ದಾರೆ. ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಅಬಕಾರಿ ಇಲಾಖೆ ಮಹತ್ವ ಆದೇಶ ಹೊರಡಿಸಿದೆ.
Coronavirus ಶಾಲಾ-ಕಾಲೇಜು ಬಂದ್ ಬಗ್ಗೆ ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ
ವೀಕೆಂಡ್ ಕರ್ಫ್ಯೂ ಸಂದರ್ಭದಲ್ಲಿ ಮದ್ಯ ಮಾರಾಟ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ವಿವೇಚನೆಗೆ ಬಿಟ್ಟಿದ್ದು ಎಂದು ಅಭಕಾರಿ ಇಲಾಖೆ ಆದೇಶ ಹೊರಡಿಸಿದೆ.
ಮದ್ಯ ಮಾರಾಟ ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಟ್ಟಿದ್ದು,ಪ್ರಾದೇಶಿಕ ಅವಶ್ಯಕತೆಗಳಿಗೆ ಆನುಗುಣವಾಗಿ ಅಯಾ ಜಿಲ್ಲಾಧಿಕಾರಿಗಳು ಮದ್ಯ ಮಾರಾಟ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಬಹುದು ಎಂದು ಹೇಳಿದೆ.
ಸಚಿವ ಸಂಪುಟದಲ್ಲಿ ಪ್ರಸ್ತಾಪ
ವೀಕೆಂಡ್ ಕರ್ಫ್ಯೂ (Weekend Curfew) ವೇಳೆ ಮದ್ಯ ಮಾರಾಟಕ್ಕೆ ಅವಕಾಶ ನೀಡುವ ವಿಚಾರವಾಗಿ ಸಂಪುಟ ಸಭೆಯಲ್ಲಿ ಅಬಕಾರಿ ಸಚಿವ ಗೋಪಾಲಯ್ಯ (Minister Gopalaiah) ಪ್ರಸ್ತಾಪ ಮಾಡಿದ್ದಾರೆ.
ಮದ್ಯ ಮಾರಾಟಕ್ಕೆ ಅವಕಾಶ ಕೊಡುವಂತೆ ಸಚಿವರು ಪ್ರಸ್ತಾಪಿಸಿದ್ದಾರೆ. ಮದ್ಯ ಮಾರಾಟಕ್ಕೆ ಅವಕಾಶ ಕೊಡದಿದ್ದರೆ ದಿನಕ್ಕೆ 75 ಕೋಟಿ ರೂ. ನಷ್ಟವಾಗುತ್ತದೆ. ಹೀಗಾಗಿ, ವೀಕೆಂಡ್ ಕರ್ಫ್ಯೂ ವೇಳೆಯಲ್ಲೂ ಮದ್ಯ ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ. ಅವರ ಮಾತಿಗೆ ಸಚಿವ ಜೆ.ಸಿ. ಮಾಧುಸ್ವಾಮಿ (JC Madhuswamy) ಬೆಂಬಲ ಸೂಚಿಸಿದ್ದಾರೆ.
ಬೆಳಗಿನ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕೊಡಬಹುದು ಎಂದು ಮಾಧುಸ್ವಾಮಿ ಹೇಳಿದ್ದಾರೆ. ಆದ್ರೆ, ಆ ವೇಳೆ ಯಾವುದೇ ಅಂತಿಮ ತೀರ್ಮಾನವಾಗಲಿಲ್ಲ.
ಈಗಾಗಲೇ ವೀಕೆಂಡ್ನಲ್ಲಿ ಹೋಟೆಲ್, ಬಾರ್, ರೆಸ್ಟೋರೆಂಟ್ ಬಂದ್ ಮಾಡಿಸಲು ಸುತ್ತೋಲೆ ಹೊರಡಿಸಲಾಗಿದೆ. ಪಿಎಸ್ಐಗಳು ತಾವೇ ಮುಂದೆ ನಿಂತು ಹೋಟೆಲ್, ಬಾರ್ , ರೆಸ್ಟೋರೆಂಟ್ ಅನ್ನು ಶುಕ್ರವಾರ ರಾತ್ರಿ ಬಂದ್ ಮಾಡಿಸುವಂತೆ ಸೂಚನೆ ನೀಡಲಾಗಿದೆ. ಸರ್ಕಾರದ ಆದೇಶ ಹಿನ್ನೆಲೆ ಎಲ್ಲ ಪಿಎಸ್ಐಗಳಿಗೂ ಸೂಚನೆ ನೀಡಲಾಗಿದೆ.
ರಾಜ್ಯದಲ್ಲಿ 2 ವಾರ ವೀಕೆಂಡ್ ಕರ್ಫ್ಯೂ
ರಾಜ್ಯದಲ್ಲಿ ಕೊರೋನಾ ವೈರಸ್(Coronavrius) ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಪ್ಯೂ ಜಾರಿ ಮಾಡಲಾಗಿದೆ. ಅಲ್ಲದೇ ಬೆಂಗಳೂರಲ್ಲಿ ಮಾತ್ರ ಶಾಲೆಗಳನ್ನ ಎರಡು ವಾರ ಬಂದ್ ಮಾಡಲು ಸರ್ಕಾರ ತೀರ್ಮಾನಿಸಿದೆ.
ಇಂದು(ಮಂಗಳವಾರ) ತಜ್ಞರ ಜೊತೆಗಿನ ಸಭೆ ಬಳಿಕ ಸಚಿವರಾದ ಅಶೋಕ್, ಸುಧಾಕರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಇದೇ ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗೆ 5ರ ವರೆಗೆ ವೀಕೆಂಡ್ ಕರ್ಫ್ಯೂ (weekend Curfew) ಇರಲಿದೆ ಎಂದು ಸ್ಪಷ್ಟಪಡಿಸಿದರು.
ಕರ್ನಾಟಕದಾದ್ಯಂತ ಎರಡು ವಾರ ವೀಕೆಂಡ್ ಜಾರಿಯಲ್ಲಿರಲಿದೆ. ಇನ್ನು ಬೆಂಗಳೂರಲ್ಲಿ ಮಾತ್ರ ಎರಡು ವಾರ ಶಾಲೆ ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದರು.
ಬೆಂಗಳೂರಿನಲ್ಲಿ ಮುಂದಿನ ಎರಡು ವಾರಗಳು (ಜನವರಿ 6ರಿಂದ) 10 ಮತ್ತು 12ನೇ ತರಗತಿ ಹೊರತು ಪಡಿಸಿ ಉಳಿದ ಎಲ್ಲ ತರಗತಿಗಳನ್ನೂ ಬಂದ್ ಮಾಡಿ ಆನ್‌ಲೈನ್ ಮೂಲಕ ನಡೆಸಲು ನಿರ್ಧರಿಸಲಾಗಿದೆ.