
ಮಾಗಡಿ (ಮೇ.26): ಜೆಡಿಎಸ್ ಕಾರ್ಯಕರ್ತರ ಮೇಲೆ ಶಾಸಕ ಹೆಚ್.ಸಿ.ಬಾಲಕೃಷ್ಣ ಬೆಂಬಲಿಗರು ಗೂಂಡಾಗಿರಿ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬಿಡದಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ ಮಾಗಡಿ ನಿವಾಸಿ ಅಚ್ಯುತ್ ಮತ್ತು ಹನುಮಂತರಾಜು ಎಂಬವವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದು, ಚುನಾವಣೆ ಸಂದರ್ಭದ ದ್ವೇಷಕ್ಕೆ ನಿನ್ನೆ ರಾತ್ರಿ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆಂದು ಆರೋಪ ಮಾಡಲಾಗಿದೆ. ಬಿಡದಿ ಯೂತ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ ಸೇರಿ ಹಲವರ ವಿರುದ್ಧ ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಸಿಪಿಐ ರವಿ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ನನಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ: ನನಗೆ ಸಚಿವ ಸ್ಥಾನ ಸಿಗುವ ನಿರೀಕ್ಷೆಯೂ ಇದೆ, ಆಸೆಯೂ ಇದೆ. ಆದರೆ, ಸಂಪುಟ ವಿಸ್ತರಣೆಯಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅದಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಪ್ರತಿಕ್ರಿಯಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೂ ನನಗೆ ಸಚಿವ ಸ್ಥಾನ ಕೊಡಿಸುವ ಇಚ್ಛೆ ಇದೆ. ನಾನು ಕೂಡ ಹಿರಿಯ ಶಾಸಕನಾಗಿರುವುದರಿಂದ ಸಚಿವ ಸ್ಥಾನ ಕೊಡುತ್ತಾರೆಂಬ ವಿಶ್ವಾಸವಿದೆ. ಸಚಿವ ಸ್ಥಾನ ಕೊಟ್ಟರೆ ರಾಜ್ಯ ಸೇವೆ, ಕೊಡದಿದ್ದರೆ ಕ್ಷೇತ್ರ ಸೇವೆ ಮಾಡುತ್ತೇನೆ. ಸಚಿವ ಸ್ಥಾನಕ್ಕಾಗಿ ನಾನು ಯಾವುದೇ ಲಾಭಿ ಮಾಡಲ್ಲ. ನನ್ನ ಶಕ್ತಿ ಮೇಲೆ ನಂಬಿಕೆ ಇದ್ದರೆ ಕೊಡಲಿ ಎಂದರು.
ಇಲ್ಲೇ ನಮ್ಮ ಮನೆ ಹತ್ರ ಬಂದು ಮಲಕ್ಕೊಳಕ್ಕೆ ಹೇಳಿ: ಪ್ರತಾಪ್ ಸಿಂಹ ಆರೋಪಕ್ಕೆ ಡಿಕೆಶಿ ವ್ಯಂಗ್ಯ
ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆಂಬ ಎಂ.ಬಿ.ಪಾಟೀಲ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅದು ಅವರ ವೈಯಕ್ತಿಕ ಅಭಿಪ್ರಾಯ. ನನಗೆ ಅದರ ಬಗ್ಗೆ ಗೊತ್ತಿಲ್ಲ. ನಾನು ಅಷ್ಟುದೊಡ್ಡವನಲ್ಲ. ನಮ್ಮ ಹೈಕಮಾಂಡ್ ಇದನ್ನೆಲ್ಲ ತೀರ್ಮಾನ ಮಾಡುತ್ತದೆ. ದೆಹಲಿಯ ಕಿಚನ್ ಕ್ಯಾಬಿನೆಚ್‌ನಲ್ಲಿ ಈ ಬಗ್ಗೆ ನಿರ್ಧಾರ ಆಗುತ್ತದೆ. ಚುನಾವಣೆ ಸಂದರ್ಭದಲ್ಲಿ ಪಕ್ಷಗಳು ಪ್ರಣಾಳಿಕೆ ಹೊರಡಿಸುತ್ತವೆ. ಹಾಗೆ ನಾವು ಪ್ರಣಾಳಿಕೆ ಕೊಟ್ಟಿದ್ದೇವೆ ಅದನ್ನು ಈಡೇರಿಸುತ್ತೇವೆ. ನಾವು ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳುತ್ತೇವೆ. ಮಾಜಿ ಶಾಸಕರು ಈಗಲೇ ಬಟ್ಟೆಹರಿದುಕೊಳ್ಳುವುದು ಬೇಡ. ಸೋಲಿನ ಹತಾಶೆಯಲ್ಲಿ ಮಾಜಿ ಶಾಸಕರು ಏನೇನೋ ಆರೋಪ ಮಾಡುತ್ತಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿ ಫೈಟ್: ಸರ್ಕಾರ-ಪ್ರತಿಪಕ್ಷಗಳ ನಡುವೆ ಕದನ ಆರಂಭ
ಅದಕ್ಕೆಲ್ಲ ತಲೆ ಕೆಡಿಸಿಕೊಳ್ಳಲ್ಲ ಎಂದು ಮಾಜಿ ಶಾಸಕ ಮಂಜುನಾಥ್ ಅವರ ಗಿಫ್ಟ್ ಕಾರ್ಡ್ ಹಂಚಿಕೆ ಆರೋಪಕ್ಕೆ ತಿರುಗೇಟು ನೀಡಿದರು. ಕರೆಂಟ್ ಬಿಲ್ ಕಟ್ಟಬೇಡಿ ಎಂಬ ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಬಾಲಕೃಷ್ಣ, ರಾಜ್ಯದಲ್ಲಿ ಸುಭದ್ರ ಸರ್ಕಾರ ರಚನೆ ಆಗಿದೆ. ನಮ್ಮಲ್ಲಿ ಪ್ರಬಲ ನಾಯಕತ್ವ ಇದೆ. ಕೊಟ್ಟಿರುವ ಎಲ್ಲಾ ಆಶ್ವಾಸನೆಗಳನ್ನು ಈಡೇರಿಸುತ್ತೇವೆ. ಕುಮಾರಸ್ವಾಮಿ ಮತ್ತು ವಿಪಕ್ಷಗಳು ಸೋಲಿನ ಹತಾಶೆಯಿಂದ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಟೀಕಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ