ಸಿದ್ಧಗಂಗಾ ಶ್ರೀಗಳ ಪುಣ್ಯಾರಾಧನೆಗೆ 69 ಕ್ವಿಂಟಾಲ್ ಬೂಂದಿ

Published : Jan 30, 2019, 12:45 PM ISTUpdated : Jan 30, 2019, 05:37 PM IST
ಸಿದ್ಧಗಂಗಾ ಶ್ರೀಗಳ ಪುಣ್ಯಾರಾಧನೆಗೆ 69 ಕ್ವಿಂಟಾಲ್ ಬೂಂದಿ

ಸಾರಾಂಶ

ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಾರಾಧನೆ ಜನವರಿ 31 ರಂದು ಇಲ್ಲಿನ ಸಿದ್ಧಗಂಗಾ ಮಠದಲ್ಲಿ ನಡೆಯುತ್ತಿದ್ದು, ಇದಕ್ಕಾಗಿ  ಸಿದ್ಧತೆಗಳು ಭರದಿಂದ ಸಾಗಿದೆ. 

ತುಮಕೂರು: ಇದೇ ಗುರುವಾರ ನಡೆಯಲಿರುವ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಾರಾಧನೆಗೆ ಇಲ್ಲಿನ ಸಿದ್ಧಗಂಗಾ ಮಠದಲ್ಲಿ ಸಿದ್ಧತೆಗಳು ಭರದಿಂದ ಸಾಗಿದೆ. ಜ.31 ರಂದು ನಡೆಯಲಿರುವ ಸಿದ್ಧಗಂಗಾ ಶ್ರೀಗಳ 11 ನೇ ದಿನದ ಪುಣ್ಯಸ್ಮರಣಾ ಕಾರ್ಯಕ್ರಮಕ್ಕೆ 8 ರಿಂದ 10 ಲಕ್ಷ ಭಕ್ತರು ಆಗಮಿಸುವ ನಿರೀಕ್ಷೆಯಿದೆ. 

ಭಕ್ತರಿಗಾಗಿ 69 ಕ್ವಿಂಟಾಲ್‌ನಷ್ಟು ಸಿಹಿ ಬೂಂದಿ, 2 ಲಕ್ಷ ಜಾಹಂಗೀರ್, ಪಾಯಸ ಹಾಗೂ ಮಾಲ್ದಿಪುಡಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ 70 ಮಂದಿ ಅಡುಗೆ ಭಟ್ಟರು ಅಡುಗೆ ತಯಾರಿ ಮಾಡುತ್ತಿದ್ದಾರೆ. 

ಮಠದ ನಾಲ್ಕು ಕಡೆ ಸಿಹಿ ತಿಂಡಿಗಳನ್ನು ತಯಾರಿಸಲಾಗುತ್ತಿದೆ. ಪುಣ್ಯಾರಾಧನೆ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಮಠಕ್ಕೆ ಲೋಡ್‌ಗಟ್ಟಲೇ ದವಸ-ಧಾನ್ಯದ ರಾಶಿ ಹರಿದು ಬರುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್
ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!