ಜಿಲ್ಲೆಯ ಎಸಿ ಕಚೇರಿಯ ಗ್ರೇಡ್- 2 ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಶೋಕ‌್ ಮಣ್ಣಿಕೇರಿ ಜೂನ್ 29ರಂದು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದರು. ಇದೀಗ ತಹಶೀಲ್ದಾರ್ ಅಶೋಕ ಮಣ್ಣಿಕೇರಿ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.
ಬೆಳಗಾವಿ (ಜು.05): ಜಿಲ್ಲೆಯ ಎಸಿ ಕಚೇರಿಯ ಗ್ರೇಡ್- 2 ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಶೋಕ‌್ ಮಣ್ಣಿಕೇರಿ ಜೂನ್ 29ರಂದು ಅನುಮಾನಸ್ಪದವಾಗಿ ಸಾವನ್ನಪ್ಪಿದ್ದರು. ಈ ಹಿಂದೆ ಲಕ್ಷ್ಮೀ ಹೆಬ್ಬಾಳ್ಕರ್ ಮೊದಲ ಬಾರಿಗೆ ಶಾಸಕರಾಗಿದ್ದಾಗ ವೇಳೆ ಅವರ ಆಪ್ತ ಸಹಾಯಕರಾಗಿ ಕೂಡ ಅಶೋಕ‌್ ಕಾರ್ಯನಿರ್ವಹಿಸಿದ್ದರು. ಇದೀಗ ತಹಶೀಲ್ದಾರ್ ಅಶೋಕ ಮಣ್ಣಿಕೇರಿ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.
ಸಾವಿಗೂ ಮುನ್ನ ಬರೆದಿಟ್ಟಿದ್ದ ಮಹತ್ವದ ಪತ್ರ ಸೇರಿ ಇತರೆ ದಾಖಲೆಗಳನ್ನು ಕ್ಯಾಂಪ್ ಪೊಲೀಸರು ಸೀಜ್ ಮಾಡಿದ್ದಾರೆ. ಬೆಳಗಾವಿ ಎಸಿ ಕಚೇರಿಯ ಲಾಕರ್ ಪರಿಶೀಲನೆ ವೇಳೆ ವೈಯಕ್ತಿಕ ದಾಖಲೆಗಳು ಪತ್ತೆಯಾಗಿವೆ. ಈ ವೇಳೆ ಜೂನ್ 20ರಂದು ಬರೆದಿಟ್ಟಿದ್ದ ಪತ್ರವೂ ಪರಿಶೀಲನೆ ವೇಳೆ ಪೊಲೀಸರಿಗೆ ಸಿಕ್ಕಿದ್ದು, ಪತ್ನಿ ಭೂಮಿ ನಿರಂತರ ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ರದಲ್ಲಿ ಅಶೋಕ್ ಮಣ್ಣಿಕೇರಿ ಉಲ್ಲೇಖಿಸಿದ್ದಾರೆ.
ಮಾಡಲು ಕೆಲಸವಿಲ್ಲದೆ ಅನಗತ್ಯವಾಗಿ ಬಿಜೆಪಿ ಪ್ರತಿಭಟನೆ: ಡಿ.ಕೆ.ಶಿವಕುಮಾರ್
ತಹಶಿಲ್ದಾರ್ ಹುದ್ದೆಗೆ ಸ್ವಯಂ ನಿವೃತ್ತಿ ಪಡೆಯಲು ಸಿದ್ದಪಡಿಸಿದ್ದ ಪತ್ರ ಕೂಡ ಇದೆ ವೇಳೆ ಪತ್ತೆಯಾಗಿದೆ. ಇನ್ನು ಜೂನ್ 29ರಂದು ಮನೆಯಲ್ಲಿ ಹೃದಯಾಘಾತದಿಂದ ಸಾವು ಎಂದು ಪ್ರಕರಣ ಬೆಳಕಿಗೆ ಬಂದಿತ್ತು. ಅಶೋಕ್ ಮಣ್ಣಿಕೇರಿ ಕುಟುಂಬಸ್ಥರಿಂದ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ಪತ್ನಿ ಭೂಮಿ ಹಾಗೂ ಪತ್ನಿಯ ಸಹೋದರ ಸ್ಯಾಮುವಲ್ ವಿರುದ್ಧ ಕೇಸ್ ದಾಖಲಿಸಿದ್ದರು. ಇನ್ನು ಮರಣೋತ್ತರ ಹಾಗೂ ಎಫ್ಎಸ್ಎಲ್ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ.
ಸಚಿವೆ ಹೆಬ್ಬಾಳಕರ ಸಂತಾಪ: ತಾವು ಶಾಸಕರಾಗಿದ್ದ ಅವಧಿಯಲ್ಲಿ ತಮ್ಮ ಆಪ್ತ ಸಹಾಯಕರಾಗಿದ್ದ ಬೆಳಗಾವಿಯ ಗ್ರೇಡ್-2 ತಹಸೀಲ್ದಾರ ಅಶೋಕ ಮಣ್ಣಿಕೇರಿ ಅಕಾಲಿಕ ನಿಧನಕ್ಕೆ ಸಚಿವೆ ಲಕ್ಷ್ಮೇ ಹೆಬ್ಬಾಳಕರ ಸಂತಾಪ ಸೂಚಿಸಿದರು. ಅಶೋಕ ಮಣ್ಣಿಕೇರಿ ಮನೆಗೆ ತೆರಳಿ ಮೃತ ದೇಹದ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಶೋಕ ಮಣ್ಣಿಕೇರಿ ಅವರು 2018ರಿಂದ 2023ರವರೆಗೆ ನಾಲ್ಕೂವರೆ ವರ್ಷ ನನ್ನ ಆಪ್ತ ಕಾರ್ಯದರ್ಶಿ ಆಗಿದ್ದರು.
ಹಿಂದುತ್ವವಾದಿ ವ್ಯಕ್ತಿ ಅಧ್ಯಕ್ಷ, ವಿಪಕ್ಷ ನಾಯಕ ಆಗಲಿ: ಕೆ.ಎಸ್.ಈಶ್ವರಪ್ಪ
ರಾತ್ರಿ ಹಗಲು ಸಹಾಯ ಮಾಡಿ ಕೆಲಸ ಮಾಡಿ ಕ್ಷೇತ್ರದ ಜನರ ಕಷ್ಟಸುಖಕ್ಕೆ ಸ್ಪಂದಿಸಿದ ಅತ್ಯಂತ ಸರಳ ವ್ಯಕ್ತಿ. ಅವರ ಅಕಾಲಿಕ ಸಾವಿನಿಂದ ಬಹಳ ದುಃಖವಾಗಿದೆ ಎಂದರು. ಅಶೋಕ ಮಣ್ಣಿಕೇರಿ ಸಾವಿನ ಬಗ್ಗೆ ಅನುಮಾನ ಇದೆ ಎಂಬ ಸಹೋದರಿಯರು ದೂರು ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ನನಗೆ ಹೆಚ್ಚು ಗೊತ್ತಿಲ್ಲ. ಏನೇ ಇದ್ದರೂ ಕಾನೂನು ಇದೆ. ಕಾನೂನಾತ್ಮಕವಾದ ಕೆಲಸ ನಡೆಯುತ್ತದೆ ಎಂದು ಹೇಳಿದರು.