ಬೈರಪ್ಪ ಹರೀಶ್ ಕುಮಾರ್‌ಗೆ ಪ್ರಾಣ ಬೆದರಿಕೆ ಆರೋಪ: ಗಿಳಿಯಾರ್‌ ಸೇರಿ ಮೂವರ ವಿರುದ್ಧ FIR

Kannadaprabha News, Ravi Janekal |   | Kannada Prabha
Published : Feb 04, 2026, 07:52 AM IST
Death Threat Case FIR filed against Vasant Giliyar and two others

ಸಾರಾಂಶ

ಕನ್ನಡಪರ ಹೋರಾಟಗಾರ ಬೈರಪ್ಪ ಹರೀಶ್ ಕುಮಾರ್ ನೀಡಿದ ದೂರಿನ ಮೇರೆಗೆ ವಸಂತ ಗಿಳಿಯಾರ್, ಪುನೀತ್ ಕೆರೆಹಳ್ಳಿ ಮತ್ತು ಕಿರಿಕ್ ಕೀರ್ತಿ ವಿರುದ್ಧ ಹಲ್ಲೆ ಹಾಗೂ ಪ್ರಾಣ ಬೆದರಿಕೆ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ಖಾಸಗಿ ವಾಹಿನಿಯ ಚರ್ಚಾ ಕಾರ್ಯಕ್ರಮದ ಬಳಿಕ ಈ ಘಟನೆ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಬೆಂಗಳೂರು (ಫೆ.4): ಕನ್ನಡಪರ ಹೋರಾಟಗಾರನ ಮೇಲೆ ಹಲ್ಲೆ, ಪ್ರಾಣ ಬೆದರಿಕೆ ಆರೋಪದಡಿ ಸಾಮಾಜಿಕ ಕಾರ್ಯಕರ್ತ ವಸಂತ ಗಿಳಿಯಾರ್‌, ರಾಷ್ಟ್ರ ರಕ್ಷಣಾ ಪಡೆ ಮುಖಂಡ ಪುನೀತ್ ಕೆರೆಹಳ್ಳಿ, ಹಾಗೂ ನಿರೂಪಕ ಕಿರಿಕ್‌ ಕೀರ್ತಿ ವಿರುದ್ಧ ಎಸ್.ಜೆ.ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಯಾರರ ವಿರುದ್ಧ ದೂರು?

ಕನ್ನಡ ಹೋರಾಟಗಾರ ಬೈರಪ್ಪ ಹರೀಶ್ ಕುಮಾರ್ ಎಂಬುವರು ನಗರದ 48ನೇ ಎಸಿಜೆಎಂ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಕೋರ್ಟ್‌ ಸೂಚನೆಯಂತೆ ಇದೀಗ ಪೊಲೀಸರು ವಸಂತ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಕಿರಿಕ್ ಕಿರ್ತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆ ಹಿನ್ನೆಲೆ

ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ದೂರುದಾರರು ಧರ್ಮಸ್ಥಳ ದೌರ್ಜನ್ಯ ಪ್ರಕರಣದಲ್ಲಿ ವಸಂತ ಗಿಳಿಯಾರ್ ಜತೆ ಚರ್ಚೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಪರಸ್ಪರರ ನಡುವೆ ಅಭಿಪ್ರಾಯ, ಭಿನ್ನಾಭಿಪ್ರಾಯದ ವಾಗ್ವಾದ ನಡೆದಿತ್ತು. ಕಾರ್ಯಕ್ರಮ ಮುಗಿದ ಬಳಿಕ ಹೊರಗಡೆ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ ಆಪ್ತರು ಸೇರಿ ನನ್ನ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದರು. ಅಲ್ಲದೆ, ಜೀವ ಬೆದರಿಕೆ ಹಾಕಿದ್ದರು ಎಂದು ಹರೀಶ್‌ ನೀಡಿದ್ದ ದೂರಿನಲ್ಲಿ ಉಲ್ಲೇಖಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಧರ್ಮಸ್ಥಳ 74 ಅಸಹಜ ಸಾವು ಪ್ರಕರಣ: 2 ವಾರದಲ್ಲಿ ವಿವರ ನೀಡುವಂತೆ ಹೈಕೋರ್ಟ್ ಸೂಚನೆ
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌