ಮೃತನ ತಮ್ಮನಿಗೂ ಸಿಗಲಿದೆ ಪರಿಹಾರ! ಹೈಕೋರ್ಟ್ ಮಹತ್ವದ ಆದೇಶ, ಏನಿದು ಪ್ರಕರಣ?

Kannadaprabha News   | Kannada Prabha
Published : Jul 08, 2026, 05:45 AM IST
Karnataka High court

ಸಾರಾಂಶ

ರಸ್ತೆ ಅಪಘಾತ(Road Accident)ದಲ್ಲಿ ಮೃತಪಟ್ಟ ವ್ಯಕ್ತಿಯ ಪೋಷಕರಿಗೆ ಸಿಗುವ ಪರಿಹಾರ ಮೊತ್ತದಲ್ಲಿ ಮೃತನ ಕಿರಿಯ ಸಹೋದರ ಸಹ ಪ್ರತ್ಯೇಕ ಪಾಲು ಪಡೆದುಕೊಳ್ಳುವ ಹಕ್ಕು ಹೊಂದಿರುತ್ತಾನೆ ಎಂದು ಹೈಕೋರ್ಟ್(High court) ಆದೇಶಿಸಿದೆ. ಏನಿದು ಪ್ರಕರಣ?

 ಬೆಂಗಳೂರು (ಜು.8): ರಸ್ತೆ ಅಪಘಾತ(Road Accident)ದಲ್ಲಿ ಮೃತಪಟ್ಟ ವ್ಯಕ್ತಿಯ ಪೋಷಕರಿಗೆ ಸಿಗುವ ಪರಿಹಾರ ಮೊತ್ತದಲ್ಲಿ ಮೃತನ ಕಿರಿಯ ಸಹೋದರ ಸಹ ಪ್ರತ್ಯೇಕ ಪಾಲು ಪಡೆದುಕೊಳ್ಳುವ ಹಕ್ಕು ಹೊಂದಿರುತ್ತಾನೆ ಎಂದು ಹೈಕೋರ್ಟ್(High court) ಆದೇಶಿಸಿದೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ಮೂಲದ ಬಿ.ಟೆಕ್ ವಿದ್ಯಾರ್ಥಿ ಚಾಕಲಿ ಗಣೇಶ್ (22) ಎಂಬಾತ 2021ರ ಜುಲೈ 18ರಂದು ಬೆಂಗಳೂರಿನ ಯಲಹಂಕದ ಅಲ್ಲಾಳಸಂದ್ರ ಸೇತುವೆ ಬಳಿ ಬೈಕ್‌ನಲ್ಲಿ ತೆರಳುತಿದ್ದಾಗ ರಸ್ತೆ ಬದಿ ನಿಂತಿದ್ದ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ‌ ಪರಿಣಾಮ ಮೃತಪಟ್ಟಿದ್ದ.

ಇದನ್ನೂ ಓದಿ: ಶಿಕ್ಷಕರು ಮಕ್ಕಳಿಗೆ ಹೊಡೆದು ಪಾಠ ಕಲಿಸುವುದು ಸಹಿಸಲ್ಲ: ಹೈಕೋರ್ಟ್‌ ಎಚ್ಚರಿಕೆ! ಏನಿದು ಪ್ರಕರಣ?

ಪ್ರಕರಣ‌ ಸಂಬಂಧ ಬೆಂಗಳೂರಿನ ಮೋಟಾರು ಅಪಘಾತ ಪರಿಹಾರ ನ್ಯಾಯಾಧಿಕರಣ (ಎಂಎ‌ಸಿಟಿ) ಘೋಷಿಸಿದ್ದ ‌23.78 ಲಕ್ಷ ರು. ಪರಿಹಾರದ ಮೊತ್ತ ಹೆಚ್ಚಿಸುವಂತೆ ಕೋರಿ ಮೃತನ ಪೋಷಕರಾದ ಚಾಕಲಿ ರಾಮಾಂಜಿನಪ್ಪ, ಸಿ.ಶಿವಮ್ಮ ಹಾಗೂ ಸಹೋದರ ಲೋಕೇಶ್‌ ಹೈಕೋರ್ಟ್‌ಗೆ ಮೇಲ್ಮನವಿ‌‌ ಸಲ್ಲಿಸಿದ್ದರು.

ಈ ಮೇಲ್ಮನವಿಯನ್ನು ಭಾಗಶಃ ಪುರಸ್ಕರಿಸಿರುವ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣವರ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ನ್ಯಾಯಾಧಿಕರಣ ಘೋಷಿಸಿದ್ದ ಪರಿಹಾರದ ಮೊತ್ತವನ್ನು 23,78 ಲಕ್ಷ ರು. ಇಂದ 39.45 ಲಕ್ಷ ರು.ಗೆ ಹೆಚ್ಚಿಸಿದೆ. ನ್ಯಾಯಾಧಿಕರಣ ಈ ಹಿಂದೆ ಮೃತ ವಿದ್ಯಾರ್ಥಿಯ ಅಕಾಲಿಕ ಮರಣದಿಂದ ಉಂಟಾದ ಪ್ರೀತಿ-ವಾತ್ಸಲ್ಯದ ನಷ್ಟಕ್ಕಾಗಿ ತಂದೆ-ತಾಯಿಗೆ ಪರಿಹಾರ ಘೋಷಿಸಿದೆ. 

ಇದನ್ನೂ ಓದಿ: ಮನೇಲಿ ನಾಯಿ ಸಾಕಿದ್ದೀರಾ ಎಚ್ಚರ! ಈ ತಪ್ಪು ಮಾಡಿದ್ರೆ ಕಾನೂನು ಸಂಕಷ್ಟ ಗ್ಯಾರಂಟಿ, ಹೈಕೋರ್ಟ್ ಏನು ಹೇಳಿದ ಗೊತ್ತಾ?

ಆದರೆ, ಮೃತನ ಅವಲಂಬಿತನಾಗಿದ್ದ ಕಿರಿಯ ಸಹೋದರಿಗೆ ಪರಿಹಾರ ನಿಗದಿಪಡಿಸಿಲ್ಲ. ತನ್ನ ಅಣ್ಣನ ಪ್ರೀತಿ ಹಾಗೂ ವಾತ್ಸಲ್ಯವನ್ನು ಕಳೆದುಕೊಂಡಿರುವುದರಿಂದ ಆತನೂ ಪರಿಹಾರಕ್ಕೆ ಅರ್ಹನಾಗಿರುತ್ತಾನೆ ಎಂದು ಹೈಕೋರ್ಟ್‌ ಆದೇಶದಲ್ಲಿ ಸ್ಪಷ್ಟಪಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಿಟ್‌ಕಾಯಿನ್ ಹಗರಣ: ಶ್ರೀಕಿ ಸೇರಿ ಮೂವರ ವಿರುದ್ಧ 3,500 ಪುಟಗಳ ಚಾರ್ಜ್‌ಶೀಟ್! ಹ್ಯಾಕರ್‌ಗಳಿಗೆ ಬಿಗಿಯಾದ ಇಡಿ ಪಾಶ
KSR Bengaluru ರೈಲ್ವೆ ನಿಲ್ದಾಣ ಅಭಿವೃದ್ಧಿ ಯೋಜನೆ, ಬರೋಬ್ಬರಿ ₹1370 ಕೋಟಿ ವೆಚ್ಚದಲ್ಲಿ ನಿಲ್ದಾಣ ವಿಶ್ವದರ್ಜೆಗೆ!