
ಬೆಂಗಳೂರು, (ಆ.09):ಕೋಟ ಶ್ರೀನಿವಾಸ ಪೂಜಾರಿ ಅವರು ಸಮಾಜ ಕಲ್ಯಾಣ ಸಚಿವರಾಗಿ ಅಧಿಕಾರ ವಹಿಸಿಕೊಂಡ ಬಳಿಕ ಇಲಾಖೆಯ ಅಧಿಕಾರಿಗಳ ಜತೆ ಮೊದಲ ಸಭೆ ನಡೆಸಿದರು. ಈ ಫಸ್ಟ್ ಮೀಟಿಂಗ್‌ನಲ್ಲೇ ಪರಿಶಿಷ್ಟ ಜಾತಿಯವರಿಗೆ ಸಿಹಿ ಸುದ್ದಿ ನೀಡಿದ್ದಾರೆ.
ಹೌದು.. ಇಂದು (ಸೋಮವಾರ) ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಥಮ ಸಭೆ ನಡೆಸಿ ನಂತರ ಮಾಧ್ಯಮಗಳೊಂದಗಿಎ ಮಾತನಾಡಿದ ಅವರು, ಪರಿಶಿಷ್ಟ ಜಾತಿಯವರಿಗೆ ಮನೆ ಕಟ್ಟಿಕೊಳ್ಳಲು ರಾಜ್ಯ ಸರ್ಕಾರ ನೀಡುತ್ತಿರುವ ಪ್ರೋತ್ಸಾಹ ಧನವನ್ನು 1.75 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಮಾಹಿತಿ ನೀಡಿದರು.
2020-21ರ SSLC ಫಲಿತಾಂಶ ಪ್ರಕಟ, ಬ್ರಿಟಿಷ್ ಹೈಕಮಿಷನರಿಗೆ ಕನ್ನಡ ಪಾಠ; ಆ.9ರ ಟಾಪ್ 10 ಸುದ್ದಿ!
ರಾಜ್ಯದಲ್ಲಿ 1 ಕೋಟಿ 20 ಲಕ್ಷ ಪರಿಶಿಷ್ಟ ಸಮಾಜ ಇದೆ. ಪರಿಶಿಷ್ಟ ಜಾತಿಯವರಿಗೆ ಮನೆ ಕಟ್ಟಲಿಕ್ಕೆ 1 ಲಕ್ಷದ 75 ಸಾವಿರ ರೂಪಾಯಿ ಮಾತ್ರ ನೀಡಲಾಗುತ್ತಿದೆ. ಹೀಗಾಗಿ ಮನೆ ನಿರ್ಮಿಸಲು ಆರ್ಥಿಕವಾಗಿ ತುಂಬಾ ಕಷ್ಟ ಇದೆ. ಎಲ್ಲ ಬಡವರಿಗೆ ಮನೆ, ಶೌಚಾಲಯ, ವಿದ್ಯುತ್ ಕಲ್ಪಿಸುವ ವ್ಯವಸ್ಥೆ ಆಗಬೇಕು. ಅಲ್ಲದೆ ಅವರ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತೆ ಆರೋಗ್ಯ ಇರಬೇಕು. ಈ ಕಾರಣಕ್ಕೆ ಅವರಿಗೆ ಕೊಡಬೇಕಿರುವ ಮನೆಗಳನ್ನು 5 ಲಕ್ಷಕ್ಕೆ ಏರಿಸಬೇಕೆಂದು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಸಿಎಂ ಹಾಗೂ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಕಳುಹಿಸಿದ್ದೇವೆ ಎಂದು ಹೇಳಿದರು.
ಇನ್ನು ಇಲಾಖೆಯಲ್ಲಿ ಒಂದು ವರ್ಷಗಳ ಕಾಲ ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಲು ನಿರ್ಧಾರ ಮಾಡಿದ್ದೇವೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ