
ವಿಧಾನ ಪರಿಷತ್ (ಡಿ.7) : ರಾಜ್ಯದ 100 ಮದರಸಾಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಮಕ್ಕಳಿಗೆ ಎರಡು ವರ್ಷ ಕನ್ನಡ, ಇಂಗ್ಲಿಷ್, ವಿಜ್ಞಾನ, ಗಣಿತ ಹಾಗೂ ಇತರ ವಿಷಯಗಳನ್ನು ಪ್ರಾಯೋಗಿಕವಾಗಿ ಬೋಧಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಜೆಡಿಎಸ್ ಸದಸ್ಯ ಬಿ.ಎಂ.ಫಾರೂಖ್ ಅವರ ಪ್ರಶ್ನೆಗೆ ವಕ್ಫ್ ಮತ್ತು ಅಲ್ಪಸಂಖ್ಯಾತರ ಸಚಿವ ಜಮೀರ್ ಅಹಮದ್ ಖಾನ್ ಅವರ ಪರವಾಗಿ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಮುಸ್ಲಿಂ ಸಮುದಾಯದ ನೋಂದಾಯಿತ ವಕ್ಫ್ ಆಸ್ತಿಗಳಲ್ಲಿ ಹಾಗೂ ವಕ್ಫ್ ಸಂಸ್ಥೆಗಳು ನಡೆಸುತ್ತಿರುವ ಮದರಸಾಗಳಲ್ಲಿ ಕಲಿಯುತ್ತಿರುವ ಮಕ್ಕಳು ಕೇವಲ ಧಾರ್ಮಿಕ ವಿಷಯಗಳನ್ನು ಕಲಿಯುವುದರಿಂದ ಅವರು ಸಮಾಜದ ಮುಖ್ಯವಾಹಿನಿಯಿಂದ ವಿಮುಖರಾಗುತ್ತಾರೆ ಎಂಬ ಕಾರಣದಿಂದ ಸದ್ಯ 100 ಮದರಸಾಗಳಲ್ಲಿ ಇತರ ಶಿಕ್ಷಣ ನೀಡಲು ಉದ್ದೇಶಿಸಲಾಗಿದೆ. ಎರಡು ವರ್ಷಗಳ ಕಾಲ ಬೋಧಿಸಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಮತ್ತು ಪದವಿಯನ್ನು ರಾಜ್ಯ/ ರಾಷ್ಟ್ರೀಯ ಮುಕ್ತ ಶಾಲೆಗಳ ಮೂಲಕ/ ದೂರ ಶಿಕ್ಷಣದ ಮೂಲಕ ಕೈಗೊಳ್ಳಲು ಸರ್ಕಾರ ಈಗಾಗಲೇ ಆದೇಶ ಹೊರಡಿಸಿದೆ. ಈ ಕುರಿತು ಕ್ರಿಯಾಯೋಜನೆ ತಯಾರಿಸಲಾಗುತ್ತಿದೆ ಎಂದರು.
ಬಿಜೆಪಿ ಅಧಿಕಾರದಲ್ಲಿದ್ದ 4 ವರ್ಷ ಬೆಂಗ್ಳೂರಿನಗುಂಡಿ ಮುಚ್ಚಲಾಗಲಿಲ್ಲ: ಸಿಎಂ ತಿರುಗೇಟು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ