ನಿಗಮಗಳಿಂದ ಪ್ರಸ್ತಾವನೆ ಬಂದರೆ ಬಸ್‌ ಟಿಕೆಟ್‌ ದರ ಏರಿಕೆ ನಿರ್ಧಾರ: ಸಚಿವ ರಾಮಲಿಂಗಾರೆಡ್ಡಿ

By Govindaraj S  |  First Published Jun 9, 2024, 4:32 AM IST

ರಾಜ್ಯದಲ್ಲಿ ಸರ್ಕಾರಿ ಬಸ್‌ ಪ್ರಯಾಣ ದರ ಹೆಚ್ಚಳವಾಗಿ ನಾಲ್ಕು ವರ್ಷಗಳಾಗಿವೆ. ಅದಕ್ಕೂ ಮೊದಲು ಐದು ವರ್ಷಗಳ ಹಿಂದೆ ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಹೀಗಾಗಿ, ನಿಗಮಗಳಿಂದ ಪ್ರಸ್ತಾವನೆ ಬಂದರೆ ದರ ಏರಿಕೆ ಮಾಡಬೇಕೆ ಅಥವಾ ಬೇಡವೇ ಎಂಬ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. 


ಬೆಂಗಳೂರು (ಜೂ.09): ರಾಜ್ಯದಲ್ಲಿ ಸರ್ಕಾರಿ ಬಸ್‌ ಪ್ರಯಾಣ ದರ ಹೆಚ್ಚಳವಾಗಿ ನಾಲ್ಕು ವರ್ಷಗಳಾಗಿವೆ. ಅದಕ್ಕೂ ಮೊದಲು ಐದು ವರ್ಷಗಳ ಹಿಂದೆ ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಹೀಗಾಗಿ, ನಿಗಮಗಳಿಂದ ಪ್ರಸ್ತಾವನೆ ಬಂದರೆ ದರ ಏರಿಕೆ ಮಾಡಬೇಕೆ ಅಥವಾ ಬೇಡವೇ ಎಂಬ ಬಗ್ಗೆ ತೀರ್ಮಾನಿಸುತ್ತೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ತನ್ಮೂಲಕ ಮೂಲಕ ಬಸ್ ಪ್ರಯಾಣ ದರ ಏರಿಕೆಯ ಸಾಧ್ಯತೆಗಳಿವೆ ಎಂಬ ಸುಳಿವು ಬಿಟ್ಟುಕೊಟ್ಟಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳಿಂದ ಪ್ರಯಾಣ ದರ ಏರಿಕೆ ಬಗ್ಗೆ ಇನ್ನೂ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ.

ಒಂದು ವೇಳೆ ನಿಗಮಗಳು ಪ್ರಯಾಣ ದರ ಹೆಚ್ಚಳದ ಪ್ರಸ್ತಾವನೆ ಸಲ್ಲಿಸಿದರೆ ಅದನ್ನು ಪರಿಶೀಲಿಸಿ, ಪ್ರಯಾಣ ದರ ಏರಿಕೆ ಮಾಡಬೇಕೆ ಅಥವಾ ಬೇಡವೇ ಎಂಬ ಬಗ್ಗೆ ತೀರ್ಮಾನಿಸುತ್ತೇವೆ. ಪ್ರಯಾಣ ದರ ಏರಿಕೆ ಮಾಡುವುದಕ್ಕೆ ಯಾವುದೇ ನಿಗದಿತ ಅವಧಿಯಿಲ್ಲ. ಪ್ರತಿ ವರ್ಷವೂ ಪ್ರಯಾಣ ದರ ಏರಿಕೆ ಮಾಡಬಹುದು. ಕಳೆದ ನಾಲ್ಕು ವರ್ಷಗಳ ಹಿಂದೆ ಪ್ರಯಾಣ ದರ ಹೆಚ್ಚಿಸಲಾಗಿತ್ತು. ಅದಕ್ಕೂ ಮೊದಲು 5 ವರ್ಷಗಳ ಹಿಂದೆ ಪ್ರಯಾಣ ದರ ಏರಿಕೆ ಮಾಡಲಾಗಿತ್ತು. ಈಗ ಪ್ರಯಾಣ ದರ ಏರಿಕೆ ಬಗ್ಗೆ ನಿಗಮಗಳಿಂದ ಪ್ರಸ್ತಾವನೆ ಬಂದ ನಂತರವೇ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದರು. 

Tap to resize

Latest Videos

ಶೀಘ್ರವೇ ಬಸ್‌ ಪ್ರಯಾಣ ದರ ಏರಿಕೆ?: ಶೇ.10ರಿಂದ 15ರಷ್ಟು ಟಿಕೆಟ್ ಹೆಚ್ಚಳ

ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೇ ಎಂಬ ಪ್ರಶ್ನೆಗೆ ಉತ್ತರಿಸಿ, ಗ್ಯಾರಂಟಿ ಯೋಜನೆಗಳನ್ನು ನಾವು ಚುನಾವಣೆಗಾಗಿ, ಮತ ಗಳಿಕೆಗಾಗಿ ಜಾರಿಗೆ ತಂದಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿದ್ದ ಆರ್ಥಿಕ ಹಿಂದುಳಿದವರಿಗೆ ನೆರವಾಗುವ ಸಲುವಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೆವು. ಕಾಂಗ್ರೆಸ್‌ ಯಾವಾಗಲೂ ಆರ್ಥಿಕ ಹಿಂದುಳಿದವರ ಪರವಾಗಿ ನಿಂತಿದೆ. ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಉಳುವವನೇ ಭೂಮಿಯ ಒಡೆಯ ಯೋಜನೆ ತಂದು ಹಲವರು ಜಮೀನು ಹೊಂದುವಂತಾಯಿತು. ಆದರೆ, ಈಗ ಕಾಂಗ್ರೆಸ್‌ ಜಾರಿಗೆ ತಂದಿದ್ದ ಯೋಜನೆಗಳ ಫಲಾನುಭವಿಗಳೇ ಪಕ್ಷದಿಂದ ದೂರವಾಗಿದ್ದಾರೆ. ಇದು ದುರದೃಷ್ಟಕರ ಎಂದು ಹೇಳಿದರು.

click me!