ಗುತ್ತಿಗೆ ಆಧಾರದಲ್ಲಿ 337 ವೈದ್ಯರ ನೇಮಕಕ್ಕೆ ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್

Published : Feb 16, 2024, 08:23 PM IST
ಗುತ್ತಿಗೆ ಆಧಾರದಲ್ಲಿ 337 ವೈದ್ಯರ ನೇಮಕಕ್ಕೆ ನಿರ್ಧಾರ: ಸಚಿವ ದಿನೇಶ್ ಗುಂಡೂರಾವ್

ಸಾರಾಂಶ

ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 337 ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ವಿಧಾನಸಭೆ (ಫೆ.16): ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಖಾಲಿ ಇರುವ 337 ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‌ ಸದಸ್ಯ ಗೋಪಾಲಕೃಷ್ಣ ಬೇಳೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಲಾಖೆಯಲ್ಲಿ 337 ತಜ್ಞ ವೈದ್ಯರ ಹುದ್ದೆ ಖಾಲಿ ಇವೆ. ತಾತ್ಕಾಲಿಕವಾಗಿ ಈಗ ಗುತ್ತಿಗೆ ಆಧಾರದಲ್ಲಿ ಆ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಲಾಗಿದೆ. ಈ ಪೈಕಿ ಸಾಗರ ಉಪ ವಿಭಾಗೀಯ ಆಸ್ಪತ್ರೆಯಲ್ಲಿ ಖಾಲಿ ಇರುವ ನೇತ್ರ ತಜ್ಞರು ಮತ್ತು ರೇಡಿಯಾಲಜಿ ತಜ್ಞರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳುವ ಪ್ರಕ್ರಿಯೆ ಚಾಲನೆಯಲ್ಲಿದೆ ಎಂದರು.

ಇದೇ ವೇಳೆ ಕಾಂಗ್ರೆಸ್‌ ಸದಸ್ಯ ಸಿ.ಎನ್‌.ಬಾಲಕೃಷ್ಣ ಅವರು ಕೇಳಿದ ತಮ್ಮ ಕ್ಷೇತ್ರದ ಆಸ್ಪತ್ರೆಗಳಲ್ಲಿನ ಮೂಲ ಸೌಕರ್ಯ ಒದಗಿಸಬೇಕೆಂಬ ಪ್ರಶ್ನೆಗೆ, ಆಸ್ಪತ್ರೆಗಳ ನಿರ್ವಹಣಾ ಅನುದಾನ ಹೆಚ್ಚಳಕ್ಕೆ ಸಿಎಂಗೆ ಮನವಿ ಮಾಡಿದ್ದೇವೆ. ರಾಜ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವ್ಯಾಪ್ತಿಗೊಳಪಟ್ಟಿರುವ ಎಲ್ಲ ಆಸ್ಪತ್ರೆಗಳಿಗೆ ವರ್ಷಕ್ಕೆ 25 ಕೋಟಿ ರು. ನಿರ್ವಹಣಾ ಅನುದಾನ ನೀಡಲಾಗುತ್ತಿದೆ. ಇದು ಸಾಕಾಗುತ್ತಿಲ್ಲ. ಇದರ ಹೆಚ್ಚಳಕ್ಕೆ ಮಖ್ಯಮಂತ್ರಿಗಳಲ್ಲಿ ಕೋರಲಾಗಿದೆ. ಆಸ್ಪತ್ರೆಗಳಲ್ಲಿ ಎಲ್ಲ ಸೌಕರ್ಯಗಳು ಸಮರ್ಪಕವಾಗಿರಬೇಕು ಎನ್ನುವುದು ನಮ್ಮ ಉದ್ದೇಶ ಎಂದರು.

ತೆರಿಗೆ ಬಾಕಿ ದಂಡ ಮನ್ನಾಗೆ ಬಿಬಿಎಂಪಿ ತಿದ್ದುಪಡಿ ವಿಧೇಯಕ: ಸಂಪುಟ ಒಪ್ಪಿಗೆ

ಎಂಡೋ ಪೀಡಿತರ ಚಿಕಿತ್ಸೆಗೆ ಕೇರಿಂಗ್ ಸೆಂಟರ್: ಜಿಲ್ಲೆಯ ಎಂಡೋಸಲ್ಪಾನ್ ಪೀಡಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಕೇರಿಂಗ್ ಸೆಂಟರನ್ನು ಖಾಸಗಿ ಸಹಭಾಗಿತ್ವದಲ್ಲಿ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜಿಲ್ಲೆಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅವರು ನಗರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳ ಕಚೇರಿಯಲ್ಲಿ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನ ನಡೆಸಿ ಮಾತನಾಡಿದರು. ಎಂಡೋಸಲ್ಪನ್ ಪೀಡಿತರ ಆರೋಗ್ಯ ಮೇಲುಸ್ತುವಾರಿಗೆ ಪ್ರೋಗ್ರಾಂ ಆಫೀಸರ್ ಹಾಗೂ ವಾಹನದ ಬೇಡಿಕೆಯನ್ನೂ ಪೂರೈಸಲಾಗುವುದು ಎಂದವರು ಭರವಸೆ ನೀಡಿದರು. ರಾಜ್ಯದಲ್ಲಿ ಖಾಲಿ ಇರುವ ಪ್ರಯೋಗಾಲಯ ತಜ್ಞರು, ಶ್ರುಶ್ರೂಕರ ಹುದ್ದೆಗಳನ್ನು ಭರ್ತಿ ಮಾಡಲು 800 ಮಂದಿಯ ನೇಮಕ ಪ್ರಕ್ರಿಯೆ ಚಾಲನೆಯಲ್ಲಿದ್ದು, ಅದರಲ್ಲಿ ಉಡುಪಿ ಜಿಲ್ಲೆಗೂ ಅಗತ್ಯ ಸಿಬ್ಬಂದಿಯನ್ನು ನಿಯೋಜಿಸಲಾಗುತ್ತದೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಶಾಲೆಯಿಂದ ಮರಳುತ್ತಿದ್ದ ವೇಳೆ ಬೀದಿ ನಾಯಿ ದಾಳಿ, 5 ವರ್ಷದ LKG ಬಾಲಕಿಗೆ ಗಂಭೀರ ಗಾಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್