ಕರ್ನಾಟಕದಲ್ಲಿ 6 ಹೊಸ ನಗರ ನಿರ್ಮಾಣಕ್ಕೆ ತೀರ್ಮಾನ: ಸಿಎಂ ಬೊಮ್ಮಾಯಿ

By Govindaraj S  |  First Published Sep 5, 2022, 4:15 AM IST

ರಾಜ್ಯದಲ್ಲಿ ಆರು ಹೊಸ ನಗರಗಳನ್ನು ನಿರ್ಮಾಣ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಇನ್ನೂ ಕೆಲ ನಗರಗಳ ವಿಸ್ತರಣೆಗೆ ಮಾಸ್ಟರ್‌ ಪ್ಲ್ಯಾನ್‌ ಕೂಡ ಸಿದ್ಧಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 


ಹುಬ್ಬಳ್ಳಿ (ಸೆ.05): ರಾಜ್ಯದಲ್ಲಿ ಆರು ಹೊಸ ನಗರಗಳನ್ನು ನಿರ್ಮಾಣ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ. ಇನ್ನೂ ಕೆಲ ನಗರಗಳ ವಿಸ್ತರಣೆಗೆ ಮಾಸ್ಟರ್‌ ಪ್ಲ್ಯಾನ್‌ ಕೂಡ ಸಿದ್ಧಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಲ್ಲಿಯ ಕಸಬಾಪೇಟ, ದಕ್ಷಿಣ ಸಂಚಾರ ಪೊಲೀಸ್‌ ಠಾಣೆಗಳ ಉದ್ಘಾಟನೆ ಮತ್ತು ಗೋಕುಲ ರಸ್ತೆ, ವಿದ್ಯಾನಗರ ಹಾಗೂ ಹುಬ್ಬಳ್ಳಿ ಗ್ರಾಮೀಣ ಪೊಲೀಸ್‌ ಠಾಣೆಗಳ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ನಗರಾಭಿವೃದ್ಧಿ ಇಲಾಖೆಯಿಂದ ಎರಡು ಹೊಸ ತೀರ್ಮಾನ ಕೈಗೊಳ್ಳಲಾಗಿದೆ. ಅವುಗಳಲ್ಲಿ ಒಂದು ರಾಜ್ಯದಲ್ಲಿ ಆರು ಹೊಸ ನಗರಗಳನ್ನು ನಿರ್ಮಿಸುವುದು. ಈ ಬಗ್ಗೆ ಬಜೆಟ್‌ನಲ್ಲಿ ಕೂಡ ಪ್ರಸ್ತಾಪಿಸಲಾಗಿದೆ ಎಂದರು.

ಇನ್ನು ಎರಡನೆಯದಾಗಿ ನಗರಾಭಿವೃದ್ಧಿ ಇಲಾಖೆ ಮೂಲಕ ಭವಿಷ್ಯದ ನಗರಗಳೆಂದು ಕೆಲ ನಗರಗಳನ್ನು ಗುರುತಿಸಲಾಗಿದೆ. ಹುಬ್ಬಳ್ಳಿ-ಧಾರವಾಡ, ಕಲಬುರಗಿ, ಮೈಸೂರು, ಮಂಗಳೂರು, ವಿಜಯಪುರ ಈ ನಗರಗಳಾಗಿದ್ದು, ಇವುಗಳನ್ನು ಮೆಗಾ ಸಿಟಿಗಳಂತೆ ಅಭಿವೃದ್ಧಿ ಪಡಿಸುವ ಉದ್ದೇಶ ಇದೆ. ಇವುಗಳು ಬೆಳೆಯುವ ಅರ್ಹತೆ ಇರುವ ನಗರಗಳಾಗಿವೆ. ಭವಿಷ್ಯದ ನಗರಗಳೆಂದು ಕರೆಯಲಾಗುವ ಈ ನಗರಗಳ ಮಾಸ್ಟರ್‌ ಪ್ಲ್ಯಾನ್‌ ವಿಸ್ತರಿಸುವ ಮೂಲಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ವಿವರಿಸಿದರು.

Tap to resize

Latest Videos

ಡಬಲ್‌ ಎಂಜಿನ್‌ ಸರ್ಕಾರದಿಂದಲೇ ಇಷ್ಟೆಲ್ಲ ಅಭಿ​ವೃದ್ಧಿ ಸಾಧ್ಯ​ವಾ​ಯ್ತು: ಸಿಎಂ ಬೊಮ್ಮಾಯಿ

ಬಿಯಾಂಡ್‌ ಬೆಂಗಳೂರು ಯೋಜನೆಯಡಿ ಎಫ್‌ಎಂಸಿಜಿ ಕ್ಲಸ್ಟರ್‌ ಸಹ ಶೀಘ್ರದಲ್ಲಿ ಕಾರ್ಯಾರಂಭ ಮಾಡಲಿದೆ. ಅಲ್ಲದೆ, 2022ರೊಳಗಾಗಿ ಸ್ಪೆಷಲ್‌ ಇನ್ವೆಸ್ಟ್‌ ರೀಜನ್‌ (ಎಸ್‌ಐಆರ್‌) ಕಾರ್ಯಾರಂಭ ಮಾಡಲಿದೆ ಎಂದ ಅವರು, ಇದರಿಂದ ರಾಜ್ಯದಲ್ಲಿ ಹೂಡಿಕೆ ಹೆಚ್ಚಿನ ಪ್ರಮಾಣದಲ್ಲಿ ಆಗಲಿದೆ. ಇವೆಲ್ಲವುಗಳಿಂದ ಇಡೀ ಉತ್ತರ ಕರ್ನಾಟಕದ ಚಿತ್ರಣವೇ ಬದಲಾಗಲಿದೆ. ಸಮಗ್ರ ಉತ್ತರ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ನುಡಿದರು.

ರಾಜ್ಯದಲ್ಲಿ 8,101 ಶಾಲಾ ಕಟ್ಟಡಗಳನ್ನು ಮುಂದಿನ ಐದು ವರ್ಷಗಳ ಅವಧಿಯಲ್ಲಿ ನಿರ್ಮಿಸುವ ಗುರಿ ಹೊಂದಲಾಗಿದೆ. ತಲಾ .7 ಕೋಟಿ ವೆಚ್ಚದಲ್ಲಿ ರಾಜ್ಯದಲ್ಲಿ 81 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನೂ ನಿರ್ಮಿಸುವ ಉದ್ದೇಶ ಇದೆ ಎಂದರು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್‌, ಮಾಜಿ ಸಿಎಂ ಜಗದೀಶ ಶೆಟ್ಟರ್‌, ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಇತರರಿದ್ದರು.

ರಾಜಕಾಲುವೆ ಒತ್ತುವರಿ ತೆರವಿಗೆ ಸಿಎಂ ತಾಕೀತು, ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ತನಿಖೆಗೆ ಆದೇಶ

ಲಿಂಬಾವಳಿ ವಿವಾದದ ಬಗ್ಗೆ ಮಾಹಿತಿ ಇಲ್ಲ: ಮಹಿಳೆಯೊಂದಿಗೆ ಶಾಸಕ ಅರವಿಂದ ಲಿಂಬಾವಳಿ ಅನುಚಿತ ವರ್ತನೆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಅವರೊಂದಿಗೆ ಮಾಹಿತಿ ಪಡೆದು ಮಾತನಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಭಾನುವಾರ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನು ಶನಿವಾರ ಬೆಂಗಳೂರಿನಲ್ಲಿರಲಿಲ್ಲ. ಹಾಗಾಗಿ ಹೆಚ್ಚಿನ ಮಾಹಿತಿ ಇಲ್ಲ. ಈ ಬಗ್ಗೆ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆಯುತ್ತೇನೆ. ಬಳಿಕ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

click me!