
ಬೆಂಗಳೂರು(ಸೆ.11): ಬೆಂಗಳೂರು ಮಹಾನಗರ ಸಾರಿಗೆ ನಿಗಮದಲ್ಲಿ (ಬಿಎಂಟಿಸಿ) ಕಳೆದ ಹದಿನೈದು ದಿನಗಳಿಂದ ಕೊರೋನಾ ಸೋಂಕು ಪ್ರಕರಣಗಳು ಇಳಿಮುಖವಾಗಿವೆ.
ಚಾಲಕರು, ನಿರ್ವಾಹಕರು, ಸಂಚಾರ ನಿರೀಕ್ಷಕರು, ಘಟಕ ವ್ಯವಸ್ಥಾಪಕರು, ಮೆಕ್ಯಾನಿಕ್‌ಗಳು ಸೇರಿದಂತೆ ನಿಗಮದ ವಿವಿಧ ವಿಭಾಗಗಳ 510 ಮಂದಿ ನೌಕರರು ಸೋಂಕಿಗೆ ಒಳಗಾಗಿದ್ದಾರೆ. ಈ ಪೈಕಿ 360 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ, ಉಳಿದ 150 ಮಂದಿ ವಿವಿಧ ಆಸ್ಪತ್ರೆಗಳು ಹಾಗೂ ಹೋಂ ಐಸೋಲೇಷನ್‌ಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಹದಿನೈದು ದಿನಗಳಲ್ಲಿ ನಿಗಮದಲ್ಲಿ ಕೇವಲ ಐದು ಪ್ರಕರಣಗಳು ಮಾತ್ರ ವರದಿಯಾಗಿವೆ ಬಿಎಂಟಿಸಿಯ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.
ಕೊರೋನಾ ಮಧ್ಯೆ ಬಿಎಂಟಿಸಿ ಎಸಿ ಬಸ್ ಸಂಚಾರ ಆರಂಭ
ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಸರ್ಕಾರದ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ನೌಕರರಿಗೂ ಈ ಬಗ್ಗೆ ಕಾಲ ಕಾಲಕ್ಕೆ ಅರಿವು ಮೂಡಿಸಲಾಗಿದೆ. ಬಸ್‌ಗಳು, ಬಸ್ ನಿಲ್ದಾಣ, ಘಟಕಗಳು ಹಾಗೂ ಕಾರ್ಯಾಗಾರಗಳಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ಈ ಎಲ್ಲ ಕಾರಣಗಳಿಂದ ನಿಗಮದಲ್ಲಿ ಸೋಂಕು ಪ್ರಕರಣಗಳು ತಗ್ಗಿವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ