ಸೋಂಕಿತ ಪ್ರತಕರ್ತರಿಗೆ ಪ್ರತ್ಯೇಕ ಬೆಡ್‌ ಮೀಸಲಿಗೆ ಮನವಿ

Kannadaprabha News   | Asianet News
Published : Apr 27, 2021, 07:53 AM ISTUpdated : Apr 28, 2021, 01:34 PM IST
ಸೋಂಕಿತ ಪ್ರತಕರ್ತರಿಗೆ ಪ್ರತ್ಯೇಕ ಬೆಡ್‌ ಮೀಸಲಿಗೆ ಮನವಿ

ಸಾರಾಂಶ

ಕೋವಿಡ್‌ ಸೋಂಕಿಗೆ ತುತ್ತಾಗುವ ಪತ್ರಕರ್ತರಿಗೆ ತಾಲೂಕು, ಜಿಲ್ಲಾ ಸರ್ಕಾರಿ ಆಸ್ಪತ್ರೆಗಳು ಹಾಗೂ ಪ್ರಮುಖ ಕಾರ್ಪೊರೇಟ್‌ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್‌ ಮೀಸಲಿರಿಸುವಂತೆ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ಸರ್ಕಾರಕ್ಕೆ ಮನವಿ ಮಾಡಿದೆ. 

ಬೆಂಗಳೂರು (ಏ.27):  ಪತ್ರಕರ್ತರನ್ನು ಕೋವಿಡ್‌ ವಾರಿಯರ್‌ ಎಂದು ಪರಿಗಣಿಸಿ, ಕೋವಿಡ್‌ ಸೋಂಕಿಗೆ ತುತ್ತಾಗುವ ಪತ್ರಕರ್ತರಿಗೆ ತಾಲೂಕು, ಜಿಲ್ಲಾ ಸರ್ಕಾರಿ ಆಸ್ಪತ್ರೆಗಳು ಹಾಗೂ ಪ್ರಮುಖ ಕಾರ್ಪೊರೇಟ್‌ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್‌ ಮೀಸಲಿರಿಸುವಂತೆ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಸಂಘದ ಅಧ್ಯಕ್ಷ ಶಿವಾನಂದ ತಗಡೂರು ನೇತೃತ್ವದ ಪತ್ರಕರ್ತರ ನಿಯೋಗವು ಸೋಮವಾರ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿತು. ಕೋವಿಡ್‌ ಸಂದರ್ಭದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಪತ್ರಕರ್ತರು ಹಾಗೂ ಮಾಧ್ಯಮ ಸಿಬ್ಬಂದಿ ತೀವ್ರ ಸಂಕಷ್ಟಎದುರಿಸುತ್ತಿದ್ದಾರೆ. ಕೋವಿಡ್‌ ಸೋಂಕಿಗೆ ಒಳಗಾದ ಪತ್ರಕರ್ತರ ಸ್ಥಿತಿ ಶೋಚನೀಯವಾಗಿದೆ. ಪ್ರಧಾನ ಮಂತ್ರಿ ಪತ್ರಕರ್ತರನ್ನು ಕೋವಿಡ್‌ ವಾರಿಯರ್‌ ಎಂದು ಕರೆದಿದ್ದು, ಆ ನಿಟ್ಟಿನಲ್ಲಿ ಈವರೆಗೆ ಕೇಂದ್ರ ಸರ್ಕಾರದಿಂದ ಯಾವುದೇ ಸೌಲಭ್ಯಗಳು ದೊರೆತಿಲ್ಲ. ಕೋವಿಡ್‌ ಎರಡನೇ ಅಲೆಯಲ್ಲಿ ಹಲವು ಪತ್ರಕರ್ತರು ಸೋಂಕಿಗೆ ಒಳಗಾಗಿ ಆಸ್ಪತ್ರೆ ಸೇರಿದ್ದರೂ ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ.

ಬೆಂಗಳೂರಲ್ಲಿ 2 ಲಕ್ಷ ಸಮೀಪಕ್ಕೆ ಸೋಂಕಿತರ ಸಂಖ್ಯೆ : ಎಚ್ಚರಿಕೆ ಅಗತ್ಯ

ಆದ್ದರಿಂದ, ಸರ್ಕಾರ ಮಾಧ್ಯಮ ಕ್ಷೇತ್ರದ ಬಗ್ಗೆ ಗಂಭೀರವಾಗಿ ಗಮನಹರಿಸಬೇಕು. ಪತ್ರಕರ್ತರನ್ನು ಕೋವಿಡ್‌ ವಾರಿಯರ್‌ ಎಂದು ಪರಿಗಣಿಸಿ, ಸೋಂಕಿತ ಪ್ರರ್ತಕರ್ತರಿಗೆ ಆಸ್ಪತ್ರೆಗಳಲ್ಲಿ ಪ್ರತ್ಯೇಕ ಬೆಡ್‌ ಮೀಸಲಿರಿಸುವಂತೆ ನಿಯೋಗ ಮನವಿ ಮಾಡಿದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಆರೋಗ್ಯ ಸಚಿವ, ಈ ಸಂಬಂಧ ಕೂಡಲೇ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಕೊರೋನಾ: ಎಲ್ಲರ ಗಮದಲ್ಲಿ ಇರಲಿ

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮಹಾಮೇಳಾವ್ ಅನುಮತಿ ನಿರಾಕರಣೆ: ನಾಡದ್ರೋಹಿ ಎಂಇಎಸ್ ‌ಪುಂಡರಿಗೆ ಶಾಕ್ ಕೊಟ್ಟ ಬೆಳಗಾವಿ ಜಿಲ್ಲಾಡಳಿತ
ಸಮಾಜ ಕಲ್ಯಾಣ ಸಚಿವರೇ ಇಲ್ಲಿ ನೋಡಿ, ಅಂಬೇಡ್ಕರ್ ವಸತಿ ಶಾಲೆಯಲ್ಲಿ ಮಕ್ಕಳಿಗೆ ನಿತ್ಯ ಟಾರ್ಚರ್!, ಪೆನ್ನು ಪುಸ್ತಕ ಕೇಳಿದ್ರೆ ಏಟು!