ರಾಜ್ಯದಲ್ಲಿ 17 ಸಾವಿರ ಗಡಿ ದಾಟಿದ ಡೆಂಘೀ ಪ್ರಕರಣ: ಮಳೆ ಜೋರಾದರೂ ಇಳಿಯದ ಸೋಂಕು

By Kannadaprabha News  |  First Published Jul 29, 2024, 7:51 AM IST

ರಾಜ್ಯದಲ್ಲಿ ಡೆಂಘೀ ಸೋಂಕಿನ ಅಬ್ಬರ ಮುಂದುವರೆದಿದೆ. ಭಾನುವಾರವೂ 320 ಮಂದಿಗೆ ಡೆಂಘೀ ದೃಢಪಟ್ಟಿದ್ದು ಒಟ್ಟು ಡೆಂಘೀ ಪ್ರಕರಣ 17 ಸಾವಿರ ಗಡಿ ದಾಟಿದೆ. ನಿತ್ಯ ಸರಾಸರಿ 2,500 ಪರೀಕ್ಷೆ ನಡೆಸುತ್ತಿದ್ದ ಆರೋಗ್ಯ ಇಲಾಖೆಯು ಭಾನುವಾರ 1,630 ಮಂದಿಗೆ ಮಾತ್ರ ಪರೀಕ್ಷೆ ನಡೆಸಿದೆ.


ಬೆಂಗಳೂರು (ಜು.29): ರಾಜ್ಯದಲ್ಲಿ ಡೆಂಘೀ ಸೋಂಕಿನ ಅಬ್ಬರ ಮುಂದುವರೆದಿದೆ. ಭಾನುವಾರವೂ 320 ಮಂದಿಗೆ ಡೆಂಘೀ ದೃಢಪಟ್ಟಿದ್ದು ಒಟ್ಟು ಡೆಂಘೀ ಪ್ರಕರಣ 17 ಸಾವಿರ ಗಡಿ ದಾಟಿದೆ. ನಿತ್ಯ ಸರಾಸರಿ 2,500 ಪರೀಕ್ಷೆ ನಡೆಸುತ್ತಿದ್ದ ಆರೋಗ್ಯ ಇಲಾಖೆಯು ಭಾನುವಾರ 1,630 ಮಂದಿಗೆ ಮಾತ್ರ ಪರೀಕ್ಷೆ ನಡೆಸಿದೆ. ಈ ಪೈಕಿ 320 ಮಂದಿಗೆ ಡೆಂಘೀ ಖಚಿತಪಟ್ಟಿದ್ದು, ಒಟ್ಟು ಡೆಂಘೀ ಪ್ರಕರಣಗಳ ಸಂಖ್ಯೆ 17,227ಕ್ಕೆ ಏರಿಕೆಯಾಗಿದೆ. ಭಾನುವಾರದ ಪ್ರಕರಣ ಸೇರಿ 3,004 ಮಂದಿ ಸಕ್ರಿಯ ಡೆಂಘೀ ರೋಗಿಗಳು ಚಿಕಿತ್ಸೆ ಯಲ್ಲಿದ್ದಾರೆ. ಈ ಪೈ 2,539 ಮಂದಿ ಮನೆಯಲ್ಲೇ ಚಿಕಿತ್ಸೆಯಲ್ಲಿದ್ದಾರೆ. 

465 ಮಂದಿ ಆಸ್ಪತ್ರೆಗೆ ದಾಖಲಾಗಿದ್ದು, ಇದರಲ್ಲಿ 9 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಯಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಭಾನುವಾರ ಬೆಂಗಳೂರು ನಗರದಲ್ಲಿ 142, ಬೆಳಗಾವಿ 21, ಹಾವೇರಿ, ದಾವಣಗೆರೆ ತಲಾ 17, ರಾಮನಗರ 15, ಕಲಬುರಗಿ 13 ಪ್ರಕರಣ ದೃಢಪಟ್ಟಿವೆ. ತುಮಕೂರು 9, ದಕ್ಷಿಣ ಕನ್ನಡ 7, ಮಂಡ್ಯ 6, ಚಿಕ್ಕಬಳ್ಳಾಪುರ 5, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ತಲಾ 4, ಚಾಮರಾಜನಗರ, ಬಾಗಲ ಕೋಟೆ, ವಿಜಯಪುರ ತಲಾ 3, ಧಾರವಾಡ, ಯಾದಗಿರಿ, ಬೀದರ್, ರಾಯಚೂರು ತಲಾ 2, ಕೊಡಗು, ಚಿಕ್ಕಮಗಳೂರು, ಕೊಪ್ಪಳ, ಉತ್ತರ ಕನ್ನಡ, ಗದಗ, ಕೋಲಾರ ಜಿಲ್ಲೆಗಳಲ್ಲಿ ತಲಾ ಒಂದೊಂದು ಪ್ರಕರಣ ದೃಢಪಟ್ಟಿದೆ.

Tap to resize

Latest Videos

ಡೆಂಘೀ ಕುರಿತ ಮಾಹಿತಿಗೆ ಉಚಿತ ಸಹಾಯವಾಣಿ: 1800 4258330 ಸಂಪರ್ಕಿಸಬಹುದು

ನ್ಯಾಮತಿಯಲ್ಲಿ ಸ್ವಚ್ಛತೆ ಕಾಪಾಡಲು ಪಪಂ ಸೂಚನೆ: ಡೆಂಘೀಜ್ವರ ತಡೆಗಟ್ಟುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಲೀಕರು ತಮ್ಮ ಖಾಲಿ ನಿವೇಶನಗಳಲ್ಲಿ ಬೆಳೆದಿರುವ ಗಿಡಗಳು, ಜಾಲಿ ಗಿಡಗಳನ್ನು, ತ್ಯಾಜ್ಯವನ್ನು ತೆರವುಗೊಳಿಸಬೇಕು ಎಂದು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಪಿ.ಗಣೇಶ್‌ ರಾವ್‌ ತಿಳಿಸಿದ್ದಾರೆ. ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಅನೇಕ ಕಡೆ ಖಾಲಿ ನಿವೇಶನಗಳಿವೆ. ಅವುಗಳಲ್ಲಿ ಕಳೆಗಿಡಗಳು ಬೆಳೆದಿವೆ. ಮನಬಂದಂತೆ ತ್ಯಾಜ್ಯ ವಿಲೇವಾರಿ ಮಾಡಲಾಗಿದೆ. ಇದರಿಂದ ಕೊಳಚೆ ನೀರು ಸೃಷ್ಟಿಯಾಗಿ, ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. 

ವಾಲ್ಮೀಕಿ, ಮುಡಾ ಅಕ್ರಮ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಆ.3ರಿಂದ ಬಿಜೆಪಿ-ಜೆಡಿಎಸ್ 7 ದಿನಗಳ ಪಾದಯಾತ್ರೆ

ಈಗ ಮಳೆಗಾಲವಾಗಿದ್ದು, ಕೊಳಕು ನೀರು ನಿಂತು ಡೆಂಘೀಜ್ವರ, ಮಲೇರಿಯಾ, ಚಿಕೂನ್‌ ಗುನ್ಯಾದಂಥ ರೋಗಗಳು ಜನರನ್ನು ಕಾಡುತ್ತಿವೆ. ಈ ಹಿನ್ನೆಲೆ ನಿವೇಶನಗಳ ಮಾಲೀಕರು, ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ತಿಳಿಸಿದ್ದಾರೆ. ಖಾಲಿ ನಿವೇಶನಗಳ ಮಾಲೀಕರು ವಾರದೊಳಗೆ ನಿವೇಶನಗಳಲ್ಲಿಯ ತ್ಯಾಜ್ಯವಸ್ತು, ಗಿಡಗಳನ್ನು ಸ್ವಚ್ಛಗೊಳಿಸಬೇಕು. ಇಲ್ಲದಿದ್ದರೆ ಪಟ್ಟಣ ಪಂಚಾಯಿತಿ ಸಿಬ್ಬಂದಿ ಮೂಲಕ ಮತ್ತು ಜೆಸಿಬಿ ಬಾಡಿಗೆ ಪಡೆದು ಸ್ವಚ್ಛಗೊಳಿಸಿ, ಅದಕ್ಕೆ ತಗಲಿದ ವೆಚ್ಚವನ್ನು ಮಾಲೀಕರಿಂದಲೇ ವಸೂಲು ಮಾಡಲಾಗುವುದು ಎಂದಿದ್ದಾರೆ.

click me!