ಜಿಲ್ಲೆಯಲ್ಲಿ ಮಾರಕ ಡೆಂಘೀ ಜ್ವರದ ಮಧ್ಯೆ ಇಲಿ ಜ್ವರ ಪತ್ತೆಯಾಗಿದೆ. ಜಿಲ್ಲಾಸ್ಪತ್ರೆಗೆ ದಾಖಲಾಗಿರುವ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. ತಾಲೂಕಿನ ದೇವಿಹೊಸೂರ ಗ್ರಾಮದ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಪತ್ತೆ.
ಹಾವೇರಿ (ಜು.08): ಜಿಲ್ಲೆಯಲ್ಲಿ ಮಾರಕ ಡೆಂಘೀ ಜ್ವರದ ಮಧ್ಯೆ ಇಲಿ ಜ್ವರ ಪತ್ತೆಯಾಗಿದೆ. ಜಿಲ್ಲಾಸ್ಪತ್ರೆಗೆ ದಾಖಲಾಗಿರುವ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. ತಾಲೂಕಿನ ದೇವಿಹೊಸೂರ ಗ್ರಾಮದ 12 ವರ್ಷದ ಬಾಲಕನಲ್ಲಿ ಇಲಿ ಜ್ವರ ಪತ್ತೆಯಾಗಿದ್ದು, ಸದ್ಯ ಬಾಲಕನನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ 15 ದಿನದಿಂದ ಬಾಲಕನಿಗೆ ದಿನ ಬಿಟ್ಟು ದಿನ ಜ್ವರ ಕಾಣಿಸಿಕೊಳ್ಳುತ್ತಿತ್ತು.
ಹೀಗಾಗಿ, ಜಾಂಡೀಸ್ ಇರಬಹುದು ಎಂದು ರಕ್ತ ತಪಾಸಣೆ ಮಾಡಲಾಗಿದ್ದು, ವರದಿಯಲ್ಲಿ ಇಲಿ ಜ್ವರ ದೃಢಪಟ್ಟಿದೆ. ಇಲಿ ಜ್ವರ ದೃಢಪಡುತ್ತಿದ್ದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ, ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಾಲಕನ ಆರೋಗ್ಯ ಸ್ಥಿರವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಇಲಿಜ್ವರ ಪತ್ತೆ ಬೆನ್ನಲ್ಲೇ ಆರೋಗ್ಯಾಧಿಕಾರಿಗಳು ಮಹತ್ವದ ಸಭೆ ನಡೆಸಿದ್ದು, ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಚನ್ನಪಟ್ಟಣದಲ್ಲಿ ನನ್ನ ಸ್ಫರ್ಧೆಗೆ ಎಚ್.ಡಿ.ಕುಮಾರಸ್ವಾಮಿ ಗ್ರೀನ್‌ಸಿಗ್ನಲ್: ಸಿ.ಪಿ.ಯೋಗೇಶ್ವರ್
ಭಟ್ಕಳದಲ್ಲಿ ಎಚ್1ಎನ್1, ಡೆಂಘೀ ಪತ್ತೆ: ತಾಲೂಕಿನಲ್ಲಿ ಎಚ್1ಎನ್1, ಇಲಿ ಜ್ವರ ಹಾಗೂ ಡೆಂಘೀ ಕಾಣಿಸಿಕೊಂಡಿರುವುದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಸ್ವಲ್ಪ ದಿನಗಳ ಹಿಂದೆ ಮದ್ರಾಸ್ ಐ ( ಕಣ್ಣು ಬೇನೆ) ವ್ಯಾಪಕವಾಗಿ ಕಾಣಿಸಿಕೊಂಡು ಮಕ್ಕಳು, ವೃದ್ಧರು, ಮಹಿಳೆಯರು ಸೇರಿದಂತೆ ಎಲ್ಲರೂ ಹೈರಾಣಾಗಿದ್ದರು. ಕಣ್ಣು ಬೇನೆ ಸಂಪೂರ್ಣವಾಗಿ ಗುಣವಾಗುವ ಪೂರ್ವದಲ್ಲೇ ಇದೀಗ ತಾಲೂಕಿನಲ್ಲಿ ಎಚ್1ಎನ್1, ಇಲಿ ಜ್ವರ ಹಾಗೂ ಡೆಂಘೀ ಕಾಣಿಸಿಕೊಂಡಿರುವುದು ಜನರ ಭಯಕ್ಕೆ ಕಾರಣವಾಗಿದೆ.
ತಾಲೂಕಿನಲ್ಲಿ ಗ್ರಾಮಾಂತರ ಭಾಗದಲ್ಲಿ 80 ವರ್ಷದ ಮಹಿಳೆಯೋರ್ವಳು ಇಲಿ ಜ್ವರದಿಂದ ಸಾವನ್ನಪ್ಪಿದ ಬಗ್ಗೆ ಆರೋಗ್ಯಾಧಿಕಾರಿಗಳು ಇತ್ತೀಚಿನ ಸಚಿವರ ಕೆಡಿಪಿ ಸಭೆಯಲ್ಲಿ ಮಾಹಿತಿ ನೀಡಿದ್ದರು. ತಾಲೂಕಿನಲ್ಲಿ ಪ್ರಸ್ತುತ ಎಚ್1ಎನ್1 ಏಳು ಜನರಿಗೆ, ಇಲಿಜ್ವರ 4 ಜನರಿಗೆ ಹಾಗೂ ಡೆಂಘೀ 5 ಜನರಿಗೆ ಬಂದಿದ್ದು ಎಲ್ಲರೂ ಗುಣಮುಖರಾಗುತ್ತಿದ್ದಾರೆ. ತಾಲೂಕಿನಲ್ಲಿ ವಿವಿಧ ರೀತಿಯ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇದನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳುವ ಜತೆಗೆ ಸಾರ್ವಜನಿಕರಲ್ಲಿ ಸೂಕ್ತ ಜಾಗೃತಿ ಮೂಡಿಸುತ್ತಿದೆ.
ಡಿ.ಕೆ.ಸುರೇಶ್ ಸೋಲಿಂದ ಕ್ಷೇತ್ರದ ಜನರಿಗೆ ಪಶ್ಚಾತ್ತಾಪ: ಶಾಸಕ ಎಚ್.ಸಿ.ಬಾಲಕೃಷ್ಣ
ಜ್ವರ, ಮೈಕೈ ನೋವು, ತಲೆ ನೋವು,ಕೆಮ್ಮು, ಜ್ವರ ಸೇರಿದಂತೆ ಯಾವುದೇ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಂಡರೂ ತಕ್ಷಣ ಆಸ್ಪತ್ರೆಗೆ ತೆರಳಿ ವೈದ್ಯರಲ್ಲಿ ತಪಾಸಣೆ ಮಾಡಿಸಿಕೊಳ್ಳುವುದು ತೀರಾ ಅಗತ್ಯವಾಗಿದೆ. ಜ್ವರ ಬಂದವರು ಆಸ್ಪತ್ರೆಗೆ ಹೋಗದೇ ಮನೆಯಲ್ಲೇ ಇದ್ದು ಇದರ ಬಗ್ಗೆ ನಿರ್ಲಕ್ಷ್ಯ ಮಾಡಬೇಡಿ ಎಂದು ವೈದ್ಯರು ತಿಳಿಸಿದ್ದಾರೆ.