ರಾಜ್ಯ ಸರ್ಕಾರದ ವಿರುದ್ಧ ಹೋರಾಟ: ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್‌ಗೆ ಶಾಕ್..!

Suvarna News   | Asianet News
Published : May 20, 2020, 11:36 AM ISTUpdated : May 20, 2020, 12:52 PM IST
ರಾಜ್ಯ ಸರ್ಕಾರದ ವಿರುದ್ಧ ಹೋರಾಟ: ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್‌ಗೆ ಶಾಕ್..!

ಸಾರಾಂಶ

ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡಲು ಅನುಮತಿ ನಿರಾಕರಣೆ| ಭದ್ರತಾ ದೃಷ್ಟಿಯಿಂದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡದಂತೆ ಪೊಲೀಸರ ಸೂಚನೆ| ಬ್ಯಾರಿಕೇಡ್‌ಗಳಿಗೆ ಸೂಚನಾ ಪತ್ರವನ್ನ ಅಂಟಿಸಿದ ಪೊಲೀಸರು|

ಬೆಂಗಳೂರು(ಮೇ.20): ಮಾರಕ ಕೊರೋನಾ ನಿರ್ವಹಣೆಯಲ್ಲಾದ ವಿಫಲ ಹಾಗೂ ಇತ್ತೀಚಿನ ಎಪಿಎಂಸಿ ಸುಗ್ರೀವಾಜ್ಞೆಯಂಹ ರಾಜ್ಯ ಸರ್ಕಾರದ ಕ್ರಮಗಳ ವಿರುದ್ಧ ಹೋರಾಟ ಸಂಘಟಿಸುವ ಉದ್ದೇಶದಿಂದ ಇಂದು(ಬುಧವಾರ) ವಿಧಾನಸೌಧದ ಎದುರು ಪ್ರತಿಭಟನೆಗೆ ಮುಂದಾಗಿದ್ದ ಕಾಂಗ್ರೆಸ್‌ಗೆ ಪೊಲೀಸರು ಶಾಕ್‌ ಕೊಟ್ಟಿದ್ದಾರೆ.

"

ವಿಧಾನಸೌಧದ ಮುಂಭಾಗ ಗಾಂಧಿ ಪ್ರತಿಮೆ ಬಳಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾಂಗ್ರೆಸ್ ಶಾಸಕರು ಮುಂದಾಗಿದ್ದರು. ಆದರೆ, ಭದ್ರತಾ ದೃಷ್ಟಿಯಿಂದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ಮಾಡದಂತೆ ಪೊಲೀಸರು ಸೂಚನೆ ನೀಡಿದ್ದಾರೆ. ಈ ಸಂಬಂಧ ಬ್ಯಾರಿಕೇಡ್‌ಗಳಿಗೆ ಪೊಲೀಸರು ಸೂಚನಾ ಪತ್ರವನ್ನ ಅಂಟಿಸಿದ್ದಾರೆ.  

'ಕೊರೋನಾ ಹರಡಲು ಪ್ರಧಾನಿ ನರೇಂದ್ರ ಮೋದಿ ಕಾರಣ'

ಪೊಲೀಸರ ಅನುಮತಿ ನಿರಾಕರಣೆ ಮಧ್ಯೆಯೂ ಕಾಂಗ್ರೆಸ್ ಶಾಸಕರು ಪ್ರತಿಭಟನೆಗೆ ಸಿದ್ಧರಾಗಿದ್ದಾರೆ.   ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಶಾಸಕರು, ಪರಿಷತ್ ಸದಸ್ಯರು ಸೇರಿದಣತೆ ಮತ್ತಿತರ ನಾಯಕರು ಆಗಮಿಸಿದ್ದಾರೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ
'ನೀನೇ ಹಿಂದಿಯಲ್ಲಿ ಮಾತಾಡು..' ಕನ್ನಡದಲ್ಲಿ ಮಾತಾಡು ಎಂದ ಗ್ರಾಹಕನಿಗೆ ಹಿಂದಿವಾಲಾನ ದುರಹಂಕಾರ ನೋಡಿ ಹೇಗಿದೆ!