ಕಂಡಕ್ಟರ್‌ ಮೇಲೆ ಹಲ್ಲೆ ಎಸಗಿದವರನ್ನು ಗಡಿಪಾರು ಮಾಡಿ: ನಾರಾಯಣಗೌಡ ಕಿಡಿ

Published : Feb 26, 2025, 10:35 AM ISTUpdated : Feb 26, 2025, 10:36 AM IST
ಕಂಡಕ್ಟರ್‌ ಮೇಲೆ ಹಲ್ಲೆ ಎಸಗಿದವರನ್ನು ಗಡಿಪಾರು ಮಾಡಿ: ನಾರಾಯಣಗೌಡ ಕಿಡಿ

ಸಾರಾಂಶ

ರಾಜ್ಯದ ಗಡಿಭಾಗದಲ್ಲಿ ಮರಾಠಿ ಪುಂಡರು ನಡೆಸುತ್ತಿರುವ ದಾದಾಗಿರಿ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದು, ಬೆಳಗಾವಿಯಲ್ಲಿ ಮಂಗಳವಾರ ನಾರಾಯಣಗೌಡರ ನೇತೃತ್ವದಲ್ಲಿ ಕರವೇ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಯಿತು. 

ಬೆಳಗಾವಿ/ಬೆಂಗಳೂರು (ಫೆ.26): ರಾಜ್ಯದ ಗಡಿಭಾಗದಲ್ಲಿ ಮರಾಠಿ ಪುಂಡರು ನಡೆಸುತ್ತಿರುವ ದಾದಾಗಿರಿ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದು, ಬೆಳಗಾವಿಯಲ್ಲಿ ಮಂಗಳವಾರ ನಾರಾಯಣಗೌಡರ ನೇತೃತ್ವದಲ್ಲಿ ಕರವೇ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ ನಡೆಯಿತು. ಇದೇ ವೇಳೆ, ನಗರದ ಚನ್ನಮ್ಮ ವೃತ್ತದ ಬಳಿ ಪ್ರವೀಣ್‌ ಶೆಟ್ಟಿ ಬಣದ ಕರವೇ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆದು, ಆಕ್ರೋಶ ವ್ಯಕ್ತಪಡಿಸಿದರು. ಈ ಮಧ್ಯೆ, ಕನ್ನಡಿಗರ ಮೇಲೆ ಮರಾಠಿ ಪುಂಡರು ನಡೆಸುತ್ತಿರುವ ದೌರ್ಜನ್ಯ ಖಂಡಿಸಿ ಬಾಗಲಕೋಟೆ, ಬೇಲೂರು, ಗಂಗಾವತಿ ಸೇರಿ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು.

ಮಂಗಳವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸಿದ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ, ಹಲ್ಲೆಗೊಳಗಾಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಂಡಕ್ಟರ್ ಮಹಾದೇವಪ್ಪ ಹುಕ್ಕೇರಿಯವರ ಆರೋಗ್ಯ ವಿಚಾರಿಸಿದರು. ಈ ವೇಳೆ ದಾಳಿ ಘಟನೆ ನೆನೆದು ಕಣ್ಣೀರಿಟ್ಟ ಮಹಾದೇವಪ್ಪ ಅವರ ಕಣ್ಣೀರು ಒರೆಸಿ, ಅವರಿಗೆ ಧೈರ್ಯ ತುಂಬಿದರು. ನಂತರ, ಚನ್ನಮ್ಮ ವೃತ್ತದಲ್ಲಿ ನಡೆದ ಬೃಹತ್‌ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ನಾರಾಯಣಗೌಡ, ಬಾಳೇಕುಂದ್ರಿಯಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಬೇಕು. ಕರ್ನಾಟಕದಿಂದಲೇ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿದರು.

ಬಜೆಟ್ ಅಧಿವೇಶನ ಮುಗಿದ ಬಳಿಕವಷ್ಟೇ ಬಿಜೆಪಿ ಅಧ್ಯಕ್ಷ ಗೊಂದಲಕ್ಕೆ ತೆರೆ?

ಈ ನೆಲ ರಾಜ್ಯದ ಅವಿಭಾಜ್ಯ ಅಂಗ. ಮಹಾಜನ್ ವರದಿ ಪ್ರಕಾರ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎನ್ನುವುದು ತೀರ್ಮಾನ ಆಗಿದೆ. ಎಂಇಎಸ್ ಪುಂಡ, ಪೋಕರಿಗಳು ಮರಾಠಿ, ಮಹಾರಾಷ್ಟ್ರ ಮುಂದಿಟ್ಟುಕೊಂಡು ದೌರ್ಜನ್ಯ ಮಾಡುತ್ತಿದ್ದು, ಇದಕ್ಕೆ ಅಂತ್ಯ ಕಾಣಲೇ ಬೇಕು ಎಂದು ಕಿಡಿ ಕಾರಿದರು. ಇಲ್ಲಿನ ಆಡಳಿತ ಭಾಷೆ ಕನ್ನಡ. ಕನ್ನಡದ ನೆಲದಲ್ಲಿ ಕನ್ನಡದಲ್ಲೇ ವ್ಯವಹಾರ ಮಾಡಬೇಕು. ಮರಾಠಿ ಕಾಗದ ಪತ್ರ ಕೊಡುವುದಾದರೆ ನೀವು ನಮಗೆ ಬೇಡ. ನೀವು ನಿಮ್ಮಿಷ್ಟದ ರಾಜ್ಯಕ್ಕೆ ವರ್ಗ ಮಾಡಿಕೊಂಡು ಹೋಗಿ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಬಳಿಕ, ಕಮಿಷನರ್‌ ಕಚೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಮುತ್ತಿಗೆ ಕೈಬಿಡುವಂತೆ ಪೊಲೀಸರು ನಾರಾಯಣಗೌಡರ ಮನವೊಲಿಸಿದರು. ಪೊಲೀಸ್‌ ಕಮಿಷನರ್‌ ಯಡಾ ಮಾರ್ಟಿನ್‌ ಮಾರ್ಬನ್ಯಾಂಗ್‌ ಮನವಿ ಸ್ವೀಕರಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ ಬಳಿಕ ಪ್ರತಿಭಟನೆ ಅಂತ್ಯಗೊಳಿಸಲಾಯಿತು.

ರಸ್ತೆ ತಡೆ ನಡೆಸಿ ಆಕ್ರೋಶ: ಇದಾದ ಬಳಿಕ, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದ ಕಾರ್ಯಕರ್ತರು ಚನ್ನಮ್ಮ ವೃತ್ತದಲ್ಲಿ ಜಮಾಯಿಸಿ, ರಸ್ತೆ ತಡೆದು, ಪ್ರತಿಭಟನೆ ನಡೆಸಿದರು. ಬಳಿಕ, ಚಾಲಕನ ಮೇಲೆ ದಾಳಿ ನಡೆಸಿದ ಬಾಳೇಕುಂದ್ರಿ ವೃತ್ತದವರೆಗೆ ರ್‍ಯಾಲಿ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.

ರಾಜ್ಯದ ಇತರೆಡೆಯೂ ಪ್ರತಿಭಟನೆ: ಈ ಮಧ್ಯೆ, ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು. ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಸೇನೆಯ ಕಾರ್ಯಕರ್ತರು ಹಾಸನ ಜಿಲ್ಲೆ ಬೇಲೂರಿನ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ, ಬಾಗಲಕೋಟೆ, ಗಂಗಾವತಿ ಸೇರಿ ರಾಜ್ಯದ ಇತರೆಡೆಯೂ ಪ್ರತಿಭಟನೆಗಳು ನಡೆದವು.

ಗಿರಕಿ ಹೊಡೆಯೋರಿಗಿಲ್ಲ, ಕೆಲಸ ಮಾಡುವವರಿಗಷ್ಟೇ ಸ್ಥಾನ: ಡಿ.ಕೆ.ಶಿವಕುಮಾರ್

ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎನ್ನುವುದು ತೀರ್ಮಾನ ಆಗಿದೆ. ಎಂಇಎಸ್ ಪುಂಡ, ಪೋಕರಿಗಳು ಮರಾಠಿ, ಮಹಾರಾಷ್ಟ್ರ ಮುಂದಿಟ್ಟುಕೊಂಡು ದೌರ್ಜನ್ಯ ಮಾಡುತ್ತಿದ್ದು, ಇದಕ್ಕೆ ಅಂತ್ಯ ಕಾಣಲೇ ಬೇಕು. ಇಲ್ಲಿನ ಆಡಳಿತ ಭಾಷೆ ಕನ್ನಡ. ಕನ್ನಡದ ನೆಲದಲ್ಲಿ ಕನ್ನಡದಲ್ಲೇ ವ್ಯವಹಾರ ಮಾಡಬೇಕು.
-ನಾರಾಯಣ ಗೌಡ, ಕರವೇ ರಾಜ್ಯಧ್ಯಕ್ಷ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!