
ಬೆಂಗಳೂರು: ಕರ್ನಾಟಕದ ಡಿಸಿಎಂ ಜಿ. ಪರಮೇಶ್ವರ್ ಅವರು ಇದ್ದಕ್ಕಿದ್ದಂತೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಚಿಕಿತ್ಸೆಗಾಗಿ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಹೃದಯಾಘಾತವಾಗಿದೆ ಎಂಬ ಪ್ರಾಥಮಿಕ ಮಾಹಿತಿಗಳು ಹೊರಬಿದ್ದ ಬೆನ್ನಲ್ಲೇ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಸಚಿವರ ಆರೋಗ್ಯ ವಿಚಾರಿಸಿದ್ದಾರೆ. ಸದ್ಯ ವೈದ್ಯರ ತಂಡವು ಅವರ ಆರೋಗ್ಯ ಸ್ಥಿತಿಯನ್ನು ತೀವ್ರವಾಗಿ ಮೇಲ್ವಿಚಾರಣೆ ಮಾಡುತ್ತಿದ್ದು, ಚಿಕಿತ್ಸೆ ಮುಂದುವರಿದಿದೆ.
ಬ್ಯಾಡ್ಮಿಂಟನ್ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ DCM ಜಿ. ಪರಮೇಶ್ವರ್ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಉಂಟಾದಾಗ, ಜೊತೆಯಲ್ಲಿದ್ದ MLC ಗೋವಿಂದರಾಜು ಅವರು ಸಮಯಪ್ರಜ್ಞೆ ಮೆರೆದು ಅವರ ಪ್ರಾಣ ಉಳಿಸಿದ್ದಾರೆ. ಪರಮೇಶ್ವರ್ ಅವರ ಆರೋಗ್ಯ ಹದಗೆಡುತ್ತಿದ್ದಂತೆಯೇ ಗೋವಿಂದರಾಜು ಅವರು ತಕ್ಷಣವೇ ಅವರನ್ನು ವೈದೇಹಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಗೋಲ್ಡನ್ ಅವರ್‌ನಲ್ಲೇ ಆಸ್ಪತ್ರೆ ತಲುಪಿದ್ದರಿಂದ ತಕ್ಷಣವೇ ಸ್ಪಂದಿಸಿದ ಆಸ್ಪತ್ರೆ ಸಿಬ್ಬಂದಿ ಮತ್ತು ವೈದ್ಯರು ಎದೆ ಬಡಿತವನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅವರ ಹಾರ್ಟ್ ರೇಟ್ 250 ದಾಟಿರುವುದು ಕಂಡುಬಂದಿದ್ದು, ವೈದ್ಯರು ತಕ್ಷಣವೇ ಶಾಕ್ ಥೆರಪಿ ನೀಡಿ ಮತ್ತು ಇಂಜೆಕ್ಷನ್ ನೀಡುವ ಮೂಲಕ ಹಾರ್ಟ್ ರೇಟ್ ಅನ್ನು ಹತೋಟಿಗೆ ತಂದು ಅಪಾಯದಿಂದ ಪಾರು ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ