
ರಾಯಚೂರು (ಅ.21): ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬುಧವಾರ ಮಂತ್ರಾಲಯದ ಪ್ರವಾಸ ಕೈಗೊಳ್ಳಲಿದ್ದಾರೆ. ಬುಧವಾರ ಮಂತ್ರಾಲಯದ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ ಬಳಿಕ ಗ್ರಾಮದೇವತೆ ಮಂಚಾಲಮ್ಮರಿಗೆ ವಿಶೇಷ ಪೂಜೆ ನೆರವೇರಿಸಲಿದ್ದಾರೆ ಎಂದು ತಿಳಿದುಬಂದಿದೆ.
ಗುರುರಾಯರ ಮೂಲಬೃಂದಾವನದ ದರ್ಶನ ಪಡೆಯಲಿದ್ದಾರೆ. ಅಲ್ಲಿಂದ ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದಲ್ಲಿರುವ ರಾಯರ ಜಪದಕಟ್ಟೆಗೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ, ಗಾಣಧಾಳಕ್ಕೆ ಬಂದು ಪಂಚಮುಖಿ ಆಂಜನೇಯ್ಯ ಸ್ವಾಮಿಗಳ ದರ್ಶನ ಪಡೆದು, ಪೂಜೆ ನೆರವೇರಿಸಲಿದ್ದಾರೆ.
ಇದನ್ನೂ ಓದಿ: ಹಾಸನಾಂಬ ದರ್ಶನ: ಒಂದೇ ದಿನ, 11 ಗಂಟೆಯಲ್ಲಿ 3.10 ಲಕ್ಷ ಜನ ದರ್ಶನ, ಸಚಿವ ಕೃಷ್ಣ ಬೈರೇಗೌಡ ಮನವಿ ಮಾಡಿದ್ದೇನು?
ಮಧ್ಯಾಹ್ನ ಪಂಚಮುಖಿಯಲ್ಲಿ ರಾಯಚೂರು ಗ್ರಾಮೀಣ ಬ್ಲಾಕ್ ನ ಹೊಸ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅಲ್ಲಿಂದ ಮರಳಿ ಮಂತ್ರಾಲಯಕ್ಕೆ ತೆರಳಿ, ವಿಶ್ರಾಂತಿ ಪಡೆಯಲಿದ್ದಾರೆ. ಸಂಜೆ ಯಶವಂತಪುರ ರೈಲಿನಲ್ಲಿ ಬೆಂಗಳೂರಿಗೆ ಹೊರಡಲಿದ್ದಾರೆ ಎಂದು ಡಿಸಿಎಂನ ಹೆಚ್ಚುವರಿ ಖಾಸಗಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ