ಡಿ.ಕೆ. ಶಿವಕುಮಾರ್‌ಗೆ ಬಿಗ್ ರಿಲೀಫ್‌ ಕೊಟ್ಟ ಹೈಕೋರ್ಟ್‌

By Sathish Kumar KH  |  First Published Jul 14, 2023, 6:02 PM IST

ಮೇಕೆದಾಟು ಯೋಜನೆ ಜಾರಿಗಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದ ಡಿ.ಕೆ. ಶಿವಕುಮಾರ್‌ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್‌ ರದ್ದುಗೊಳಿಸಿದೆ.


ಬೆಂಗಳೂರು (ಜು.14): ಕರ್ನಾಟಕ ವಿಧಾನಸಭಾ ಚುನಾವಣೆಗೂ ಮುಮಚಿತವಾಗಿ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಆಯೋಜನೆ ಮಾಡಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ವಿರುದ್ಧ ಕೋವಿಡ್‌ ನಿಯಮ ಉಲ್ಲಂಘನೆ ಕುರಿತು ಎಫ್‌ಐಆರ್‌ ದಾಖಲಿಸಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್‌ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರ ಮೇಲೆ ದಾಖಲಾಗಿದ್ದ ಎಫ್‌ಐಆರ್‌ ರದ್ದುಗೊಳಿಸಿ ಆದೇಶ ಹೊರಡಿಸಿದೆ. ಈ ಮೂಲಕ ಡಿಕೆಶಿಗೆ ಈ ಪ್ರಕರಣದಿಂದ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ.

ರಾಜ್ಯದಲ್ಲಿ ವಿವಿಧ ಗ್ಯಾರಂಟಿ ಯೋಜನೆಗಳು ಹಾಗೂ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರ್ಕಾರದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ವಿರುದ್ಧ ನ್ಯಾಯಾಲಯದಲ್ಲಿ ಈಗಾಗಲೇ ಹಲವು ಪ್ರಕರಣಗಳಿವೆ. ಜೊತೆಗೆ, ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕೋವಿಡ್‌ ಸೋಂಕಿನ ಆತಂಕದ ನಡುವೆಯೂ ಕೋವಿಡ್‌-19 ನಿಯಮಾವಳಿಗಳನ್ನು ಮೀರಿ ಪಾದಯಾತ್ರೆ ಮಾಡಲಾಗಿದೆ ಎಂದು ಹೊಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್‌ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಇದರಿಂದ ಸ್ವಲ್ಪ ಕಿರಿಕಿರಿ ಅನುಭವಿಸಿದರೂ ಮೇಕೆದಾಟು ಯೋಜನೆಗಾಗಿ ಪಾದಯಾತ್ರೆಯನ್ನು ಯಶಸ್ವಿಯಾಗಿ ಮಾಡಿ, ಇಡೀ ರಾಜ್ಯದ ಗಮನ ಸೆಳೆದಿದ್ದರು.

Tap to resize

Latest Videos

ದಾಳಿ ಮಾಡಿದ ಚಿರತೆಯನ್ನು ಹೆಡೆಮುರಿಕಟ್ಟಿ ಹಂದಿಮರಿ ರೀತಿ ಹೊತ್ತೊಯ್ದ ಹಾಸನದ ಶೂರ!

ಎಫ್‌ಐಆರ್‌ ರದ್ದುಗೊಳಿಸಿ ಏಕಸದಸ್ಯ ಪೀಠ:  ಇನ್ನು ಮೇಕೆದಾಟು ಯೋಜನೆ ಪಾದಯಾತ್ರೆಯ ವೇಳೆ ಕೋವಿಡ್‌ ನಿಯಮ ಉಲ್ಲಂಘನೆ ಕುರಿತು ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್‌ ದಾಖಲಿಸಲಾಗಿತ್ತು. ಶುಕ್ರವಾರ ಡಿ.ಕೆ.ಶಿವಕುಮಾರ್‌ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ವಿಚಾರಣೆ ಮಾಡಿದ ಹೈಕೋರ್ಟ್ ಏಕಸದಸ್ಯ ಪೀಠವು, ಎಫ್‌ಐಆರ್‌ ರದ್ದುಪಡಿಸಿ ಆದೇಶ ಹೊರಡಿಸಿದೆ. ಈ ಮೂಲಕ ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ವೇಳೆ ದಾಖಲಾಗಿದ್ದ ಕೇಸ್ ರದ್ದುಗೊಂಡಂತಾಗಿದೆ. 

click me!