ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಲಬುರಗಿ ನಗರದ ಬ್ರಹ್ಮಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಕಲಬುರಗಿ (ಜ.20): ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪ ಹಿನ್ನೆಲೆ ನಮೋ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಲಬುರಗಿ ನಗರದ ಬ್ರಹ್ಮಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ರಾಯಚೂರು ಜಿಲ್ಲೆಯಲ್ಲಿ ನಡೆದಿದ್ದ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ್ದ ಸೂಲಿಬೆಲೆ. ಈ ವೇಳೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯನ್ನ ಅಯೋಗ್ಯ ಎಂದು ನಿಂದಿಸಿದ್ದಾರೆಂದು ಆರೋಪಿಸಲಾಗಿದೆ. ಅವಹೇಳನಕಾರಿ ಹೇಳಿಕೆ ಸಂಬಂಧ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವ್ ಗುತ್ತೇದಾರ್ ಸೂಲಿಬೆಲೆ ವಿರುದ್ಧಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಐಪಿಸಿ 153(A), 153(B) ಮತ್ತು 3(2) SC/ST ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿರುವ ಬ್ರಹ್ಮಪುರ ಠಾಣೆ ಪೊಲೀಸರು.
undefined
ಕಾಂಗ್ರೆಸ್ ಮುಸ್ಲಿಂ ಪಾರ್ಟಿಯಾಗಿ ನಿರ್ಮಾಣಗೊಂಡಿದೆ : ಚಕ್ರವರ್ತಿ ಸೂಲಿಬೆಲೆ