ಕರ್ನಾಟಕದಲ್ಲಿ ಗ್ಯಾರಂಟಿಗಳ ಜತೆಗೆ ಅಭಿವೃದ್ಧಿಯನ್ನೂ ಮಾಡಲಾಗುತ್ತಿದೆ: ಸಿಎಂ ಸಿದ್ದರಾಮಯ್ಯ

By Kannadaprabha News  |  First Published Mar 1, 2024, 12:34 PM IST

ಹಿಂದಿನ ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿಲ್ಲ. ಕೇವಲ ಲೂಟಿ ಹೊಡೆದರು. ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಜತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇವೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಕ್ಕಿರುವ ವ್ಯತ್ಯಾಸ ಎಂದು ಕಿಡಿಕಾರಿದ ಮುಖ್ಯಮಂತ್ರಿ ಸಿದ್ದರಾಮಯ್ಯ 


ಬೆಂಗಳೂರು(ಮಾ.01):  ಜಿಡಿಪಿ, ಬಜೆಟ್ ಗಾತ್ರ ಹೆಚ್ಚಳವಾಗಲು ಸಾಧ್ಯವೇ? ಗ್ಯಾರಂಟಿ ಯೋಜನೆಗಳ ಜತೆಗೆ ಅಭಿವೃದ್ಧಿಯನ್ನೂ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ. ಗುರುವಾರ ಪ್ರತಿಪಕ್ಷ ಬಿಜೆಪಿಯ ಗದ್ದಲ, ಸಭಾತ್ಯಾಗದ ನಡುವೆಯೇ ಬಜೆಟ್ ಮೇಲಿನ ಉತ್ತರ ನೀಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿಲ್ಲ. ಕೇವಲ ಲೂಟಿ ಹೊಡೆದರು. ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಜತೆಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದೇವೆ. ಇದು ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರಕ್ಕಿರುವ ವ್ಯತ್ಯಾಸ ಎಂದು ಕಿಡಿಕಾರಿದರು.

ರಾಜ್ಯದ ಜಿಡಿಪಿ 25.63 ಲಕ್ಷ ಕೋಟಿ ರು. ಇತ್ತು. 2024-25ಕ್ಕೆ 28.09 ಲಕ್ಷ ಕೋಟಿ ರು. ಆಗುವ ನಿರೀಕ್ಷೆ ಇದೆ. ಅಭಿವೃದ್ಧಿ ಇಲ್ಲದೆ ಆಯ ವ್ಯಯ ಗಾತ್ರ ಹಾಗೂ ಜಿಡಿಪಿ ಹೆಚ್ಚಳವಾಗಲು  ಸಾಧ್ಯವೇ? ಪ್ರತಿಪಕ್ಷದವರು ಅಭಿವೃದ್ಧಿ ಶೂನ್ಯ ಎಂದಿದ್ದಾರೆ.ಒಟ್ಟು ಅಭಿವೃದ್ಧಿಕಾಠ್ಯಕ್ರಮಗಳಿಗೆ 1.20 ಲಕ್ಷಕೋಟಿ ರು. ಹಂಚಿಕೆ ಮಾಡಲಾಗಿದೆ. 52,009 ಕೋಟಿ ರು. ಗ್ಯಾರಂಟಿ ಯೋಜನೆ ಗಳಿಗೆ ಮೀಸಲಿರಿಸಿದ್ದು, ಉಳಿದ ಮೊತ್ತ ಅಭಿ ವೃದ್ಧಿ ಕಾರ್ಯಗಳಿಗೆ ಹಂಚಿಕೆ ಮಾಡಲಾಗಿದೆ. ಪ್ರತಿಪಕ್ಷದವರು ಮಾಡಿರುವ ಆಪಾದನೆ ಸತ್ಯಕ್ಕೆ ದೂರವಾದದ್ದು ಎಂದು ಟೀಕಿಸಿದರು. ಮತ ದಾರರು ಬಿಜೆಪಿಯವರನ್ನು ತಿರಸ್ಕರಿಸಿದ್ದು, ರಾಜ್ಯದ ಜನತೆಯ ಪೂರ್ಣ ಆಶೀರ್ವಾದ ದೊಂದಿಗೆ ಅಧಿಕಾರ ಮಾಡಲಿಲ್ಲ ಎಂದರು.

Tap to resize

Latest Videos

ಕೇಂದ್ರದ ಪರಿಸರ ಮಂಡಳಿ ಅನುಮತಿ ನೀಡಿದ್ರೆ ನಾಳೆಯಿಂದಲೇ ಕಳಸಾ ಬಂಡೂರಿ ಕಾಮಗಾರಿ ಆರಂಭ: ಸಿಎಂ ಸಿದ್ದು

ಇದಕ್ಕೆ ಕಾರಣ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಇತರರು. ಇವರು ಯಾವತ್ತೂ ಮುಂಬಾಗಿಲಿನಿಂದ ಅಧಿಕಾರಕ್ಕೆ ಬರಲಿಲ್ಲ. ಬಿಜೆಪಿಯವರಿಗೆ ಜನರ ಆಶೀ ರ್ವಾದ ಪಡೆಯುವ ಯೋಗ್ಯತೆ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟದ್ದು ಕಾಂಗ್ರೆಸ್ ಆಗಿದ್ದು, ಬಿಜೆಪಿಯವರು ನಮಗೆ ದೇಶಭಕ್ತಿ ಪಾಠ ಹೇಳಿ ಕೊಡಲು ಬರುತ್ತಾರೆ ಎಂದರು.

ಸ್ವಾತಂತ್ರ್ಯಕ್ಕಾಗಿ ಆರ್‌ಎಸ್‌ಎಸ್ ಹೋರಾಡಿಲ್ಲ

ವಿಧಾನಸಭೆ: ಸ್ವಾತಂತ್ರ್ಯ ಹೋರಾಟ ತೀವ್ರಗೊಂಡಾಗಲೂ ಆರ್‌ಎಸ್‌ಎಸ್‌ನ ಹೆಡಗೇವಾರ್ ಆಗಿ, ಗೋಳ್ವಾಲ್ಕರ್ ಆಗಲಿ ಪಾಲ್ಗೊಂಡಿಲ್ಲ. ಧರ್ಮ ಹೆಸರಲ್ಲಿ ದೇಶ ಮತ್ತು ಸಮಾಜವನ್ನು ಒಡೆ ವವರು ಬಿಜೆಪಿಯವರು ಎಂದು ಸಿಎಂ ಸಿದ್ದರಾಮಯ್ಯ ಆಪಾದಿಸಿ ದ್ದಾರೆ. ಆರ್‌ಎಸ್‌ಎಸ್‌ನವರಿಗೆ ಹೋರಾಟದಲ್ಲಿ ಭಾಗವಹಿಸಿ ಗೊತ್ತಿಲ್ಲ. ಬಿಜೆಪಿಯಿಂದ ನಾವು ದೇಶಭಕ್ತಿಯ ಪಾಠ ಕಲಿಬೇಕಾದ ಅಗತ್ಯ ಇಲ್ಲ ಎಂದರು.

click me!