ಧರ್ಮಸ್ಥಳ ಪ್ರಕರಣಕ್ಕೆ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಎಂಟ್ರಿ: ತನಿಖೆಗೆ ಹೊಸ ತಿರುವು!

Published : Aug 11, 2025, 12:53 PM IST
NHRC

ಸಾರಾಂಶ

ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಎಂಟ್ರಿಯಿಂದ ಧರ್ಮಸ್ಥಳ ಕೇಸ್‌ನಲ್ಲಿ ಏನೇನಾಗುತ್ತೆ ಗೊತ್ತಾ?

ಮಂಗಳೂರು (ಆ.11): ಧರ್ಮಸ್ಥಳ ಶವ ಹೂತ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ರಾಷ್ಟ್ರೀಯ ಮಾನವ ಹಕ್ಕು ಆಯೋಗ ಎಂಟ್ರಿಯಾಗಿದೆ. ರಾಷ್ಟ್ರೀಯ ಮಾನವ ಹಕ್ಕು ಆಯೋಗದ ಎಂಟ್ರಿಯಿಂದ ಧರ್ಮಸ್ಥಳ ಕೇಸ್‌ನಲ್ಲಿ ಏನೇನಾಗುತ್ತೆ ಗೊತ್ತಾ? ರಾಷ್ಟ್ರೀಯ ಮಾನವ ಹಕ್ಕು ಆಯೋಗ ತನಿಖೆ ಮೇಲ್ವಿಚಾರಣೆ, ಹಕ್ಕು ಉಲ್ಲಂಘನೆ ಪರಿಶೀಲನೆ ಹಾಗೂ ವರದಿ ಸಿದ್ಧಪಡಿಸುವ ಸಾಧ್ಯತೆಯಿದ್ದು, ಪೊಲೀಸರಿಂದ, ಅಧಿಕಾರಿಗಳಿಂದ ಅಥವಾ ತನಿಖಾ ಪ್ರಕ್ರಿಯೆಯಲ್ಲಿ ಮಾನವ ಹಕ್ಕು ಉಲ್ಲಂಘನೆಯ ಆರೋಪ ಬಂದಿದ್ದರೆ ಪರಿಶೀಲನೆ ಮಾಡಲಾಗುತ್ತದೆ. ಎಸ್ಐಟಿ ತನಿಖೆ ನ್ಯಾಯಸಮ್ಮತ, ಕಾನೂನುಬದ್ಧ ಮತ್ತು ನಿಷ್ಪಕ್ಷಪಾತವಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಯಲಿದ್ದು, ಅಗತ್ಯ ದಾಖಲೆಗಳು, ಸಾಕ್ಷಿಗಳ ಹೇಳಿಕೆಗಳು, ತನಿಖಾ ವರದಿಗಳ ಪ್ರಗತಿ ಪರಿಶೀಲಿಸಬಹುದು.

ಸಾಕ್ಷಿದಾರರಿಗೆ ಬೆದರಿಕೆ, ಹಿಂಸೆ ಅಥವಾ ಒತ್ತಡ ಬಂದಿದೆಯೇ ಎಂದು ವಿಚಾರಣೆ ಮಾಡುವ ಸಾಧ್ಯತೆಯೂ ಇದೆ. ಆಕಸ್ಮಾತ್ ಬಂದಿದ್ದರೆ ಅನಾಮಿಕನ ರಕ್ಷಣೆಗೆ ಸಂಬಂಧಿಸಿದ ಸೂಚನೆ ನೀಡಬಹುದು. ಅಗತ್ಯವಿದ್ದರೆ ಪ್ರಕರಣಕ್ಕೆ ಸಂಬಂಧಿಸಿದ ಸ್ಥಳಕ್ಕೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನು ನೋಡುವ ಅಧಿಕಾರ ಇದೆ. ತನಿಖೆಯ ನಿರ್ದಿಷ್ಟ ಹಂತದಲ್ಲಿ ತ್ವರಿತ ಕ್ರಮ, ವಿಳಂಬ ತಡೆ ಅಥವಾ ಫಾರೆನ್ಸಿಕ್ ಪರೀಕ್ಷೆ ವೇಗಗೊಳಿಸಲು ಸಲಹೆ/ಸೂಚನೆ ನೀಡಬಹುದು. ಪರಿಶೀಲನೆಯ ನಂತರ ಕೇಂದ್ರ ಅಥವಾ ರಾಜ್ಯ ಸರ್ಕಾರಕ್ಕೆ ಶಿಫಾರಸುಗಳನ್ನು ಕಳುಹಿಸುವ ಸಾಧ್ಯತೆಯಿದೆ.

Protection of Human Rights Act, 1993 ಪ್ರಕಾರ ಪ್ರಕರಣದಲ್ಲಿ ಸತ್ಯಾಂಶವಿದೆ ಎಂದರೆ ಸ್ವತಂತ್ರ ತನಿಖೆ ಸಾಧ್ಯತೆಯಿದ್ದು, ಅಥವಾ ಪ್ರಸ್ತುತ ತನಿಖೆಗೆ ಮೇಲ್ವಿಚಾರಣೆ ಮಾಡಲು ಸಂಪೂರ್ಣ ಅಧಿಕಾರ ಇರುತ್ತದೆ. ಪ್ರಕರಣವು ಮಾನವ ಹಕ್ಕು ಉಲ್ಲಂಘನೆ ವ್ಯಾಪ್ತಿಗೆ ಬರುವುದೇ? ಎಂದು ಮಾಹಿತಿ ಸಂಗ್ರಹವನ್ನು ಮಾಡಲಾಗುವುದು. ಇದರಲ್ಲಿ ಸತ್ಯಾಂಶ ಕಂಡುಬಂದರೆ ತನಿಖೆಗೆ ಅನುಮತಿ ನೀಡಿ ತನಿಖೆ ನಡೆಸಲು NHRC ತನಿಖಾ ವಿಭಾಗ ನೇಮಕ ಮಾಡಲಾಗುವುದು. ಅಥವಾ ಪ್ರಸ್ತುತ ಎಸ್ಐಟಿ ತನಿಖೆಗೆ ಮೇಲ್ವಿಚಾರಣೆ ಆರಂಭಿಸುವ ಸಾಧ್ಯತೆಯಿದೆ.

ಧರ್ಮಸ್ಥಳ ಗ್ರಾಮ ಘರ್ಷಣೆ ಪ್ರಕರಣ: ಧರ್ಮಸ್ಥಳ ಗ್ರಾಮದ ಪಾಂಗಳ ಕ್ರಾಸ್‌ನಲ್ಲಿ ಆ.6ರಂದು ಸಂಜೆ ಯೂಟ್ಯೂಬರ್ ಮೇಲೆ ನಡೆದ ಹಲ್ಲೆ ಹಾಗೂ ಪಾಂಗಳ ಕ್ರಾಸ್ ನಲ್ಲಿ ನಡೆದ ಘರ್ಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಸ್ಥಳೀಯ ನಿವಾಸಿಗಳಾದ ಪದ್ಮಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಬಂಧಿತರು. ಇವರನ್ನು ಶ‌ನಿವಾರ ರಾತ್ರಿ ಬಂಧಿಸಿ, ಬೆಳ್ತಂಗಡಿ ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು.

ನ್ಯಾಯಾಧೀಶರು 6 ಮಂದಿಗೂ ಮಧ್ಯಂತರ ಜಾಮೀನು ನೀಡಿದ್ದು, ಸೋಮವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಲು ಆದೇಶಿಸಿದ್ದಾರೆ. ಆ.6ರಂದು ಸಂಜೆ ಧರ್ಮಸ್ಥಳ ಗ್ರಾಮ ಕೇಸ್‌ ಸಂಬಂಧ ವರದಿ ಮಾಡಲು ಹೋಗಿದ್ದ ಯೂಟ್ಯೂಬರ್ ಮೇಲೆ ಪಾಂಗಳ ಕ್ರಾಸ್‌ನಲ್ಲಿ ಹಲ್ಲೆ ನಡೆಸಲಾಗಿತ್ತು. ಬಳಿಕ, ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿತ್ತು. ಈ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿಕೊಂಡು, 27 ಮಂದಿಯ ವಿರುದ್ಧ ಕೇಸ್‌ ದಾಖಲಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸ್ತ್ರಿರೋಗ ತಜ್ಞೆ, ಪುತ್ರನ ದುರಂತ ಅಂತ್ಯ, ರಾತ್ರಿ ಜಗಳವಾಡಿದ ಇಬ್ಬರು ಬೆಳಗ್ಗೆ ಶವವಾಗಿ ಪತ್ತೆ
ಶ್ರೀರಂಗಪಟ್ಟಣ ಮಸೀದಿ ಕೆಡವುತ್ತೇವೆಂದರೆ? ನಾವು ಕೈಗೆ ಬಳೆ ತೊಟ್ಟು ಕೂತಿಲ್ಲ-ಅಬ್ದುಲ್ ರಜಾಕ್!