ಧರ್ಮಸ್ಥಳ ಬುರುಡೆ ಪ್ರಕರಣ: ಕೇರಳ ಸಂಸದ ಸಂತೋಷ್ ಕುಮಾರ್‌ಗೂ ಸಂಕಷ್ಟ?

Published : Sep 07, 2025, 12:23 PM IST
Kerala MP Santhosh Kumar

ಸಾರಾಂಶ

ಧರ್ಮಸ್ಥಳ ಗ್ರಾಮ ಬುರುಡೆ ರಹಸ್ಯ ಪ್ರಕರಣದಲ್ಲಿ ಕೇರಳ ಕಮ್ಯುನಿಸ್ಟ್ ಪಕ್ಷದ ಸಂಸದರೊಬ್ಬರಿಗೆ ಸಂಕಷ್ಟ ಎದುರಾಗಿದೆ. ಕೇರಳ ಸಂಸದ ಸಂತೋಷ್ ಕುಮಾರ್ ಅವರನ್ನು ಬುರುಡೆ ಟೀಂ ಭೇಟಿ ಮಾಡಿತ್ತು.

ಮಂಗಳೂರು (ಸೆ.07): ಧರ್ಮಸ್ಥಳ ಗ್ರಾಮ ಬುರುಡೆ ರಹಸ್ಯ ಪ್ರಕರಣದಲ್ಲಿ ಕೇರಳ ಕಮ್ಯುನಿಸ್ಟ್ ಪಕ್ಷದ ಸಂಸದರೊಬ್ಬರಿಗೆ ಸಂಕಷ್ಟ ಎದುರಾಗಿದೆ. ಕೇರಳ ಸಂಸದ ಸಂತೋಷ್ ಕುಮಾರ್ ಅವರನ್ನು ಬುರುಡೆ ಟೀಂ ಭೇಟಿ ಮಾಡಿತ್ತು. ಬುರುಡೆ ತಂಡದ ಆರೋಪಿ ಚಿನ್ನಯ್ಯ ಅಲ್ಲದೆ, ಗಿರೀಶ್ ಮಟ್ಟಣ್ಣವರ್ ಹಾಗೂ ಜಯಂತ್‌, ಸಂತೋಷ್‌ ಕುಮಾರ್‌ ಅವರನ್ನು ಬುರುಡೆ ಜೊತೆ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಹೀಗಾಗಿ ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನ ಪಾತ್ರದ ಬಗ್ಗೆ ಎಸ್‌ಐಟಿಗೆ ಮಾಹಿತಿ ದೊರೆತಿದೆ. ಈ ವಿಚಾರವನ್ನು ಬುರುಡೆ ಟೀಂ ವಿಚಾರಣೆ ವೇಳೆ ಬಾಯಿಬಿಟ್ಟಿತ್ತು.

ಈ ಹಿನ್ನೆಲೆಯಲ್ಲಿ ಸಂತೋಷ್‌ ಕುಮಾರ್‌ ವಿಚಾರಣೆ ಬಗ್ಗೆ ಎಸ್ಐಟಿ ಚಿಂತನೆ ನಡೆಸಿದೆ.ಎನ್‌ಐಎಗೆ ಪತ್ರ ಬರೆದಿದ್ದ ಸಂಸದ: ಜುಲೈನಲ್ಲೇ ಕೇರಳ ಸಂಸದನ ಸಂದರ್ಶನವನ್ನು ಕುಡ್ಲ ರಾಂಪೇಜ್ ಯೂಟ್ಯೂಬರ್ ನಡೆಸಿದ್ದ. ಇದರಿಂದಾಗಿ ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದ ಬಗ್ಗೆ ಸಂಸದ ಸಂತೋಷ್‌ ಅತೀವ ಆಸಕ್ತಿ ಹೊಂದಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್‌ಐಟಿಗೆ ವಹಿಸುವ ಮೊದಲೇ ಅವರ ಸಂದರ್ಶನ ನಡೆಸಲಾಗಿತ್ತು. ಕೇರಳದಲ್ಲಿ ಬುರುಡೆ ತಂಡವನ್ನು ಭೇಟಿಯಾದ ವೇಳೆ ಸಂಸದ ಯೂಟ್ಯೂಬ್‌ಗೆ ಸಂದರ್ಶನ ನೀಡಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕೇರಳ ಸಂಸದನ ಸಂದರ್ಶನ ಜುಲೈ 17ರಂದು ಕುಡ್ಲ ರಾಂಪೇಜ್ ಯೂಟ್ಯೂಬ್‌ನಲ್ಲಿ ಪ್ರಸಾರವಾಗಿತ್ತು. ಬುರುಡೆ ಪ್ರಕರಣದ ಬಗ್ಗೆ ಸಂದರ್ಶನದ ಬಗ್ಗೆ ಸಂತೋಷ್‌ ವಿವರವಾಗಿ ಮಾತನಾಡಿದ್ದರು ಎಂಬುದು ಎಸ್‌ಐಟಿ ನಡೆಸಿದ ಚಿನ್ನಯ್ಯನ ವಿಚಾರಣೆ ವೇಳೆ ಪತ್ತೆಯಾಗಿತ್ತು. ಯುಟ್ಯೂಬ್‌ಗೆ ಸಂದರ್ಶನ ನಡೆಸಿದ ಬಳಿಕ ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣವನ್ನು ಎನ್​ಐಎಗೆ ವಹಿಸುವಂತೆ ಸಿಪಿಎಂ ಸಂಸದ ಸಂತೋಷ್‌ ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಪತ್ರ ಕೂಡ ಬರೆದು ಆಗ್ರಹಿಸಿದ್ದರು. ಆಗ ಕರ್ನಾಟಕ ಸರ್ಕಾರ ಆರಂಭದಲ್ಲಿ ಎಸ್ಐಟಿ ರಚಿಸಿಲ್ಲ ಎಂದು ಆಕ್ಷೇಪ ಎತ್ತಿದ್ದರು. ಅನಾಮಿಕ ಚಿನ್ನಯ್ಯ ಕೋರ್ಟ್‌ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಸಂಸದ ಸಂತೋಷ್ ಕುಮಾರ್ ಪತ್ರ ಬರೆದಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿಎಂ ಕುರ್ಚಿ ಪೈಪೋಟಿಯಲ್ಲಿ ರೈತ ಸಮಸ್ಯೆ ಗೌಣ: ಬಿ.ವೈ.ವಿಜಯೇಂದ್ರ ಟೀಕೆ
ಕರ್ನಾಟಕದಲ್ಲಿ ಶೇ.63 ಭ್ರಷ್ಟಾಚಾರ: ಸಿಬಿಐ ತನಿಖೆಗೆ ಒತ್ತಾಯಿಸಿದ ಆರ್‌.ಅಶೋಕ್‌